ಮತ್ತೊಂದು ರೈಲು ಅವಘಡ ಸಂಭವಿಸಿದೆ. ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. 8 ಬೋಗಿಗಳು ಹಳಿ ತಪ್ಪಿದೆ.ಬೆಂಗಳೂರಿನಿಂದ ಹೊರಟ ಈ ರೈಲು ಚೌದ್ವಾರ್ ಬಳಿ ಅವಘಡ ಸಂಭವಿಸಿದೆ.

ಕಟಕ್(ಮಾ.30) ಭಾರತೀಯ ರೈಲ್ವೇ ಇಲಾಖೆ ಪ್ರಯಾಣಿಕರ ಸುರಕ್ಷತೆಗಾಗಿ ಹಲವು ಕ್ರಮಗಳನ್ನು ಕೈಗೊಂಡಿದೆ. ಆದರೆ ಅವಘಡಗಳ ನಿಲ್ಲುತ್ತಿಲ್ಲ. ಇದೀಗ ಮತ್ತೊಂದು ರೈಲು ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ಹೊರಕ ಕಾಮಾಕ್ಯ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದೆ. ಕಾಮಾಕ್ಯಾ ಎಕ್ಸ್‌ಪ್ರೆಸ್ ರೈಲಿನ 11 ಬೋಗಿಗಳು ಹಳಿ ತಪ್ಪಿ ಅವಘಡ ಸಂಭವಿಸಿದೆ.ಒಡಿಶಾದ ಚೌದ್ವಾರ್ ಬಳಿ ಈ ಅವಘಡ ಸಂಭವಿಸಿದೆ. ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೇ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

Add Asianetnews Kannada as a Preferred SourcegooglePreferred

ವೇಗವಾಗಿ ಸಾಗುತ್ತಿದ್ದ ರೈಲು ಹಳಿ ತಪ್ಪಿದೆ. ಹೀಗಾಗಿ ಅವಘಡದ ತೀವ್ರತೆ ಹೆಚ್ಚಾಗಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ 11ಕ್ಕೂ ಹೆಚ್ಚು ಬೋಗಿಗಳು ಹಳಿ ತಪ್ಪಿದೆ. ಈ ಅವಘಡದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒರ್ವ ಪ್ರಯಾಣಿಕ ಮೃತಪಟ್ಟಿರುವುದಾಗಿ ವರದಿಯಾಗಿದೆ. 11.54ರ ವೇಳೆ ಈ ಅವಘಡ ಸಂಭವಿಸಿದೆ. 

ಮಂಗಳೂರು-ಮುಂಬೈ ಇನ್ನು ಕೇವಲ 12 ಗಂಟೆ, ಶೀಘ್ರದಲ್ಲೇ ಹೊಸ ವಂದೇ ಭಾರತ್ ರೈಲು

ಚೌದ್ವಾರ್ ಬಳಿಕ ನಿರ್ಗುಂಡಿ ಬಳಿ ಈ ಅವಘಡ ಸಂಭವಿಸಿದೆ. ರಕ್ಷಣಾ ಕಾರ್ಯಗಳು ಭರದಿಂದ ಸಾಗಿದೆ. ಆದರೆ ತೀವ್ರ ಉರಿ ಬಿಸಿಲು ಹಾಗೂ ಅವಘಡದ ಪರಿಣಾಮ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಹಲವರು ಅಸ್ವಸ್ಥಗೊಂಡಿದ್ದಾರೆ. ಹಲವು ಪ್ರಯಾಣಿಕರು ನೀರು ಕೇಳುತ್ತಿದ್ದು, ವ್ಯವಸ್ಥೆ ಮಾಡಲಾಗುತ್ತಿದೆ. 

 B-6 ರಿಂದ B-14ರ ವರೆಗಿನ ಬೋಗಿಗಳು ಹಳಿ ತಪ್ಪಿದೆ. ಹಳಿ ತಪ್ಪಿದ ಬೋಗಿಗಳು ಪಕ್ಕದ ಕಾಡು ಹಾಗೂ ಜಮಿನಿನ ಮೇಲೆ ಬಿದ್ದಿದೆ. ಅಪಘಾತದ ತೀವ್ರತೆ ಹೆಚ್ಚಿರುವ ಕಾರಣ ಆತಂಕ ಪ್ರಯಾಣಿಕರ ಕುಟುಂಬಸ್ಥರ ಆತಂಕವೂ ಹಚ್ಚಾಗುತ್ತಿದೆ. ಈ ಮಾರ್ಗದಲ್ಲಿ ಸಂಚರಿಸಬೇಕಿದ್ದ ಹಲವು ರೈಲುಗಳ ಪ್ರಯಾಣ ರದ್ದುಗೊಳಿಸಲಾಗಿದೆ.