ಪಟನಾ[ಫೆ.26]: ದೇಶಾದ್ಯಂತ ಎನ್‌ಆರ್‌ಸಿ ಜಾರಿಯ ಯಾವುದೇ ಪ್ರಸ್ತಾಪ ಸದ್ಯಕ್ಕೆ ತನ್ನ ಮುಂದಿಲ್ಲ ಎಂಬ ಕೇಂದ್ರ ಸರ್ಕಾರದ ಸ್ಪಷ್ಟಭರವಸೆ ಹೊರತಾಗಿಯೂ, ಜೆಡಿಯು ಜೊತೆ ಬಿಜೆಪಿ ಅಧಿಕಾರ ಹಂಚಿಕೊಂಡಿರುವ ಬಿಹಾರದಲ್ಲಿ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ)ಯನ್ನು ಜಾರಿಗೊಳಿಸದೇ ಇರುವ ಗೊತ್ತುವಳಿಯನ್ನು ಅಂಗೀಕರಿಸಲಾಗಿದೆ.

ಬಿಹಾರ ವಿಧಾನಸಭೆಯಲ್ಲಿ ಸ್ಪೀಕರ್‌ ವಿಜಯ್‌ ಕುಮಾರ್‌ ಚೌಧರಿ ಅವರು ಮಂಡಿಸಿದ ಗೊತ್ತುವಳಿಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಅಲ್ಲದೇ ರಾಷ್ಟ್ರೀಯ ಜನಸಂಖ್ಯಾ ನೊಂದಣಿ (ಎನ್‌ಪಿಆರ್‌)ಯನ್ನು ತಿದ್ದುಪಡಿಯೊಂದಿಗೆ 2010ರ ರೂಪದಲ್ಲಿ ಜಾರಿಗೊಳಿಸಬೇಕು ಎಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ.

ನೀವು ಸಾಕಿದ ಹಾವುಗಳೇ ಒಂದು ದಿನ ನಿಮಗೆ ಕಚ್ಚುತ್ತವೆ: ಮೋದಿಗೆ ಓವೈಸಿ ಎಚ್ಚರಿಕೆ!

ಈ ಮುನ್ನ ಕಾಂಗ್ರೆಸ್‌ ಹಾಗೂ ಬಿಜೆಪಿಯೇತರ ಸರ್ಕಾರಗಳು ಅಸ್ತಿತ್ವದಲ್ಲಿ ಇರುವ ರಾಜ್ಯಗಳಲ್ಲಿ ಎನ್‌ಆರ್‌ಸಿ ವಿರುದ್ಧ ಗೊತ್ತುವಳಿಗಳನ್ನು ಅಂಗೀಕರಿಸಲಾಗಿತ್ತು.