ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಬಿಟ್ಟ ಬಿಹಾರಿ ಸೆರೆ
ಇತ್ತೀಚೆಗೆ ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ ಎಂದು ಸುಳ್ಳು ವಿಡಿಯೋ ಹರಿಬಿಟ್ಟ 32 ವರ್ಷದ ವ್ಯಕ್ತಿಯನ್ನು ಜಾರ್ಖಂಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕೊಯಮತ್ತೂರು: ಇತ್ತೀಚೆಗೆ ತಮಿಳುನಾಡಿನಲ್ಲಿ ಬಿಹಾರದ ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ ಎಂದು ಸುಳ್ಳು ವಿಡಿಯೋ ಹರಿಬಿಟ್ಟ 32 ವರ್ಷದ ವ್ಯಕ್ತಿಯನ್ನು ಜಾರ್ಖಂಡಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ತಿರುಪುರ ಸೈಬರ್ ಅಪರಾಧ ದಳದ ವಿಶೇಷ ತಂಡ ಆರೋಪಿಯನ್ನು ಬಂಧಿಸಿದೆ. ಬಂಧಿತ 32 ವರ್ಷದ ವ್ಯಕ್ತಿ ಬಿಹಾರ ಮೂಲದವನಾಗಿದ್ದು ಪ್ರಸ್ತುತ ಜಾರ್ಖಂಡಿನ (Jharkhand) ಲಾತೇಹಾರದಲ್ಲಿ ಕೆಲಸ ಮಾಡುತ್ತಿದ್ದ. ಈತ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮಿಳುನಾಡಿನ ತಿರುಪುರ್‌ನಲ್ಲಿ (Tirupur) ವಲಸೆ ಕಾರ್ಮಿಕರ ಮೇಲೆ ಹಲ್ಲೆಯಾಗಿದೆ ಎಂಬಂತೆ ಫೇಕ್ ವಿಡಿಯೋವನ್ನು ಹರಿಬಿಟ್ಟು ಕಾರ್ಮಿಕರಲ್ಲಿ ಭಯ ಮೂಡಿಸಿದ್ದ.
ಪ್ರಶಾಂತ್ ಕುಮಾರ್ (Prashanth kumar) ಬಂಧಿತ ಆರೋಪಿ. ಮಾರ್ಚ್ 11 ರಂದು ಈತನನ್ನು ಬಂಧಿಸಿ ಲಾತೇಹಾರ್‌ನ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನಂತರ ಟ್ರಾನ್ಸಿಟ್ ವಾರೆಂಟ್ ಪಡೆದು ತಮಿಳುನಾಡಿನ (Tamilnadu) ತಿರುಪುರ್‌ನ ಮೂರನೇ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರುಪಡಿಸಿದ್ದರು. ನ್ಯಾಯಾಲಯ ಈತನನ್ನು ನ್ಯಾಯಾಂಗ ವಶಕ್ಕೆ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬಿಹಾರ ಸಮಿತಿ ತಮಿಳುನಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇದು ಸುಳ್ಳು ವಿಡಿಯೋ ಎಂದು ಖಾತ್ರಿಪಡಿಸಿದ್ದರು. ಅನಂತರ ಇದರ ತನಿಖೆ ನಡೆಸಿದ ತಿರುಪೂರು ಸೈಬರ್ ಪೊಲೀಸರು (Cyber Police), ಈತನನ್ನು ಜಾರ್ಖಂಡಿನಲ್ಲಿ ಬಂಧಿಸಿ ತಿರುಪುರದ 3ನೇ ಮ್ಯಾಜಿಸ್ಪ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನದಲ್ಲಿಡುವಂತೆ ಆದೇಶಿಸಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಪೊಲೀಸರು 11 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಮೂವರನ್ನು ಬಂಧಿಸಿದ್ದರು.
