ಬಜರಂಗದಳ ನಿಷೇಧಿಸಲ್ಲ, ಆದರೆ ಸಂಘಟನೆಯ ಗೂಂಡಾಗಳನ್ನು ಬಿಡಲ್ಲ: ದಿಗ್ವಿಜಯ ಸಿಂಗ್
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ಸಂಘಟನೆಯನ್ನು ನಿಷೇಧಿಸುವುದಿಲ್ಲ. ಆದರೆ ಸಂಘಟನೆಯಲ್ಲಿನ ಗೂಂಡಾಗಳು ಹಾಗೂ ಗಲಭೆಕೋರರನ್ನು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ (Digvijaya Singh) ಬುಧವಾರ ಹೇಳಿದ್ದಾರೆ.

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ಸಂಘಟನೆಯನ್ನು ನಿಷೇಧಿಸುವುದಿಲ್ಲ. ಆದರೆ ಸಂಘಟನೆಯಲ್ಲಿನ ಗೂಂಡಾಗಳು ಹಾಗೂ ಗಲಭೆಕೋರರನ್ನು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ (Digvijaya Singh) ಹೇಳಿದ್ದಾರೆ.
ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ (Madhya Pradesh) ಈ ವರ್ಷದ ಅಂತ್ಯಕ್ಕೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ದಿಗ್ಬಿಜಯ ಹೇಳಿಕೆ ಮಹತ್ವ ಪಡೆದಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ (Congress Party) ಬಜರಂಗದಳ ನಿಷೇಧಿಸಲಾಗುತ್ತದೆ ಎಂದು ಪ್ರಣಾಳಿಕೆಯಲ್ಲಿ ಘೋಷಿಸಿ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿತ್ತು ಎಂಬುದು ಇಲ್ಲಿ ಗಮನಾರ್ಹ.
ಭಜರಂಗದಳ ಕಾರ್ಯಕರ್ತರ ಗಡಿಪಾರು; ಶಾಂತಿ ಕದಡೋರಿಗೆ ಖಡಕ್ ವಾರ್ನ್ ಕೊಟ್ಟ ಮಂಗಳೂರು ಕಮಿಷನರ್
ಸುದ್ದಿಗಾರರ ಜೊತೆ ಮಾತನಾಡಿದ ದಿಗ್ವಿಜಯ್, ಬಜರಂಗದಳ ಗೂಂಡಾಗಳು (Bajarangadal) ಮತ್ತು ಸಮಾಜ ವಿರೋಧಿ ಕೃತ್ಯಗಳನ್ನು ಎಸಗುವ ಜನರ ಗುಂಪು. ಆದರೆ ಈ ದೇಶ ಎಲ್ಲರಿಗೂ ಸೇರಿದ್ದಾಗಿದೆ. ಹಾಗಾಗಿ ಮೋದಿ ಹಾಗೂ ಶಿವರಾಜ್ (ಮ.ಪ್ರ. ಸಿಎಂ ಶಿವರಾಜ್ ಸಿಂಗ್ ಚೌಹಾಣ್) ಅವರು ದೇಶವನ್ನು ವಿಭಜಿಸುವ ಕೆಲಸವನ್ನು ಬಿಡಬೇಕು ಎಂದು ಹೇಳಿದರು. ಇದೇ ವೇಳೆ ಬಜರಂಗದಳ ನಿಷೇಧದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸಂಘಟನೆಯನ್ನು ನಿಷೇಧಿಸುವುದಿಲ್ಲ. ಆ ಸಂಘಟನೆಯಲ್ಲಿ ಒಳ್ಳೆಯವರೂ ಇದ್ದಾರೆ. ಆದರೆ ಸಂಘಟನೆಯಲ್ಲಿನ ಗೂಂಡಾಗಳು ಹಾಗೂ ಗಲಭೆಕೋರರನ್ನು ಸುಮ್ಮನೇ ಬಿಡುವುದಿಲ್ಲ ಎಂದರು.
ಮಂಗಳೂರು: ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಮಾರಣಾಂತಿಕ ದಾಳಿ!