* ಸರ್ಕಾರದ ನೀತಿಗಳನ್ನು ಪ್ರತಿಭಟಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆಕೊಟ್ಟಿದ್ದ ಭಾರತ್ ಬಂದ್* ಭಾರತ್ ಬಂದ್ ಅಂತ್ಯ: ಕೆಲವು ಕಡೆ ಸಾರಿಗೆ, ಬ್ಯಾಂಕಿಂಗ್ ಸೇವೆ ಅಸ್ತವ್ಯಸ್ತ
ನವದೆಹಲಿ(ಮಾ.20): ಸರ್ಕಾರದ ನೀತಿಗಳನ್ನು ಪ್ರತಿಭಟಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆಕೊಟ್ಟಿದ್ದ ಭಾರತ್ ಬಂದ್ ಕೊನೆಯ ಹಾಗೂ 2ನೇ ದಿನವೂ ಮುಂದುವರಿಯಿತು. ಸಾರ್ವಜನಿಕ ಸಾರಿಗೆ ಮತ್ತು ಬ್ಯಾಂಕಿಂಗ್ ಸೇವೆಗಳು ಭಾಗಶಃ ಅಸ್ತವ್ಯಸ್ತಗೊಂಡವು. ಇದರಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಜನರ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರಿತು.
‘ಸೋಮವಾರ ನಡೆದ ಬಂದ್‌ನಿಂದಾಗಿ ಎರಡನೇ ದಿನವಾದ ಮಂಗಳವಾರ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ಕಾರ್ಮಿಕರು ಸಹ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದರು. ಬಹುತೇಕ ಎಲ್ಲಾ ವಲಯಗಳ ಕಾರ್ಮಿಕರು ಈ ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ನಮಗೆ ಗ್ರಾಮೀಣ ಪ್ರದೇಶದಿಂದ ಉತ್ತಮ ಪ್ರತಿಕ್ರಿಯೆ ದೊರಕಿದೆ. ಸೋಮವಾರ ಪ್ರತಿಭಟನೆಯಲ್ಲಿ 20 ಕೋಟಿಗೂ ಹೆಚ್ಚು ಜನರು ಭಾಗವಹಿಸಿದ್ದರು’ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಅಮರ್ಜೀತ್ ಕೌರ್ ಹೇಳಿದ್ದಾರೆ.
ಜನರ ಮೇಲೆ ಪರಿಣಾಮ ಬೀರುವ ಸರ್ಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಯಾವುದೇ ಫಾಮ್‌ರ್‍ನ್ನು ಖಾಸಗೀಕರಣಗೊಳಿಸಬಾರದು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ನೀಡುವ ವೇತನವನ್ನು ಹೆಚ್ಚಿಸಬೇಕು. ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು ಎಂದು ಕಾರ್ಮಿಕ ಸಂಘಟನೆಗಳು ಬೇಡಿಕೆ ಸಲ್ಲಿಸಿವೆ.
