ಪಟನಾ (ಅ.23): ಬಿಹಾರ ವಿಧಾನಸಭೆ ಚುನಾವಣೆ ಪ್ರಚಾರ ತಾರಕಕ್ಕೇರಿರುವಾಗಲೇ ಉಪಮುಖ್ಯಮಂತ್ರಿ ಹಾಗೂ ಬಿಹಾರ ಬಿಜೆಪಿಯ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರಾಗಿರುವ ಸುಶೀಲ್‌ ಮೋದಿ ಅವರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. 

ಅವರನ್ನು ಪಟನಾದ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಪ್ರಚಾರ ಚಟುವಟಿಕೆಗಳಿಂದ ದೂರ ಉಳಿದಿದ್ದ ಸುಶೀಲ್‌ ಮೋದಿ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದಾಗಲೂ ಕಾಣಿಸಿಕೊಂಡಿರಲಿಲ್ಲ. 

ಕೊರೋನಾ ಸೋಂಕಿತ ಶವ ಪರೀಕ್ಷೆ : ಹೊರಬಿತ್ತು ಆತಂಕಕಾರಿ ಸಂಗತಿ

ಬಳಿಕ ಟ್ವೀಟ್‌ ಮಾಡಿರುವ ಅವರು, ಕೊರೋನಾ ಪಾಸಿಟಿವ್‌ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ. ದೇಹ ಸ್ಥಿತಿ ಸಾಮಾನ್ಯವಾಗಿದೆ. ಸಿಟಿ ಸ್ಕಾ್ಯನ್‌ ಮಾಡಿಸಿದ್ದು, ತೊಂದರೆ ಕಂಡುಬಂದಿಲ್ಲ. ಶೀಘ್ರದಲ್ಲೇ ಪ್ರಚಾರಕ್ಕೆ ಮರಳುತ್ತೇನೆ ಎಂದಿದ್ದಾರೆ.