ಉ.ಪ್ರ. ಬಿಜೆಪಿ ಮುಖಂಡ, ಇಬ್ಬರು ಪತ್ರಕರ್ತರ ವಿರುದ್ಧ ಕೇಸ್
ಕೆಲ ದಿನಗಳಿಂದ ತಮಿಳುನಾಡಿನಲ್ಲಿ ಬಿಹಾರಿ ವಲಸಿಗ ಕಾರ್ಮಿಕರನ್ನು ಹತ್ಯೆಗೈಯಲಾಗುತ್ತಿದೆ’ ಎಂದು ಉತ್ತರ ಭಾರತದ ರಾಜ್ಯಗಳಲ್ಲಿ ತೀವ್ರ ವದಂತಿ ಹರಡಿದೆ. ಈ ಕುರಿತು ಸುಳ್ಳು ಟ್ವೀಟ್ ಮಾಡಿದ ಉತ್ತರ ಪ್ರದೇಶದ ಬಿಜೆಪಿ ನಾಯಕನ ವಿರುದ್ಧ ಹಾಗೂ ಇಬ್ಬರು ಪತ್ರಕರ್ತರ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವಿರುದ್ಧ ಕೇಸ್
ಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ಹಲ್ಲೆ ವದಂತಿ ಪ್ರಕರಣ ಹಿನ್ನೆಲೆ ಅಲ್ಲಿನ ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಕೆ. ಅಣ್ಣಾಮಲೈ ಆಡಳಿತಾರೂಢ ಡಿಎಂಕೆ ಪಕ್ಷವನ್ನು ಶನಿವಾರ ಹೊಣೆಗಾರರನ್ನಾಗಿ ಮಾಡಿದ್ದರು. ಆದರೆ, ಇಂದು ತಮಿಳುನಾಡು ಪೊಲೀಸರು ಅಣ್ಣಾಮಲೈ ವಿರುದ್ಧ ಗುಂಪುಗಳ ನಡುವೆ ಹಿಂಸಾಚಾರಕ್ಕೆ ಪ್ರಚೋದನೆ ಮತ್ತು ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿ ರಾಜ್ಯ ಘಟಕದ (BJP State Unit) ಮುಖ್ಯಸ್ಥರ (Chief) ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಮತ್ತು ಇತರ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಸೆಕ್ಷನ್‌ಗಳ ಅಡಿಯಲ್ಲಿ ಸೈಬರ್ ಕ್ರೈಂ ವಿಭಾಗವು (Cyber Crime Division) ಆರೋಪ ಮಾಡಿದೆ. ಅಲ್ಲದೆ, ಅಧಿಕಾರಿಗಳ ಪ್ರಕಾರ, ಘಟನೆಯ ಬಗ್ಗೆ ಬಿಜೆಪಿ ಬಿಹಾರ (BJP Bihar) ಟ್ವಿಟ್ಟರ್ ಖಾತೆದಾರರ ವಿರುದ್ಧವೂ ಪ್ರಕರಣ ದಾಖಲಾಗಿದೆ.
ತಮಿಳ್ನಾಡಲ್ಲಿ ಬಿಹಾರಿಗಳ ಕೊಲೆ ವದಂತಿ: ಉ.ಪ್ರ. ಬಿಜೆಪಿ ಮುಖಂಡ, ಇಬ್ಬರು ಪತ್ರಕರ್ತರ ವಿರುದ್ಧ ಕೇಸ್
ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ (Annamalai) ನಿನ್ನೆ ವಲಸೆ ಕಾರ್ಮಿಕರ ಸಮಸ್ಯೆಯ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಅವರು ತಮಿಳುನಾಡಿನಲ್ಲಿ (Tamil Nadu) ಸುರಕ್ಷಿತವಾಗಿದ್ದಾರೆ. ಆದರೆ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ-ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) (DMK) ಮತ್ತು ಅದರ ಮೈತ್ರಿ ಪಕ್ಷದ ನಾಯಕರು ಅವರ ಮೇಲಿನ ದ್ವೇಷಕ್ಕೆ ಕಾರಣ ಎಂದು ಹೇಳಿದ್ದರು. ಹಾಗೂ, ರಾಜ್ಯದಲ್ಲಿ ಬಿಹಾರದ ಜನರ ಮೇಲಿನ ದಾಳಿಯ ಬಗ್ಗೆ ಸುಳ್ಳು ಸುದ್ದಿ ಹರಡುವುದನ್ನು ವಿರೋಧಿಸಿದ ಅವರು, ತಮಿಳರು ಉತ್ತರ ಭಾರತೀಯರ ವಿರುದ್ಧ "ಪ್ರತ್ಯೇಕತೆ" ಮತ್ತು "ನೀಚ ದ್ವೇಷ" ವನ್ನು ಬೆಂಬಲಿಸುವುದಿಲ್ಲ ಎಂದೂ ಹೇಳಿದ್ದರು.
ಹಾಗೆ, "ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲಿನ ದಾಳಿಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಿರುವ ನಕಲಿ ಸುದ್ದಿಗಳನ್ನು ನೋಡುವುದು ನಿರಾಶಾದಾಯಕವಾಗಿದೆ. ನಾವು, ತಮಿಳು ಜನರು, "ಜಗತ್ತು ಒಂದೇ" ಎಂಬ ಪರಿಕಲ್ಪನೆಯನ್ನು ನಂಬುತ್ತೇವೆ ಮತ್ತು ನಮ್ಮ ಉತ್ತರ ಭಾರತೀಯ ಸ್ನೇಹಿತರ ವಿರುದ್ಧ ಪ್ರತ್ಯೇಕತಾವಾದ ಮತ್ತು ಕೆಟ್ಟ ದ್ವೇಷವನ್ನು ಅನುಮೋದಿಸುವುದಿಲ್ಲ ಎಂದು ಅಣ್ಣಾಮಲೈ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದರು.
ಬಿಹಾರ ವಲಸಿಗರ ಮೇಲೆ ದಾಳಿ ವದಂತಿ: ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವಿರುದ್ಧ ಕೇಸ್