'ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿ ಮಾಡುವುದಿಲ್ಲ'| ಬಿಹಾರ ಸಿಎಂ ನಿತೀಶ್ ಕುಮಾರ್ ಭರವಸೆ| ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿದ್ದರಿಂದ ಟೀಕೆಗೆ ಗುರಿಯಾಗಿದ್ದ ನಿತೀಶ್ ಕುಮಾರ್| ರಾಜ್ಯದಲ್ಲಿ ಎನ್‌ಆರ್‌ಸಿ ಜಾರಿಗೆ ಅವಕಾಶವಿಲ್ಲ ಎಂದ ಬಿಹಾರ ಸಿಎಂ|

ಪಾಟ್ನಾ(ಡಿ.20): ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಬಿಹಾರದಲ್ಲಿ ಜಾರಿ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿದ್ದರಿಂದ ಬೆಂಬಲಿಗರಿಂದ ತೀವ್ರ ಟೀಕೆಗೆ ಗುರಿಯಾಗಿರುವ ನಿತೀಶ್ ಕುಮಾರ್, ಅಲ್ಪಸಂಖ್ಯಾತರ ಪರವಾಗಿ ಧೀರ್ಘಕಾಲ ಜೊತೆಯಲ್ಲಿರುವುದಾಗಿ ಭರವಸೆ ನೀಡಿದ್ದಾರೆ.

ಭಾರತದಲ್ಲಿರುವ ಅಕ್ರಮ ವಲಸಿಗರನ್ನು ಹೊರಹಾಕಲು 2024 ಡೆಡ್‌ಲೈನ್; ಎನ್‌ಆರ್‌ಸಿ ಜಾರಿ ಹೇಗೆ?

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತೀಶ್ ಕುಮಾರ್, ರಾಜ್ಯದಲ್ಲಿ ಎನ್‌ಆರ್‌ಸಿ ಜಾರಿಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

Scroll to load tweet…

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿದ್ದಕ್ಕಾಗಿ ಪ್ರತಿಪಕ್ಷಗಳು ನಿತೀಶ್ ಕುಮಾರ್ ಅವರ ಜಾತ್ಯತೀಯ ಸಿದ್ದಾಂತವನ್ನು ಪ್ರಶ್ನಿಸಿದ್ದವು. ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್, ಪ್ರಧಾನ ಕಾರ್ಯದರ್ಶಿ ಪವನ್ ವರ್ಮಾ, ಮತ್ತಿತರ ನಾಯಕರು ಕೂಡ ನಿತೀಶ್ ನಿರ್ಧಾರದಿಂದ ಬೇಸರಗೊಂಡಿದ್ದಾರೆ.

‘NRCಯಿಂದ ದೇಶದ ಬಡ ಜನತೆ ಮತ್ತೆ ಸಂಕಷ್ಟಕ್ಕೆ ಹೋಗಬಹುದು’