Asianet Suvarna News Asianet Suvarna News

ಭಾರತ್ ಜೋಡೋ ಸಮಾರೋಪ: ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಡಿಕೆಶಿ

ಇಂದು ಕಾಶ್ಮೀರದಲ್ಲಿ ಭಾರತ ಜೋಡೋ ಯಾತ್ರೆ ಸಮಾರೋಪ ಸಮಾರಂಭ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಸೇರಿದಂತೆ ಪ್ರಮುಖ ನಾಯಕರು ಕಣಿವೆ ರಾಜ್ಯಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಕಾಶ್ಮೀರದ ಹಿಮಪಾತ ಹಾಗೂ ಪ್ರಕೃತಿ ಸೌಂದರ್ಯಕ್ಕೆ ಮನಸೋತಿರುವ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಮೂಲಕ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

Bharat jodo yatre:DK Shivakumar was enthralled by the beauty of Srinagar rav
Author
First Published Jan 30, 2023, 1:22 PM IST

ಶ್ರೀನಗರ (ಜ.30) : ಒಡೆದ ಮನಸ್ಸುಗಳನ್ನು ಒಂದುಗೂಡಿಸಲು ಹಾಗೂ ದೇಶದ ಜ್ವಲಂತ ಸಮಸ್ಯೆಗಳ ಕುರಿತು ಜನಪರ ಧ್ವನಿ ಎತ್ತಲು ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಐತಿಹಾಸಿಕ ಭಾರತ ಜೋಡೋ ಯಾತ್ರೆ ಸೋಮವಾರ ಸಂಪೂರ್ಣವಾಗುತ್ತಿದೆ.

ಕಳೆದ ಐದು ತಿಂಗಳಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುದೀರ್ಘ 3570 ಕಿ.ಮೀ. ಸಾಗಿದ ಈ ಯಾತ್ರೆ ದೇಶದ ಇತಿಹಾಸದ ಪುಟ ಸೇರಿದೆ. ಹೊಸ ಮೈಲುಗಲ್ಲು ಸೃಷ್ಟಿಸಿದೆ.

ವಿಭಿನ್ನ ಹವಾಮಾನಗಳ ವೈಪರಿತ್ಯ ಸವಾಲು, ರಾಜಕೀಯ ಎದುರಾಳಿಗಳ ಟೀಕೆ, ಷಡ್ಯಂತ್ರ, ಅಪಪ್ರಚಾರ ಸೇರಿದಂತೆ ಎಲ್ಲ ಅಡೆತಡೆಗಳನ್ನು ಮೀರಿ ಯಾತ್ರೆ ತನ್ನ ಗುರಿ ತಲುಪಿದೆ. ಇದು ಕಾಂಗ್ರೆಸ್(Congress) ಹಾಗೂ ಪಕ್ಷದ ನಾಯಕರಿಗೆ ದೇಶದ ಬಗ್ಗೆ ಇರುವ ಕಾಳಜಿ, ಬದ್ಧತೆಗೆ ಸಾಕ್ಷಿ.

ನೀವೂ ಬೇಡ, ನಿಮ್ಮ ಹೆಣವೂ ಬೇಡ: ಸಿದ್ದರಾಮಯ್ಯರ ಹೇಳಿಕೆಗೆ ಛಲವಾದಿ ನಾರಾಯಣಸ್ವಾಮಿ ಟಾಂಗ್ 

ಇಂದು ಕಾಶ್ಮೀರ(Kashmir)ದಲ್ಲಿ ಭಾರತ ಜೋಡೋ ಯಾತ್ರೆ(Bharat Jodo yatre) ಸಮಾರೋಪ ಸಮಾರಂಭ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಸೇರಿದಂತೆ ಪ್ರಮುಖ ನಾಯಕರು ಕಣಿವೆ ರಾಜ್ಯಕ್ಕೆ ತೆರಳಿದ್ದಾರೆ. 

ಈ ಸಂದರ್ಭದಲ್ಲಿ ಕಾಶ್ಮೀರದ ಹಿಮಪಾತ ಹಾಗೂ ಪ್ರಕೃತಿ ಸೌಂದರ್ಯಕ್ಕೆ ಮನಸೋತಿರುವ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಮೂಲಕ ತಮ್ಮ ಅನುಭವ ಹಂಚಿಕೊಂಡಿದ್ದಾರೆ. 

