Breaking: ಆಂಧ್ರಪ್ರದೇಶದಲ್ಲಿ ಟಿಡಿಪಿ-ಜನಸೇನಾ ಜೊತೆ ಬಿಜೆಪಿ ಮೈತ್ರಿ

ಆಂಧ್ರಪ್ರದೇಶದಲ್ಲಿ ಟಿಡಿಪಿ ಹಾಗೂ ಜನಸೇನಾ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಘೋಷಣೆ ಮಾಡಿದ್ದಾರೆ. ರಾಜ್ಯದ ಜನರ ಹಿತಾಸಕ್ತಿಯಿಂದ ಈ ನಿರ್ಧಾರ ಮಾಡಿರುವುದಾಗಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
 

BJP announce alliance with TDP Janasena in Andhra Pradesh san

ನವದೆಹಲಿ (ಮಾ.9): ಆಂಧ್ರಪ್ರದೇಶದಲ್ಲಿ ಶನಿವಾರ ಬಿಜೆಪಿ, ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನಸೇನಾ ಪಕ್ಷಗಳ ನಡುವೆ ಮೈತ್ರಿ ಮಾಡಿಕೊಳ್ಳಲಾಗಿದೆ. ಈ ಕುರಿತಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅಧಿಕೃತವಾಗಿ ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಆಂಧ್ರಪ್ರದೇಶ ಕೆಟ್ಟ ರೀತಿಯಲ್ಲಿ ಹಾಳಾಗಿದೆ ಎಂದಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು,  ಈ ಮೈತ್ರಿಯಿಂದ ದೇಶ ಮತ್ತು ರಾಜ್ಯಕ್ಕೆ ಲಾಭವಾಗಲಿದೆ ಎಂದು ಹೇಳಿದ್ದಾರೆ. ಅದೇ ಸಮಯದಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶ ಮತ್ತು ರಾಜ್ಯ ಖಂಡಿತವಾಗಿಯೂ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು. ಒಂದೆರೆಡು ದಿನದಲ್ಲಿ ಸೀಟು ಹಂಚಿಕೆ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದು ಬಿಜೆಪಿ ಹೇಳಿದೆ.

ಮೈತ್ರಿ ಸಂಬಂಧ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಸಭೆ ನಡೆಯಿತು. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಭಾಗವಹಿಸಿದ್ದರು. ನಂತರ ಟಿಡಿಪಿ ಸಂಸದ ಕನಕಮೇಡಲ ರವೀಂದ್ರ ಕುಮಾರ್ ಕೂಡ ತಮ್ಮ ಪಕ್ಷ ಎನ್‌ಡಿಎ ಸೇರುವುದಾಗಿ ಘೋಷಣೆ ಮಾಡಿದ್ದರು. 2018 ರವರೆಗೆ, ಟಿಡಿಪಿ ಬಿಜೆಪಿ ನೇತೃತ್ವದ ಮೈತ್ರಿ NDA ಯ ಪ್ರಮುಖ ಘಟಕಗಳಲ್ಲಿ ಒಂದಾಗಿತ್ತು. ಆದರೆ, 2018ರಲ್ಲಿ ರಾಜಕೀಯ ಕಾರಣಗಳಿಗಾಗಿ ಚಂದ್ರಬಾಬು ನಾಯ್ಡು ಎನ್‌ಡಿಎಯನ್ನು ತೊರೆಯುವ ನಿರ್ಧಾರ ಮಾಡಿದ್ದರು.

