2008ರಲ್ಲಿ ನಡೆದ ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣ| ಬಾಟ್ಲಾ ಹೌಸ್ ಎನ್ಕೌಂಟರ್: ಇನ್‌ಸ್ಪೆಕ್ಟರ್ ಶರ್ಮಾ ಹಂತಕ ಉಗ್ರ ದೋಷಿ
ನವದೆಹಲಿ(ಮಾ.09): 2008ರಲ್ಲಿ ನಡೆದ ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಮೋಹನ್‌ಚಂದ್ ಶರ್ಮಾ ಮತ್ತು ಇತರ ಅಧಿಕಾರಿಗಳ ಹತ್ಯೆಯಲ್ಲಿ ಭಾಗಿಯಾಗಿದ್ದ ಇಂಡಿಯನ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ಆರಿಜ್ ಖಾನ್ ಎಂಬಾತನನ್ನು ದೋಷಿ ಎಂದು ದೆಹಲಿಯ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಿದೆ.
ಮಾ.15ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಆರಿಜ್ ಖಾನ್ ಮತ್ತು ಆತನ ಸಹಚಚರು ಪೊಲೀಸರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವುದು ಸಾಕ್ಷ್ಯಾಧಾರಗಳಿಂದ ದೃಢಪಡಿಟ್ಟಿದೆ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂದೀಪ್ ಯಾದವ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.
2008ರಲ್ಲಿ ದಕ್ಷಿಣ ದೆಹಲಿಯ ಜಾಮಿಯಾ ನಗರ್‌ನಲ್ಲಿ ನಡೆದ ಬಾಟ್ಲಾ ಹೌಸ್ ಎನ್ಕೌಂಟರ್ ವೇಳೆ ಇನ್ಸ್‌ಪೆಕ್ಟರ್ ಶರ್ಮಾ ಹತ್ಯೆಗೀಡಾಗಿದ್ದರು.
