ಡಿಸೆಂಬರ್ 31 ರ ಹೊಸ ವರ್ಷವನ್ನು ಸ್ವಾಗತಿಸುವ ರಾತ್ರಿ ಜರ್ಮನಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಭಾರತದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಆಘಾತಕಾರಿ ಘಟನೆ ಜರ್ಮನಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತೆಲಂಗಾಣದ ಹೃತಿಕ್ ರೆಡ್ಡಿ ಎಂದು ಗುರುತಿಸಲಾಗಿದೆ
ಹೈದರಾಬಾದ್: ಡಿಸೆಂಬರ್ 31 ರ ಹೊಸ ವರ್ಷವನ್ನು ಸ್ವಾಗತಿಸುವ ರಾತ್ರಿ ಜರ್ಮನಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಭಾರತದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಆಘಾತಕಾರಿ ಘಟನೆ ಜರ್ಮನಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತೆಲಂಗಾಣದ ಹೃತಿಕ್ ರೆಡ್ಡಿ ಎಂದು ಗುರುತಿಸಲಾಗಿದೆ. 22ರ ಹರೆಯದ ಈತ ಜರ್ಮನಿಯಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ. ಥೋಕಲ ಹೃತಿಕ್ ರೆಡ್ಡಿ ಬರ್ಲಿನ್ ಬಳಿಯ ಬ್ರಾಂಡೆನ್‌ಬರ್ಗ್‌ನಲ್ಲಿ ವಾಸಿಸುತ್ತಿದ್ದ. ಹೊಸವರ್ಷದ ರಾತ್ರಿ ಈತ ವಾಸವಿದ ಅಪಾರ್ಟ್‌ಮೆಂಟ್‌ಗೆ ಬೆಂಕಿ ಬಿದ್ದಿದೆ. ಬೆಂಕಿಯಿಂದ ತಪ್ಪಿಸಿಕೊಳ್ಳುವುದಕ್ಕೆ ಕಟ್ಟಡದಿಂದ ಕೆಳಗೆ ಹಾರಿ ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅವರ ಮೃತದೇಹವನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ಅವರು ಕುಟುಂಬದವರು ಈಗ ಭಾರತೀಯ ವಿದೇಶಾಂಗ ಸಚಿವಾಲಯದ ಮೊರೆ ಹೋಗಿದೆ.
ಥೋಕಲ ಹೃತಿಕ್ ರೆಡ್ಡಿ ತೆಲಂಗಾಣದ ಜನಗಾಂವ್ ಜಿಲ್ಲೆಯ ಚಿಲ್ಪುರ್ ಮಂಡಲದ ಮಲ್ಕಾಪುರ್ ಗ್ರಾಮದ ನಿವಾಸಿ. ತಾನು ವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಹೊರ ಬರುವುದಕ್ಕೆ ಯಾವುದೇ ಮಾರ್ಗವಿಲ್ಲದೇ ಹೋದಾಗ ಅವರು ಕಟ್ಟಡದಿಂದ ಕೆಳಗೆ ಹಾರಿದ್ದಾರೆ. ಇದರಿಂದ ಅವರ ತಲೆಗೆ ಗಂಭೀರ ಗಾಯಗಳಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಅವರು ಕುಟುಂಬಕ್ಕೆ ಮಾಹಿತಿ ಬಂದಿದ್ದಾಗಿ ಕುಟುಂಬದವರು ಹೇಳಿದ್ದಾರೆ.
ಇದನ್ನೂ ಓದಿ: ವಿವಾಹಿತ ಮಹಿಳೆಯ ಜೊತೆ ಮಾತು: 22 ವರ್ಷದ ಯುವಕನ ಹತ್ಯೆ
ಕಟ್ಟಡದಿಂದ ಹಾರಿದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬದುಕುಳಿಯಲಿಲ್ಲ. ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿಗೆ ಕಾರಣ ತಕ್ಷಣಕ್ಕೆ ತಿಳಿದು ಬಂದಿಲ್ಲ. ಹೃತಿಕ್ ಬರ್ಲಿನ್‌ನ ನೈಋತ್ಯದಲ್ಲಿರುವ ಪಾಟ್ಸ್‌ಡ್ಯಾಮ್‌ನಲ್ಲಿರುವ ಯುರೋಪ್ ವಿಶ್ವವಿದ್ಯಾಲಯದ ಅನ್ವಯಿಕ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಇದಕ್ಕೂ ಮೊದಲು ಅವರು ವಾರಂಗಲ್‌ನ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮುಗಿಸಿದ್ದರು. ಅವರ ಕುಟುಂಬದವರು ಮಲ್ಕಾಪುರದಲ್ಲಿದ್ದು, ಮಗನ ಸಾವಿನ ಬಗ್ಗೆ ಜರ್ಮನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೃತಿಕ್ ಕುಟುಂಬದವರು ಮಗನ ಸಾವಿನಿಂದ ಆಘಾತಕ್ಕೀಡಾಗಿದ್ದು, ಮಗನ ದೇಹವನ್ನು ಸ್ವದೇಶಕ್ಕೆ ಕಳುಹಿಸಲು ಸಹಾಯ ಮಾಡುವಂತೆ ಭಾರತೀಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮದುವೆ ಭರವಸೆ ನೀಡಿ ವೈದ್ಯನಿಂದಲೇ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ


