ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಭುಗಿಲೆದ್ದ ಹಿಂಸಾಚಾರ, ಥಾಣೆ ಸಂಘರ್ಷದಲ್ಲಿ ಹಲವರಿಗೆ ಗಾಯ!

ನಾಲ್ಕು ವರ್ಷದ ಇಬ್ಬರು ನರ್ಸರಿ ಮಕ್ಕಳಿಗೆ ಲೈಂಗಿಕ ಕಿರುಕುಳ ಘಟನೆಯಿಂದ ಮುಂಬೈನ ಬದ್ಲಾಪುರದಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಥಾಣೆ ರೈಲು ನಿಲ್ದಾಣ ಪುಡಿ ಪುಡಿಯಾಗಿದೆ. ಪ್ರತಿಭಟನಕಾರರ ಮೇಲೆ ಪೊಲೀಸರು ಲಾಠಿ ಪ್ರಯೋಗಿಸಿದ್ದಾರೆ. ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

Badlapur nursey girls harassment case Maharashtra govt suspend 3 police amid outrage ckm

ಮುಂಬೈ(ಆ.20) ನರ್ಸರಿ ಮಕ್ಕಳ ಮೇಲೆ ಶಾಲೆಯೊಳಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯಿಂದ ಮುಂಬೈನ ಥಾಣೆ ಜಿಲ್ಲೆಯ ಬದ್ಲಾಪುರದಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿದೆ. ಮೂರುವರೆ ವರ್ಷ ಹಾಗೂ ನಾಲ್ಕು ವರ್ಷದ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ವರದಿಯಾಗಿದೆ. ಘಟನೆಯಿಂದ ನೊಂದ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಬರೋಬ್ಬರಿ 11 ಗಂಟೆ ಕಾಯಿಸಲಾಗಿದೆ. ಇದರಿಂದ ರೊಚ್ಚಿಗೆದ್ದ ಪೋಷಕರು ಹಾಗೂ ಕುಟುಂಬಸ್ಥರು ಪೊಲೀಸರ ವಿರುದ್ಧವೇ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಗೆ ಜನಸಾಗರವೇ ಹರಿದು ಬಂದಿದೆ. ಥಾಣೆ ರೈಲು ನಿಲ್ದಾಣ ಪುಡಿ ಪುಡಿಯಾಗಿದೆ. ಘಟನೆ ಬೆನ್ನಲ್ಲೇ ಎಚ್ಚೆತ್ತ ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಇದೇ ವೇಳೆ ಪ್ರಕರಣ ದಾಖಲಿಸಲು ವಿಳಂಬ ಮಾಡಿದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಆದರೆ ಪ್ರತಿಭಟನೆ ತಣ್ಣಗಾಗಿಲ್ಲ.

ಶಾಲೆಯಲ್ಲಿ ಮಕ್ಕಳಿಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿದ ಘಟನೆ ವರದಿಯಾಗುತ್ತಿದ್ದಂತೆ ಶಾಲೆಗೆ ಪೋಷಕರು ಆಗಮಿಸಿದ್ದಾರೆ. ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದ ಪೋಷಕರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಲು ಮುಂದಾಗಿದ್ದಾರೆ. ಆದರೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಇದು ಪೋಷಕರನ್ನು ಮತ್ತಷ್ಟು ಆಕ್ರೋಶಗೊಳಿಸಿದೆ. 

ದೇಶಾದ್ಯಂತ ವೈದ್ಯರು ಮುಷ್ಕರ ನಡೆಸುತ್ತಿರುವುದೇಕೆ?: ಕೋಲ್ಕತಾ ಆಸ್ಪತ್ರೆಯಲ್ಲಿ ಆ.9 ರಂದು ಆಗಿದ್ದೇನು?

ಥಾಣೆಯಲ್ಲಿ ಶುರುವಾದ ಪ್ರತಿಭಟನೆ ಕಿಚ್ಚು ಜೋರಾಗಿದೆ. ಶಾಲಾ ಆಡಳಿತ ಮಂಡಳಿ, ಪೊಲೀಸರ ವಿರುದ್ಧದ ಪ್ರತಿಭಟನೆಗೆ ಸಾವಿರಾರು ಮಂದಿ ಆಗಮಿಸಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರತಿಭಟನಾಕಾರರ ಚದುರಿಸಲು ಪೊಲೀಸರು ಲಾಠಿ ಚಾರ್ಜ್, ಆಶ್ರುವಾಯು ಸಿಡಿಸಿದ್ದಾರೆ. ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಾಲಾ ಕ್ಲೀನರ್ ಗಲ್ಲಿಗೇರಿಸಲು ಘೋಷಣೆ ಕೂಗಲಾಗಿದೆ. ಬರೋಬ್ಬರಿ 6 ಗಂಟೆ ಕಾಲ ಥಾಣೆ ರೈಲು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ರೈಲು ಸಂಚಾರ ಬಂದ್ ಮಾಡಲಾಗಿದೆ.

ಘಟನೆ ತೀವ್ರತೆ ಅರಿತ ಮಹಾರಾಷ್ಟ್ರ ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯ ಭರವಸೆ ನೀಡಿದೆ. ಫಾಸ್ಟ್ ಟ್ರಾಕ್ ನ್ಯಾಯಲಯದಲ್ಲಿಪ್ರಕರಣ ವಿಚಾರಣೆ ನಡೆಸಲಾಗುತ್ತದೆ ಎಂದು ಮಹರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ತನಿಖೆಗೆ ಎಸ್‌ಐಟಿ ತಂಡ ರಚಿಸಲಾಗಿದೆ.  ಥಾಣೆ ಜಿಲ್ಲೆ ಈಗಲೂ ಬೂದಿ ಮುಚ್ಚಿದ ಕೆಂಡವಾಗಿದೆ.

ಘಟನೆ ನಡೆದ ಶಾಲೆಗೆ ದಾಳಿ ನಡೆಸಿರುವ ಪ್ರತಿಭಟನಕಾರರರು ಪಿಠೋಪಕರಣಗಳನ್ನು ಧ್ವಂಸಗೊಳಿಸಲಾಗಿದೆ. ಶಾಲೆಗೆ ಬೀಗ ಜಡಿಯಲಾಗಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಥಾಣೆ ರೈಲು ನಿಲ್ದಾಣ ಸೇರಿದಂತೆ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಕೋಲ್ಕತಾ ವೈದ್ಯೆ ಹತ್ಯೆ ಪ್ರತಿಭಟನೆ ಬೆನ್ನಲ್ಲೇ ನರ್ಸ್ ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆ!
 

Latest Videos
Follow Us:
Download App:
  • android
  • ios