ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ವಂದೇ ಮಾತರಂ ಹಾಡಿದ ಬೆಂಗಳೂರು ವಿದ್ಯಾರ್ಥಿಗಳು!
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದಾರೆ. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದೆ. ಈ ವಿಶೇಷ ರೈಲಿನಲ್ಲಿ ಬೆಂಗಳೂರು ವಿದ್ಯಾರ್ಥಿಗಳು ಕೊಳಲಿನ ಮೂಲಕ ವಂದೇ ಮಾತರಂ ಹಾಡಿನ ಮೂಲಕ ದೇಶಪ್ರೇಮ ಮೆರೆದಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ
ಬೆಂಗಳೂರು(ನ.12): ಪ್ರಧಾನಿ ನರೇಂದ್ರ ಮೋದಿ ನಿನ್ನೆ(ನ.11) ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಮೊದಲ ಹೈಸ್ಪೀಡ್ ಚೆನ್ನೈ-ಮೈಸೂರು ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ್ದಾರೆ. ಈ ರೈಲು ಹಲವು ಕಾರಣಗಳಿಂದ ವಿಶೇಷವಾಗಿದೆ. ಪ್ರಯಾಣಿಕರಿಗೆ 180 ಡಿಗ್ರಿ ತಿರುಗುವ ಆಸನ ಸೌಲಭ್ಯ, ವೈ-ಫೈ ವ್ಯವಸ್ಥೆ, 32 ಇಂಚಿನ ಎಲ್‌ಸಿಡಿ ಟಿವಿ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳು ಈ ರೈಲಿನಲ್ಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮತ್ತೊಂದು ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಿದೆ. ಬೆಂಗಳೂರಿನ 12ನೇ ತರಗತಿ ವಿದ್ಯಾರ್ಥಿಗಳು ರಾಷ್ಟ್ರೀಯ ಗೀತೆ ವಂದೇ ಮಾತರಂ ಹಾಡನ್ನು ಕೊಳಲಿನ ಮೂಲಕ ನುಡಿಸಿ ಗಮನಸೆಳೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗಿದೆ.
ರೈಲ್ವೇ ಅಧಿಕಾರಿ ಅನಂತ ರೂಪಾನಗುಡಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನ ವಿದ್ಯಾರ್ಥಿಗಳು ಕೊಳಲಿನಲ್ಲಿ ವಂದೇ ಮಾತರಂ ಹಾಡನ್ನು ನುಡಿಸಿರುವುದು ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ. ಸಹ ಪ್ರಯಾಣಿಕರು ವಂದೇ ಮಾತರಂ ಗಾಯನಕ್ಕೆ ತಲೆದೂಗಿದ್ದಾರೆ. ರೈಲು ಸಂಚರಿಸಿದ 45 ನಿಲ್ದಾಣಗಳಲ್ಲಿ ವಂದೇ ಮಾತರಂ ಹಾಡು ಮೊಳಗಿದೆ.
Vande Bharat Express: ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಮೋದಿ ಚಾಲನೆ
ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಕರ ಸಂಭ್ರಮ
ಮೊದಲ ದಿನ ಬೆಂಗಳೂರಿನಿಂದ ಚೆನ್ನೈನತ್ತ ಸಾಗಿದ ‘ವಂದೇ ಭಾರತ್’ ರೈಲನ್ನು ಈ ಮಾರ್ಗದ 45 ನಿಲ್ದಾಣಗಳಲ್ಲಿ ಸ್ವಾಗತಿಸಿದ್ದು, ವಿಶೇಷ ಉಚಿತ ಪ್ರಯಾಣದಲ್ಲಿ ಒಂದೂವರೆ ಸಾವಿರಕ್ಕೂ ಅಧಿಕ ಮಂದಿ ಹೈಸ್ಪೀಡ್ ರೈಲಿನಲ್ಲಿ ಸಂಚಾರ ನಡೆಸಿ ಸಂತಸಪಟ್ಟರು.ಮೊದಲ ದಿನ ರೈಲಿನಲ್ಲಿ 1,509 ಮಂದಿ ಪ್ರಯಾಣಿಸಿದ್ದಾರೆ. ಚೆನ್ನೈ ಮಾರ್ಗದ ಮೊದಲ ನಿಲ್ದಾಣ ಬೆಂಗಳೂರು ದಂಡು (ಕಂಟೋನ್ಮೆಂಟ್) ನಿಲ್ದಾಣದಿಂದ ರೈಲ್ವೆ ಅಧಿಕಾರಿ, ಸಿಬ್ಬಂದಿ ವರ್ಗ ರೈಲನ್ನು ಹತ್ತಿದರು. ಬಳಿಕ ಬಂದ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು, ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯ್ತಿಗಳ ಸದಸ್ಯರು ರೈಲನ್ನೇರಿ ಒಂದು ನಿಲ್ದಾಣದಿಂದ ಮತ್ತೊಂದು ನಿಲ್ದಾಣದವರೆಗೂ ಪ್ರಯಾಣ ಮಾಡಿ ಸಂತಸಪಟ್ಟರು. ಮೊದಲ ದಿನದ ಸಂಚಾರ ಹಿನ್ನೆಲೆ ರೈಲಿನಲ್ಲಿ ಪ್ರಯಾಣಿಸಿದವರಿಗೆ ಸಿಹಿ ತಿಂಡಿ ಪೊಟ್ಟಣ ನೀಡಲಾಯಿತು.
