* ಆಸಾನಿ ಚಂಡಮಾರುತದ ಬಳಿಕ ರಾಜ್ಯಾದ್ಯಂತ ಭಾರೀ ಮಳೆ* ವರುಣನ ಅಬ್ಬರದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ* ಬೇಸಿಗೆ ಕಾಲದಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ
ಚಂಡಮಾರುತ(ಮೇ.17): ಆಸಾನಿ ಚಂಡಮಾರುತದ ಬಳಿಕ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಬೇಸಿಗೆ ಕಾಲದಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆಯಿಂದ ಬೇಸತ್ತ ಜನರಿಗೆ ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂಬ ಸುದ್ದಿ ಮತ್ತಷ್ಟು ಚಿಂತೆಗೀಡು ಮಾಡಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಮೇ 18ರಿಂದ ಮೇ 21ರವರೆಗೆ ರಾಜ್ಯದ ಕರಾವಳಿ ಭಾಗ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ಮೇ 18ರಿಂದ ಮೇ 21ರವರೆಗೆ ರಾಜ್ಯದ ಕರಾವಳಿ ಭಾಗ ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆ ಜೊತೆಗೆ ಗಂಟೆಗೆ 30-40 kmph ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ.
10,282 ರಸ್ತೆ ಗುಂಡಿಗಳನ್ನ ಗುರುತಿಸಲಾಗಿದೆ
ಇನ್ನು ಇತ್ತ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳಿಂದ ಅಪಪಘಾತಗಳು ಸಂಭವಿಸುವುದು ಹೊಸದಲ್ಲ, ಅದರಲ್ಲೂ ಮಳೆಗಾಲದಲ್ಲಿ ಈ ರಸ್ತೆಗುಂಡಿಗಳಿಂದ ಸಂಭವಿಸುವ ದುರಂತಗಳು ಕಡಿಮೆ ಇಲ್ಲ. ಹೀಗಿರುವಾಗ ಈ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡುವ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ಮಾತನಾಡಿದ್ದಾರೆ. 10,282 ರಸ್ತೆ ಗುಂಡಿಗಳನ್ನ ಗುರುತಿಸಲಾಗಿದೆ. 202 ರಸ್ತೆ ಗುಂಡಿ ಮುಚ್ಚಲು ಲಾಂಗ್ ಟರ್ಮ್ ಪ್ರಾಜೆಕ್ಟ್ ಬೇಕು. ಇವು ಗಂಭೀರ ಸ್ವರೂಪವಾದ ಗುಂಡಿಗಳೆಂದು ಗುರುತಿಸಲಾಗಿದೆ. ರಸ್ತೆ ಗುಂಡಿ ನಿರ್ವಹಣೆಗೆ ಎಇ, ಎಇಇ ಮೇಲ್ವಿಚಾರಣೆ ಮಾಡ್ತಿದ್ದಾರೆ. ಸಾರ್ವಜನಿಕರಿಗೆ ಫಿಕ್ಸ್ ಮೈ ಸ್ಟ್ರೀಟ್ ಆ್ಯಪ್ ಮೂಲಕ ಬಂದ ದೂರನ್ನ ಪರಿಗಣಿಸಿ ಕೇಸ್ ಅಟೆಂಡ್ ಮಾಡಲಾಗ್ತಿದೆ. ಗುಂಡಿಗಳು ಈಸ್ಟ್ ವಲಯದಲ್ಲಿ ಅತಿಹೆಚ್ಚು ಗುಂಡಿಗಳಿವೆ. ಈ ಎಲ್ಲಾ ಗುಂಡಿ ಮುಚ್ಚಲು ಮಿನಿಮಮ್ 15 ಡೇಸ್ ಬೇಕು. ಮಳೆ ಮುನ್ಸೂಚನೆ ಇದೆ, ಜೊತೆಗೆ ಮಾನ್ಸೂನ್ ಬರೋದಿದೆ. ಇದರೊಳಗಾಗಿ ಗುಂಡಿ ಮುಚ್ಚಲು ಪ್ರಯತ್ನ ಮಾಡಲಾಗ್ತಿದೆ ಎಂದಿದ್ದಾರೆ.
