ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬಲಗೊಳ್ಳುತ್ತಿದೆ. ಅಕ್ಟೋಬರ್ 28ಕ್ಕೆ ಕರಾವಳಿ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ. ಕೆಲೆವೆಡೆ ಭೂಕುಸಿತ ಸಂಭವಿಸಲಿದೆ. ಬೆಂಗಳೂರು, ಕರ್ನಾಟಕದ ಹಲವು ಭಾಗದಲ್ಲಿ ಭಾರಿ ಮಳೆಯಾಗಲಿದೆ.
ನವದೆಹಲಿ (ಅ.24) ವಾಯುಭಾರ ಕುಸಿತದ ಪರಿಣಾಣ ಇದೀಗ ದೇಶದ ಹಲವು ಭಾಗದಲ್ಲಿ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಭಾರಿ ಪ್ರಮಾಣದ ಮಳೆಯಿಂದ ಪ್ರವಾಹ ಪರಿಸ್ಥಿತಿಗಳು ನಿರ್ಮಾಣವಾಗಿದೆ. ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕಾರಣ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬಲಗೊಳ್ಳುತ್ತಿದೆ. ಅಕ್ಟೋಬರ್ 28 ರಂದು ಕರಾವಳಿ ತೀರ ಪ್ರದೇಶಕ್ಕೆ ಅಪ್ಪಳಿಸಲಿದೆ. ಪರಿಣಾಮ ಮಳೆ ಪ್ರಮಾಣ ಹೆಚ್ಚಾಗಲಿದೆ. ಹಲೆವೆಡೆ ಭೂಕುಸಿತ ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರ್ನಾಟಕ, ತಮಿಳುನಾಡು ಸೇರಿ ದಕ್ಷಿಣ ಭಾರತದಲ್ಲಿ ಭಾರಿ ಮಳೆ
ಈಶಾನ್ಯ ಮಾನ್ಸನ್ ಆರಂಭಗೊಂಡಿರುವ ಪರಿಣಾಮ ಕರ್ನಾಟಕ, ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶ, ಮಾಹೆ ಸೇರಿದಂತೆ ಹಲವು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಪೈಕಿ ಕರ್ನಾಟಕ ಹಾಗೂ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ. ಇದು ಕಲೆವೆಡೆ ಭೂಕುಸಿತಕ್ಕೂ ಕಾರಣವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ತಮಿಳುನಾಡಿನ ಮೆಟ್ಟುಪಾಳಯಂ ಬಳಿಯ ಕಲ್ಲಾರ್ನಲ್ಲಿ ಭೂಕುಸಿತ ಸಂಭವಿಸಿದೆ. ಇತ್ತ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮಳೆ ಹಲವರಿಗೆ ಅಡ್ಡಿಯಾಗಿದೆ. ಇನ್ನು ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಮಳೆ ಪ್ರಮಾಣ ಅಕ್ಟೋಬರ್ 28ರ ವೇಳೆಗೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಎಚ್ಚರಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುಕತ ಬಲಗೊಳ್ಳುತ್ತಿರುವ ಹಿನ್ನಲೆಯಲ್ಲಿ ಹವಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ.ಅಕ್ಟೋಬರಿ 26ರ ಬೆಳಗ್ಗೆ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬಲಗೊಳ್ಳಲಿದೆ. ಅಕ್ಟೋಬರಿ 28ಕ್ಕೆ ಆಂಧ್ರ ಪ್ರದೇಶ, ಒಡಿಶಾ ಕರಾವಳಿ ತೀರ ಪ್ರದೇಶಕ್ಕೆ ಅಪ್ಪಳಸಲಿದೆ. ಹೀಗಾಗಿ ಒಡಿಶಾ ಹಾಗೂ ಆಂಧ್ರ ಪ್ರದೇಶ ಕರಾವಳಿ ಭಾಗದಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ.
ಈ ಚಂಡಮಾರುತ ಪರಿಣಾಮ ಬೆಂಗಳೂರು ಸೇರಿದಂತೆ ಕರ್ನಾಟಕದ ಮೇಲೂ ಬೀಳಲಿದೆ. ಇದರಿಂದ ಕರ್ನಾಟಕದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಮಳೆ ಪ್ರಮಾಣ ತೀವ್ರಗೊಳ್ಳುವ ಕಾರಣ ಅಪಾಯದ ಸಾಧ್ಯತೆಗಳು ಹೆಚ್ಚು ಎಂದು ಎಚ್ಚರಿಕೆ ನೀಡಲಾಗಿದೆ.
ಹವಾಮಾನ ಇಲಾಖೆ ಬೆನ್ನಲ್ಲೇ ಒಡಿಶಾ ಸರ್ಕಾರ ವಿಪತ್ತು ನಿರ್ವಹಣಾ ತಂಡಗಳಿಗೆ ಮಹತ್ವದ ಸೂಚನೆ ನೀಡಿದೆ. ಕರಾವಳಿ ತೀರ ಪ್ರದೇಶದಲ್ಲಿರುವ ಶಾಲಾ ಕಾಲೇಜುಗಳಿಗೆ ಅಗತ್ಯ ಬಿದ್ದರೆ ರಜೆ ನೀಡಲು ಸೂಚನೆ ನೀಡಲಾಗಿದೆ. ಇತ್ತ ಭಾರಿ ಮಳೆ ಹಾಗೂ ಚಂಡಮಾರುತದಿಂದ ಅಪಾಯ ಪ್ರಮಾಣ ತಗ್ಗಿಸಲು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಈಗಾಗಲೇ 30 ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ
ಈಗಾಗಲೇ ಆಳ ಸಮುದ್ರ ಮೀನುಗಾರಿಗೆ ತೆರಳಿರು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಆದಷ್ಟು ಬೇಗ ದಡ ಸೇರಿಕೊಳ್ಳಲು ಸೂಚಿಸಲಾಗಿದೆ. ಇನ್ನು ತೀರ ಸಮುದ್ರ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.







