Asianet Suvarna News Asianet Suvarna News

ಬಾಬ್ರಿ ಮಸೀದಿ ಧ್ವಂಸಕ್ಕೆ 31 ವರ್ಷ, ಅಯೋಧ್ಯೆಯಲ್ಲಿ ಬಿಗಿ ಭದ್ರತೆ!

ಬಾಬ್ರಿ ಮಸೀದಿ ಧ್ವಂಸದ ವಾರ್ಷಿಕೋತವ್ಸದ ಹಿನ್ನಲೆಯಲ್ಲಿ ಸ್ಥಳೀಯ ಆಡಳಿತವು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

Babri Masjid demolition anniversary Security beefed up in Ayodhya san
Author
First Published Dec 6, 2023, 10:51 AM IST

ನವದೆಹಲಿ (ಡಿ.6): ಬಾಬರಿ ಮಸೀದಿ ಧ್ವಂಸಕ್ಕೆ 31 ವರ್ಷವಾದ ಹಿನ್ನಲೆಯಲ್ಲಿ ಸ್ಥಳೀಯ ಆಡಳಿತವು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಡಿಸೆಂಬರ್ 6ಕ್ಕೆ ಅಯೋಧ್ಯೆಯ ರಾಮಮಂದಿರವನ್ನು ಧ್ವಂಸ ಮಾಡಿ ನಿರ್ಮಾಣ ಮಾಡಲಾಗಿದ್ದ ಬಾಬ್ರಿ ಮಸೀದಿಯನ್ನು ಕರಸೇವಕರು ಧ್ವಂಸ ಮಾಡಿ 31 ವರ್ಷ ಪೂರ್ನೊಳ್ಳಲಿದೆ. ಈ ಘಟನೆಯ ನೆನಪಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರುವ ನಿಟ್ಟಿನಲ್ಲಿ ಅಯೋಧ್ಯೆ ಪೊಲೀಸರು ನಗರದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ ಎಂದು ಹೇಳಿದರು.  1992 ರಲ್ಲಿ ಬಾಬರಿ ಮಸೀದಿ ಧ್ವಂಸವು ದೇಶದ ಹಲವಾರು ಭಾಗಗಳಲ್ಲಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ನಗರಕ್ಕೆ ಭೇಟಿ ನೀಡುವ ಮತ್ತು ಬರುವ ಜನರನ್ನು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ ಮತ್ತು ಅವರ ಗುರುತಿನ ಚೀಟಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಇದಲ್ಲದೆ, ಅಧಿಕಾರಿಗಳ ಪ್ರಕಾರ, ಪೊಲೀಸರು ಅಯೋಧ್ಯೆಯ ವಿವಿಧ ಪ್ರದೇಶಗಳಲ್ಲಿ ವಾಹನ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಅಯೋಧ್ಯೆಯ ಎಸ್‌ಎಸ್‌ಪಿ ರಾಜಕರಣ್ ನಯ್ಯರ್, ಜನರು ವದಂತಿಗಳನ್ನು ಹರಡುವುದನ್ನು ಮತ್ತು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವುದನ್ನು ತಡೆಯಬೇಕು ಎಂದು ಹೇಳಿದ್ದಾರೆ.

"ಅಯೋಧ್ಯಾ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟ ಸಿದ್ಧಪಡಿಸಲಾಗಿದೆ ಮತ್ತು ಅವರನ್ನು ವಿವಿಧ ವಲಯಗಳಿಗೆ ತಂಡಗಳಾಗಿ ವಿಂಗಡಿಸಲಾಗಿದೆ. ಹತ್ತಿರದ ಜಿಲ್ಲೆಗಳಿಂದ ಪೊಲೀಸ್ ಪಡೆಗಳನ್ನು ಸಹ ಕರೆಸಲಾಗಿದೆ. ಯುಪಿ ಪೊಲೀಸರ ಪ್ರಾದೇಶಿಕ ಸಶಸ್ತ್ರ ಕಾನ್‌ಸ್ಟಾಬ್ಯುಲರಿ (ಪಿಎಸಿ) ಸಹ ಇಲ್ಲಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು ಸಮಗ್ರ ಪೊಲೀಸ್ ವ್ಯವಸ್ಥೆಯನ್ನು ರಚಿಸಲಾಗಿದೆ, ”ಎಂದು ಅವರು ಹೇಳಿದರು.

"ನಮ್ಮ ಮಾಹಿತಿ ವ್ಯವಸ್ಥೆ ಮತ್ತು ಸಾಮಾಜಿಕ ಮಾಧ್ಯಮ ತಂಡವು ಅಂತಹ ವೇದಿಕೆಗಳ ಮೂಲಕ ಹಂಚಿಕೊಳ್ಳುವ ಯಾವುದೇ ಮಾಹಿತಿಯನ್ನು ಪರಿಶೀಲಿಸುವಲ್ಲಿ ಸಕ್ರಿಯವಾಗಿದೆ ಮತ್ತು ಎಚ್ಚರದಿಂದಿದೆ. ಯಾರೂ ವದಂತಿಗಳನ್ನು ಹರಡಿಸಬೇಕು ಅಥವಾ ಗೊಂದಲ ಸೃಷ್ಟಿಸಲು ಪ್ರಯತ್ನಿಸಬೇಡಿ. ಒಟ್ಟಾರೆಯಾಗಿ, ಅಗತ್ಯಕ್ಕೆ ಅನುಗುಣವಾಗಿ ಪೊಲೀಸ್ ನಿಯೋಜನೆಯನ್ನು ಮಾಡಲಾಗಿದೆ. ಪ್ರಮುಖ ಸ್ಥಳಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ" ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ಆಯೋಧ್ಯೆ ರಾಮಲಲ್ಲಾ ಕೆತ್ತನೆಗೆ ಕರಾವಳಿ ಶಿಲ್ಪಿ ಗಣೇಶ್!

ಡಿಸೆಂಬರ್ 6, 1992 ರಂದು ಅಯೋಧ್ಯೆಯಲ್ಲಿ 'ಕರ ಸೇವಕರ' ದೊಡ್ಡ ಗುಂಪು ಬಾಬ್ರಿ ಮಸೀದಿಯನ್ನು ಕೆಡವಿಹಾಕಿತ್ತು. ಅಯೋಧ್ಯೆ ರಾಮಮಂದಿರದ ಮೇಲೆ ಈ ಮಸೀದಿಯನ್ನು ನಿರ್ಮಾಣ ಮಾಡಲಾಗಿದೆ ಎನ್ನುವ ಕಾರಣ ನೀಡಿ ಮಸೀದಿಯನ್ನು ಧ್ವಂಸ ಮಾಡಿತ್ತು. ನಂತರದ ಘಟನೆಯಲ್ಲಿ ಅಯೋಧ್ಯೆಯಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ನಿವಾಸಿಗಳ ಮೇಲೆ ಹಲ್ಲೆ ಮಾಡಲಾಗಿತ್ತು.  ದೇಶದ ವಿವಿಧ ಭಾಗಗಳಲ್ಲಿ ಗಲಭೆಗಳು ಭುಗಿಲೆದ್ದವು, ಇದರಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ಥಾಯ್ಲೆಂಡ್‌ ಮಣ್ಣು, ಕಾರಣವೇನು?

Latest Videos
Follow Us:
Download App:
  • android
  • ios