ಮದುರೈ(ಜ.31): ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡಲಿದೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಶನಿವಾರ ಘೋಷಿಸಿದರು.

ಮದುರೈನಲ್ಲಿ ಶನಿವಾರ ನಡೆದ ಕೋರ್‌ ಕಮಿಟಿ ಸಭೆಯ ವೇಳೆ ಈ ನಿರ್ಧಾರ ಪ್ರಕಟಿಸಿರುವ ನಡ್ಡಾ, 2021ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಒಟ್ಟಾಗಿ ಸ್ಪರ್ಧೆ ಮಾಡಲಿವೆ ಎಂದು ಹೇಳಿದರು.

ಎರಡು ವಾರಗಳ ಹಿಂದಷ್ಟೇ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರು ಗೃಹ ಸಚಿವ ಅಮಿತ್‌ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.

ತಮಿಳುನಾಡಿನಲ್ಲಿ ಏಪ್ರಿಲ್‌ - ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳು ಈಗಾಗಲೇ ಮೈತ್ರಿ ಮಾಡಿಕೊಂಡಿವೆ.

ಆಪ್‌ ಜತೆ ಕಮಲ್‌ ಮೈತ್ರಿ:

ಈ ನಡುವೆ ಆಮ್‌ ಆದ್ಮಿ ಪಕ್ಷವು ನಟ ಕಮಲ್‌ ಹಾಸನ್‌ ಅವರ ಮಕ್ಕಳ್‌ ನೀದಿ ಮಯ್ಯಂ ಪಕ್ಷದ ಜತೆ ಹೊಂದಾಣಿಕೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ.