ನವದೆಹಲಿ(ನ.18) ಪಿಎಂ ಮೋದಿ ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡೆನ್‌ಗೆ ಕರೆ ಮಾಡಿ ಶುಭ ಕೋರಿದ್ದಾರೆ. ಟ್ವೀಟ್ ಮೂಲಕ ಪಿಎಂ ಈ ಮಾಹಿತಿಯನ್ನು ನೀಡಿದ್ದಾರೆ. 

ಚುನಾವಣೆ ಮುಗಿದರೂ ನಿಲ್ಲದ ಟೀಕೆ: ಬೈಡೆನ್ ವಿರುದ್ಧ ಗಂಭೀರ ಆರೋಪ!

ತಮ್ಮ ಟ್ವೀಟ್‌ನಲ್ಲಿ ಪಿಎಂ ಮೋದಿ ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡೆನ್‌ಗೆ ಕರೆ ಮಾಡಿ ಶುಭ ಕೋರಿದ್ದೇನೆ. ನಾವು ಭಾರತ ಹಾಗೂ ಅಮೆರಿಕ ನಡುವಿನ ಕಾರ್ಯತಂತ್ರದ ಸಹಭಾಗಿತ್ವಕ್ಕೆ ನಮ್ಮ ದೃಢವಾದ ನಿರ್ಧಾರವನ್ನು ತಳೆದಿದ್ದೇವೆ. ಕೋವಿಡ್ -19 ಸಾಂಕ್ರಾಮಿಕ, ಹವಾಮಾನ ಬದಲಾವಣೆ, ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರ ಸೇರಿದಂತೆ ಉಭಯ ರಾಷ್ಟ್ರಗಳ ಆದ್ಯತೆಯ ಬಗ್ಗೆ ಚರ್ಚಿಸಲಾಗಿದೆ ಎಂದಿದ್ದಾರೆ.

ಅಮೆರಿಕ ಮೇಲೆ ಕೋವಿಡ್‌ ಲಾಕ್‌ಡೌನ್‌ ತೂಗುಕತ್ತಿ!

ಇದೇ ವೇಳೆ ಅಮೆರಿಕ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಅವರಿಗೆ ನಾನು ಆತ್ಮೀಯ ಅಭಿನಂದನೆಗಳನ್ನು ತಿಳಿಸಿದ್ದೇನೆ. ಅವರ ಯಶಸ್ಸು ಇಂಡೋ-ಯುಎಸ್ ಸಂಬಂಧಗಳಿಗೆ ಅಪಾರ ಶಕ್ತಿಯ ಮೂಲವಾಗಿದೆ ಮಾತ್ರವಲ್ಲದೆ, ಭಾರತೀಯ-ಅಮೇರಿಕನ್ ಸಮುದಾಯದ ಸದಸ್ಯರಿಗೆ ಹೆಮ್ಮೆ ಮತ್ತು ಸ್ಫೂರ್ತಿಯ ಸಂಗತಿಯಾಗಿದೆ ಎಂದು ಪಿಎಂ ಮೋದಿ ತಿಳಿಸಿದ್ದಾರೆ.