ನಾಳೆ ಕರಾವಳಿ, ದಕ್ಷಿಣ ಕರ್ನಾಟಕದಲ್ಲಿ ಅತಿ ಭಾರಿ ಮಳೆ?
ದೇಶದ ಕೃಷಿ ಚಟುವಟಿಕೆಗಳ ಜೀವನಾಡಿಯಾಗಿರುವ ನೈಋುತ್ಯ ಮುಂಗಾರು ಮಾರುತಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಸೋಮವಾರ ಪ್ರವೇಶಿಸಿವೆ. ಅದರೊಂದಿಗೆ ಭಾರತದಲ್ಲಿ ಈ ವರ್ಷದ ನಾಲ್ಕು ತಿಂಗಳ ಮಳೆಗಾಲ ಅಧಿಕೃತವಾಗಿ ಆರಂಭವಾದಂತಾಗಿದೆ. ಕೇರಳ ಮತ್ತು ಈಶಾನ್ಯ ಭಾರತದ ರಾಜ್ಯಗಳಲ್ಲಿ ಶನಿವಾರದಿಂದಲೇ ಪೂರ್ವ ಮುಂಗಾರು ಮಳೆ ಭಾರಿ ಪ್ರಮಾಣದಲ್ಲಿ ಸುರಿಯುತ್ತಿದ್ದು, ಇನ್ನೂ ಎರಡು ದಿನ ಆ ರಾಜ್ಯಗಳಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹಗಳಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಮುಂಗಾರು ಮಾರುತಗಳು ಸಶಕ್ತವಾಗಿದ್ದು, ಮುಂದಿನ 2-3 ದಿನಗಳಲ್ಲಿ ಬಂಗಾಳ ಕೊಲ್ಲಿಯ ಇನ್ನಷ್ಟುಭಾಗಕ್ಕೆ ವ್ಯಾಪಿಸಲಿವೆ. ಮುಂದಿನ ಐದು ದಿನಗಳಲ್ಲಿ ಕೇರಳ, ತಮಿಳುನಾಡು, ಲಕ್ಷದ್ವೀಪ ಹಾಗೂ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಪೂರ್ವ ಮಾರುತಗಳು ಉತ್ತಮ ಮಳೆ ಸುರಿಸಲಿದೆ. ಬುಧವಾರ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಾರಿ ಆಸಾನಿ ಚಂಡಮಾರುತದಿಂದಾಗಿ ನೈಋುತ್ಯ ಮುಂಗಾರು ಮಾರುತಗಳಿಗೆ ವೇಗ ದೊರೆತಿದ್ದರಿಂದ ವಾಡಿಕೆಗಿಂತ ಐದು ದಿನ ಮೊದಲೇ, ಅಂದರೆ ಜೂನ್ 1ಕ್ಕಿಂತ ಐದು ದಿನ ಮೊದಲು ಮೇ 27ರಂದೇ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಕೆಲ ದಿನಗಳ ಹಿಂದೆ ಹವಾಮಾನ ಇಲಾಖೆ ಹೇಳಿತ್ತು.
ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಬುಧವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ರೆಡ್ ಅಲರ್ಟ್ ಘೋಷಿಸಿದೆ.
ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದೆ. ಮುಖ್ಯವಾಗಿ ಕರಾವಳಿಯಲ್ಲಿ ಮಂಗಳವಾರ ಮತ್ತು ಬುಧವಾರ ನಿರಂತರ ಮಳೆಯಾಗಲಿದ್ದು, ಅದರಲ್ಲೂ ಬುಧವಾರ ಕರಾವಳಿಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ, ರೆಡ್ ಅಲರ್ಚ್ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿಯೂ ಐದು ದಿನ ಸಾಧಾರಣ ಮಳೆ ಇರಲಿದ್ದು, ಕೆಲ ಪ್ರದೇಶಗಳಲ್ಲಿ ಮಾತ್ರ ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಹೇಳಿದ್ದಾರೆ.
ಯೆಲ್ಲೋ ಅಲರ್ಟ್:
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮೇ 17ರಿಂದ 20ವರೆಗೂ ಯೆಲ್ಲೋ ಅಲರ್ಚ್ ಘೋಷಿಸಲಾಗಿದೆ.
