ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆ ಮುಂಬೈನಲ್ಲಿ ಸಮಾಪ್ತಿಯಾಗಿದೆ. ಇಂಡಿಯಾ ಒಕ್ಕೂಟದ ಮೈತ್ರಿ ಪಕ್ಷಗಳು ಶಕ್ತಿ ಪ್ರದರ್ಶನದ ಮೂಲಕ ಬಿಜೆಪಿ ಮಣಿಸಲು ಶಪಥ ಮಾಡಿದೆ. ಇದೇ ವೇಳೆ ರಾಹುಲ್ ಗಾಂಧಿ ನ್ಯಾಯ ಯಾತ್ರೆ ಬಿಜೆಪಿ ಎದೆಯಲ್ಲಿ ನಡುಕ ಹುಟ್ಟಿಸಿದೆ ಎಂದು ವಿಪಕ್ಷಗಳ ನಾಯಕರು ಬಣ್ಣಿಸಿದ್ದಾರೆ.
ನವದೆಹಲಿ(ಮಾ.17) ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇಂಡಿಯಾ ಒಕ್ಕೂಟ ಪಕ್ಷಗಳು ಭರ್ಜರಿ ಶಕ್ತಿ ಪ್ರದರ್ಶನ ನಡೆಸಿದೆ. ರಾಹುಲ್ ಗಾಂಧಿಯ ಭಾರತ್ ಜೋಡೋ ನ್ಯಾಯ ಯಾತ್ರೆ ಮುಂಬೈನಲ್ಲಿಂದ ಸಮಾಪ್ತಿಯಾಗಿದೆ. ಬೃಹತ್ ಸಮಾರೋಪ ಸಮಾರಂಭದಲ್ಲಿ ಇಂಡಿಯಾ ಮೈತ್ರಿ ಪಕ್ಷಗಳ ಪ್ರಮುಖ ನಾಯಕರು ಪಾಲ್ಗೊಂಡಿದ್ದಾರೆ. ವೇದಿಕೆಯಲ್ಲಿ ಶಕ್ತಿ ಪ್ರದರ್ಶನ ನಡೆಸಿದ ನಾಯಕರು, ಬಿಜೆಪಿಗೆ ಮಹತ್ವದ ಸಂದೇಶ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೇರಲಿದೆ ಅನ್ನೋ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದ್ದಾರೆ.
ಈ ಯಾತ್ರೆಯಲ್ಲಿ ದೇಶದ ಪ್ರಮುಖ ಪಕ್ಷಗಳ ನಾಯಕರು ಪಾಲ್ಗೊಂಡಿದ್ದಾರೆ. ಜನಸಾಮಾನ್ಯರು ಈ ಯಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿಗೊಸಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಾವು ಒಂದು ರಾಜಕೀಯ ಪಕ್ಷದ ವಿರುದ್ಧ ಹೋರಾಟ ಮಾಡುತ್ತಿಲ್ಲ, ನಾವು ಒಗ್ಗಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ; ಗ್ರಾಮಂತರದಿಂದ ಡಿಕೆ ಸುರೇಶ್, ಗೀತಾಶಿವರಾಜ್ ಕುಮಾರ್‌ಗೆ ಶಿವಮೊಗ್ಗ ಟಿಕೆಟ್
ಕಾರ್ಯಕ್ರಮದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ಮಲ್ಲಿಕಾರ್ಜುನ ಖರ್ಗೆ, ಪ್ರಜಾಪ್ರಭುತ್ವ, ಸಂವಿಧಾನ ಉಳಿಸಲು ನಾವು ಅದಿಕಾರಕ್ಕೆ ಬರಬೇಕಿದೆ. ಬಿಜೆಪಿ ಮುಗಿಸಲು ಯತ್ನಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಬಿಜೆಪಿ 400 ಸ್ಥಾನ ಎಂದು ಹೇಳುತ್ತಿದೆ. ಇದರ ಹಿಂದಿನ ಕಾರಣವನ್ನು ಕರ್ನಾಟಕ ಸಂಸದರೊಬ್ಬರು ಬಹಿರಂಗಪಡಿಸಿದ್ದಾರೆ. ನಮಗೆ 400ಕ್ಕಿಂತ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಟ್ಟರೆ ಸಂವಿಧಾನ ಬದಲಿಸುತ್ತೇವೆ ಎಂದಿದ್ದಾರೆ. ಬಿಜೆಪಿಗೆ ದೇಶವನ್ನು ಏಕತೆಯಲ್ಲಿಡಲು ಇಷ್ಟಪಡುತ್ತಿಲ್ಲ, ಅಭಿವೃದ್ಧಿ ಮಾಡಲು ಅಧಿಕಾರ ಬಳಸುತ್ತಿಲ್ಲ. ಅವರಿಗೆ ಸಂವಿಧಾನ ಬದಲಿಸುವುದೇ ಮುಖ್ಯ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಮೋದಿ ಯಾವಾಗಲು ಹೇಳುತ್ತಾರೆ, ನಾ ಖಾವುಂಗಾ, ನಾ ಖಾನೆ ದೂಂಗಾ(ಭ್ರಷ್ಟಾಚಾರ ಮೂಲಕ ನಾನು ತಿನ್ನಲ್ಲ, ಇತರರನನ್ನು ತಿನ್ನಲೂ ಬಿಡುವುದಿಲ್ಲ) ಎಂದಿದ್ದಾರೆ. ಆದರೆ ಚುನಾವಣಾ ಬಾಂಡ್ ಮೂಲಕ ಯಾರಿಗೂ ಗೊತ್ತಾಗದಂತೆ ರಹಸ್ಯವಾಗಿ ಹಣ ಪಡೆದುಕೊಂಡಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ವಾರ್ನಿಂಗ್, ಪನೌತಿ, ಜೇಬುಗಳ್ಳ ಹೇಳಿಕೆಗೆ ಗರಂ!
ಜನವರಿ 14 ರಂದು ಮಣಿಪುರದಿಂದ ರಾಹುಲ್ ಗಾಂಧಿ 2ನೇ ಚರಣದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸಿದ್ದರು. ಬರೋಬ್ಬರಿ 6,700 ಕಿಲೋಮೀಟರ್ ಸಂಚರಿಸಿ ಇಂದು ಮುಂಬೈನ ಶಿವಾಜಿ ಪಾರ್ಕ್ ಮೈದಾನದಲ್ಲಿ ಸಮಾಪ್ತಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ಸೇರಿದಂತೆ ಹಲವು ಗಣ್ಯರು ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