'ಭಾರತ ಜೋಡೋ ಯಾತ್ರೆ ಅಂತಿಮ ದಿನ ನಾವೆಲ್ಲ ಕಾಶ್ಮೀರದ ಶ್ರೀನಗರ(Srinagar)ಕ್ಕೆ ಆಗಮಿಸಿದ್ದೇವೆ. ದೇಶವನ್ನು ಒಗ್ಗೂಡಿಸಿ, ದೇಶದ ಐಕ್ಯತೆಗೆ ರಾಹುಲ್ ಗಾಂಧಿ ಅವರು ಈ ಯಾತ್ರೆ ಆರಂಭಿಸಿದ್ದು, ಇಂದು ಯಾತ್ರೆಯ ಅಂತಿಮ ದಿನವಾಗಿದೆ. ಈ ಸಮಾರೋಪ ಕಾರ್ಯಕ್ರಮಕ್ಕೆ ಸುಮಾರು 100 ಸಂಸದರು, ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯರು, ಪ್ರಮುಖ ನಾಯಕರು ಸೇರಿದಂತೆ ಸಾವಿರಾರು ಮಂದಿ ಕಾರ್ಯಕ್ರಮಕ್ಕೆ ಆಗಮಿಸಿದ್ದೇವೆ. 

ಯಾತ್ರೆ ರುವಾರಿ ರಾಹುಲ್ ಗಾಂಧಿ(Rahul Gandhi), ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ(Mallikarjun kharge) ಅವರ ಜತೆ ಊಟ ಮುಗಿಸಿ ನಮ್ಮ ಕೊಣೆಗೆ ಬಂದು ಮಲಗುವಷ್ಟರಲ್ಲಿ ರಾತ್ರಿ 1 ಗಂಟೆ ಆಗಿತ್ತು. ರಾತ್ರಿ ಇಲ್ಲಿನ ಹವಾಮಾನ 9° ಸೆಲ್ಸಿಯಸ್ ಇತ್ತು. ಬೆಳಗಿನ ಜಾವ 2 ಗಂಟೆ ನಂತರ ಹಿಮ ಸುರಿಯಲು ಆರಂಭವಾಗಿದ್ದು, ಇಡೀ ಪ್ರದೇಶ ಹಿಮದಿಂದ ತುಂಬಿದೆ. ಇಂದು ಬೆಳಗ್ಗೆ ಕೊಠಡಿಯ ಹೊರಗೆ ಬಂದು ನೋಡಿದಾಗ ನನ್ನ ಜೀವನದಲ್ಲಿ ಎಂದೂ ನೋಡಿರದ ಹಿಮಪಾತ ಹಾಗೂ ಅದರ ಸೌಂದರ್ಯ ಮನಸೂರೆಗೊಂಡಿದೆ. ಧಾರಾಕಾರ ಮಳೆಯಂತೆ ಹಿಮ ಸುರಿಯುತ್ತಿದೆ. ಹಿಂದೆಂದೂ ನಾನು ಈ ರೀತಿಯ ಅದ್ಭುತ ದೃಶ್ಯ ಕಂಡಿರಲಿಲ್ಲ. ನಾನು ಈ ಹಿಂದೆ ಸ್ವಿಜರ್ಲೆಂಡ್ ಮತ್ತಿತರ ದೇಶಗಳಿಗೆ ಭೇಟಿ ನೀಡಿದ್ದೇನೆ. ಆದರೆ ಇಂದು ನನಗೆ ಆಗಿರುವ ಪ್ರಕೃತಿ ಸೌಂದರ್ಯದ ಅನುಭವ ಹಿಂದೆಂದೂ ಆಗಿರಲಿಲ್ಲ. ಇದನ್ನು ಎಂದು ಮರೆಯಲು ಸಾಧ್ಯವಿಲ್ಲ.

ಜಮ್ಮುವಿನಿಂದ ಲಾಲ್ ಚೌಕ್‌ವರೆಗೆ ಪಾದಯಾತ್ರೆ ಮಾಡಿ: ಅಮಿತ್ ಶಾಗೆ ರಾಹುಲ್ ಗಾಂಧಿ ಸವಾಲು..!

ಈ ಕಾಶ್ಮೀರ ದೇಶದ ಆಸ್ತಿ ನಾವು ಇದನ್ನು ಕಾಪಾಡಿಕೊಳ್ಳಬೇಕು. ಈ ಹವಾಮಾನ ಪರಿಸ್ಥಿತಿಯಲ್ಲಿ ನಮ್ಮ ಯೋಧರು ಹೇಗೆ ಗಡಿ ಕಾಯುತ್ತಾರೆ. ಅವರಿಗೆ ಧನ್ಯವಾದಗಳು' ಎಂದು ಶಿವಕುಮಾರ್ ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. 

 

Follow Us:
Download App:
  • android
  • ios