ಪಾಟ್ನಾ[ಮಾ.07]: ಬಿಹಾರದ ಮುಜಪ್ಪರಪುರದಲ್ಲಿರುವ ಕಾಂಟೀಯಲ್ಲಿ ಟ್ರ್ಯಾಕ್ಟರ್ ಹಾಗೂ ಟ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 4 ಮಂದಿಗೆ ಗಂಭೀರ ಗಾಯಗಳಾಗಿವೆ. ಮೃತರೆಲ್ಲರೂ ಮುಜಪ್ಪರಪುರದ ಹಥೌಡೀ ನಿವಾಸಿಗರೆಂದು ಕಾಂಟೀ ಪೊಲೀಸ್ ಠಾಣೆಯ ಅಧಿಕಾರಿ ಸಚ್ಚಿದಾನಂದ ಸಿಂಗ್ ತಿಳಿಸಿದ್ದಾರೆ.

ಕಾಂಟೀ ಠಾಣಾ ವ್ಯಾಪ್ತಿಯ ಟರ್ಮಾ ಚೌಕ್ ಬಳಿ NH 28ರ ಹೆಲ್ಪ್ ಕೇರ್ ಎದುರು ಈ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

ಲಭ್ಯವಾದ ಮಾಹಿತಿ ಅನ್ವಯ ವಾಹನ ಡಿಕ್ಕಿ ಹೊಡೆದ ರಭಸಕ್ಕೆ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಸ್ಥಳೀಯ ಆಸ್ಪತ್ರೆಯಲ್ಲಿ ಮೃತರಗಿದ್ದಾರೆ. ಘಟನೆ ಬಳಿಕ ಘಟನಾ ಸ್ಥಳದಲ್ಲಿ ಜನರು ಸೇರಿದ್ದು, ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. 

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"