ಚಿತ್ರದುರ್ಗದ ಬಳಿ ನಿಂತಿದ್ದ ಲಾರಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್ಸು ಬರುವಾಗ ಈ ದುರ್ಘಟನೆ ಸಂಭವಿಸಿದೆ.
ಚಿತ್ರದುರ್ಗ (ಮಾ.09): ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಚಿತ್ರದುರ್ಗದ ಸಿಬಾರ ಗ್ರಾಮದ ಬಳಿ ನಿಲ್ಲಿಸಲಾಗಿದ್ದ ಲಾರಿಗೆ ಇನನೋವಾ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಸಿಬಾರ ಗ್ರಾಮದ ಬಳಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಇನ್ನೋವಾ ಕಾರು ಹಿಂದಿನಿಂದ ಗುದ್ದಿದೆ. ಈ ಘಟನೆಯಲ್ಲಿ ಕಾರಿಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹೆದ್ದಾರಿಯಲ್ಲಿ ಹೋಗುತ್ತಿದ್ದವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂದು ಸ್ಥಳ ಪರಿಶೀಲನೆ ಮಾಡಿದ್ದು, ಇನ್ನೋವಾ ಕಾರು ಬೆಂಗಳೂರು ಮೂಲದ್ದು ಎಂದು ಗುರಿಸಿದ್ದಾರೆ. ಆರಂಭದಲ್ಲಿ ಮೃತರ ಗುರುತು ಖಚಿತವಾಗಿ ತಿಳಿದು ಬಂದಿರಲಿಲ್ಲ.
ನಂತರ ಕಾರಿನಲ್ಲಿದ್ದ ಮೃತದೇಹಗಳನ್ನು ಹೊರತೆಗೆದು ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಐವರು ಮೃತರು ಕೂಡ ಬೆಂಗಳೂರಿನವರು ಎಂಬುದು ತಿಳಿದುಬಂದಿದೆ. ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ (60), ವಿದ್ಯಾರಣ್ಯಪುರದ ರುದ್ರಸ್ವಾಮಿ (52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ (50) ಹಾಗೂ ಚಿದಂಬರಾಚಾರ್(52) ಮೃತರು. ಇನ್ನೋರ್ವ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಕಾರಲ್ಲಿ ರೇಣುಕಾ ಯಲ್ಲಮ್ಮ ದೇಗುಲದ ಪ್ರಸಾದ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಸವದತ್ತಿ ರೇಣುಕಾ ಯಲ್ಲಮ್ಮ ದೇಗುಲದಿಂದ ಹಿಂದಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನುಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು, ASP ಕುಮಾರಸ್ವಾಮಿ, DYSP ದಿನಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಬೀಳುತ್ತಿದ್ದ ಮಹಿಳೆಯನ್ನು ರಕ್ಷಿಸಿದ ರೈಲ್ವೆ ಪೊಲೀಸ್: ವೈರಲ್ ವೀಡಿಯೋ
ಇನ್ನೋವಾ ಕಾರು ಅಪಘಾತದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಚಿತ್ರದುರ್ಗದ ತಮಟಕಲ್ಲು ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಇನೊವಾ ಕಾರ್ ಡಿಕ್ಕಿ ಹೊಡೆದಿದೆ. ರಸ್ತೆಯ ಎಡಬದಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಇನೊವಾ ಕಾರ್ ಡಿಕ್ಕಿಯಾಗಿದ್ದನ್ನು ನೋಡಿದರೆ, ಚಾಲಕ ಕಾರಿನ ಬ್ರೇಕ್ ಬಳಸಿದಂತೆ ಕಾಣುತ್ತಿಲ್ಲ. ಇದರಿಂದ ಇನೊವಾ ಕಾರಲ್ಲಿದ್ದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಇನೊವಾ ಕಾರ್ ಚಾಲಕನ ನಿರ್ಲಕ್ಷ ಹಾಗೂ ಓವರ್ ಸ್ಪೀಡ್‌ನಿಂದ ಈ ಅಪಘಾತ ಸಂಭವಿಸಿದೆ. ಇನ್ನು ಇನೊವಾ ಕಾರಲ್ಲಿದ್ದವರು ಬೆಂಗಳೂರು ಮೂಲದವರು ಆಗಿದ್ದಾರೆ. ಬೆಳಗಾವಿಯ ಸವದತ್ತಿಯಿಂದ ವಾಪಸ್ಸಾಗುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಕಾರಿನಲ್ಲಿ ಸವದತ್ತಿ ಯಲ್ಲಮ್ಮ ದೇಗುಲದ ಪ್ರಸಾದ ಲಭ್ಯವಾಗಿದೆ. ಬೆಂಗಳೂರಿನ ಚಿದಂಬರಾಚಾರ್, ಶಾಂತಮೂರ್ತಿ, ಮಲ್ಲಿಕಾರ್ಜುನ, ರುದ್ರಸ್ವಾಮಿ ಹಾಗೂ ಮತ್ತೋರ್ವ ವ್ಯಕ್ತಿ ಮೃತರು. ಓರ್ವ ಮೃತ ವ್ಯಕ್ತಿ ಮತ್ತು ಗಾಯಾಳುವಿನ ಹೆಸರು ಪತ್ತೆ ಆಗಬೇಕಿದೆ. ರಸ್ತೆ ಬದಿ ಲಾರಿ ನಿಲ್ಲಿಸಿದ್ದು & ಇನೊವಾ ಕಾರ್ ಓವರ್ ಸ್ಪೀಡ್ ನಿಂದ ಅಪಘಾತ ಸಂಭವಿಸಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಟ್ರಾಫಿಕ್ ಸಿಗ್ನಲ್‌ನಲ್ಲಿ BMW ಕಾರು ನಿಲ್ಲಿಸಿ ಮೂತ್ರ ವಿಸರ್ಜಿಸಿದ ಯುವಕ; ವಿಡಿಯೋ ವೈರಲ್ ಬೆನ್ನಲ್ಲೇ ಅರೆಸ್ಟ್!