ವಂದೇ ಭಾರತ್ ರೈಲು ಭಾರತವು ನಿಶ್ಚಲತೆಯ ದಿನಗಳಿಂದ ಹೊರಬಂದಿದೆ ಎಂಬುದಕ್ಕೆ ಸಂಕೇತವಾಗಿದೆ. ಭಾರತೀಯ ರೈಲ್ವೆಯ ಸಂಪೂರ್ಣ ಬದಲಾವಣೆಯ ಗುರಿಯೊಂದಿಗೆ ನಾವು ಸಾಗುತ್ತಿದ್ದೇವೆ. ಈ ನಿಟ್ಟಿನಲ್ಲಿ 400ಕ್ಕೂ ಅಧಿಕ ವಂದೇ ಭಾರತ್ ರೈಲುಗಳು ಮತ್ತು ವಿಸ್ಟಾಡೋಮ್ ಬೋಗಿಗಳನ್ನು ಹೊಂದಿರುವ ರೈಲುಗಳು ಮುಂದಿನ ದಿನಗಳಲ್ಲಿ ಸಂಚರಿಸಲಿದ್ದು, ಇವು ಭಾರತೀಯ ರೈಲ್ವೆಯ ಹೊಸ ಗುರುತಾಗಲಿವೆ ಎಂದರು.
ಉಚಿತ ರೈಲು ಪ್ರಯಾಣಕ್ಕೆ ಮುಗಿಬಿದ್ದ ಜನ: ಐಷಾರಾಮಿ ಸೌಕರ್ಯಕ್ಕೆ ಫಿದಾ
ಕೈಗಾರಿಕಾ ಕೇಂದ್ರ ಚೆನ್ನೈನಿಂದ ನವೋದ್ಯಮ ರಾಜಧಾನಿ ಬೆಂಗಳೂರು ಹಾಗೂ ಪಾರಂಪರಿಕ ನಗರಿ ಮೈಸೂರನ್ನು ಸಂಪರ್ಕಿಸುವ ಮೇಡ್ ಇನ್ ಇಂಡಿಯಾ ವಂದೇ ಭಾರತ್ ಎP್ಸ…ಪ್ರೆಸ್ ಮೊದಲ ರೈಲನ್ನು ಕರ್ನಾಟಕವು ಪಡೆದುಕೊಂಡಿದೆ. ಈ ರೈಲು ಸಂಪರ್ಕ ಸೌಲಭ್ಯದ ಜತೆಗೆ ವಾಣಿಜ್ಯ ಚಟುವಟಿಕೆಗಳನ್ನೂ ಹೆಚ್ಚಿಸುತ್ತದೆ. ಜನರ ಜೀವನವನ್ನು ಹೆಚ್ಚು ಸುಗಮಗೊಳಿಸುತ್ತದೆ. ಈ ರೈಲಿಗೆ ಚಾಲನೆ ನೀಡಿದ್ದು, ಸಂತಸವಾಗಿದೆ ಎಂದರು.