ಎನ್‌ಡಿಟಿವಿ ವರದಿ ಪ್ರಕಾರ, ಸೀಟು ಹಂಚಿಕೆ ಕುರಿತು ಉಭಯ ಪಕ್ಷಗಳ ನಡುವೆ ಚರ್ಚೆ ನಡೆಯುತ್ತಿದೆ. ಆಂಧ್ರಪ್ರದೇಶವು 25 ಲೋಕಸಭಾ ಸ್ಥಾನಗಳನ್ನು ಮತ್ತು 175 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಬಿಜೆಪಿ 8-10 ಲೋಕಸಭಾ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಯಸಿದೆ, ಆದರೆ ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷವು ಎನ್‌ಡಿಎಗೆ ಸೇರಿದರೆ, ಬಿಜೆಪಿ ತನ್ನ ಪರವಾಗಿ 5-6 ಸ್ಥಾನಗಳನ್ನು ಪಡೆಯಬಹುದು.
ಜೆಎಸ್‌ಪಿ ಈಗಾಗಲೇ ಟಿಡಿಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಟಿಡಿಪಿ ಅವರಿಗೆ ಮೂರು ಲೋಕಸಭೆ ಮತ್ತು 24 ವಿಧಾನಸಭಾ ಸ್ಥಾನಗಳನ್ನು ನೀಡಿದೆ. ವೈಜಾಗ್, ವಿಜಯವಾಡ, ಅರಕು, ರಾಜಂಪೇಟೆ, ರಾಜಮಂಡ್ರಿ, ತಿರುಪತಿ ಮುಂತಾದ ಪ್ರಮುಖ ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸಲು ಬಿಜೆಪಿ ಬಯಸಿದೆ.

2019ರ ಲೋಕಸಭೆ ಚುನಾವಣೆಗೆ ಮುನ್ನ ಟಿಡಿಪಿ 2018ರಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿತ್ತು. ಆಂಧ್ರಪ್ರದೇಶಕ್ಕೆ ಪೂರ್ಣ ರಾಜ್ಯದ ಸ್ಥಾನಮಾನ ಸಿಗದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಚಂದ್ರಬಾಬು ನಾಯ್ಡು ಎನ್‌ಡಿಎ ಸರ್ಕಾರದಿಂದ ತಮ್ಮ ಹೆಸರನ್ನು ಹಿಂಪಡೆದಿದ್ದರು. ಮೈತ್ರಿಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಳ್ಳುವ ಸಂದರ್ಭದಲ್ಲಿ ಅವರು ನಮ್ಮ ನಿರ್ಧಾರ ಸಂಪೂರ್ಣವಾಗಿ ಸರಿ ಎಂದು ಹೇಳಿದ್ದರು. ಕೇಂದ್ರ ಸರ್ಕಾರ ಆಂಧ್ರಕ್ಕೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಬಜೆಟ್ ಅಧಿವೇಶನದ ಆರಂಭದಿಂದಲೂ ಸಂಸತ್ತಿನಲ್ಲಿ ನಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ, ಆದರೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದಿದ್ದರು.

ಆರು ವರ್ಷಗಳ ಬಳಿಕ ಎನ್‌ಡಿಎಗೆ ಚಂದ್ರಬಾಬು ನಾಯ್ಡು?

'ಟಿಡಿಪಿ ಮತ್ತು ಆಂಧ್ರ ಸರ್ಕಾರ 4 ವರ್ಷಗಳ ಕಾಲ ತಾಳ್ಮೆ ವಹಿಸಿದೆ. ಎಲ್ಲ ರೀತಿಯಿಂದಲೂ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದೇನೆ. ಇದಕ್ಕಾಗಿ ಹಿರಿಯ ನಾಯಕರನ್ನು ಭೇಟಿ ಮಾಡಿದ್ದೇನೆ.  ಇತ್ತೀಚೆಗಷ್ಟೇ ನಾನು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ನನ್ನ ನಿರ್ಧಾರವನ್ನು ತಿಳಿಸಲು ಪ್ರಯತ್ನಿಸಿದೆ, ಆದರೆ ಕೇಂದ್ರವು ಏನನ್ನೂ ಕೇಳುವ ಮನಸ್ಥಿತಿಯಲ್ಲಿಲ್ಲ. ನಾವೇನು ತಪ್ಪು ಮಾಡಿದೆವೋ ಗೊತ್ತಿಲ್ಲ' ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದರು.

ಆಂಧ್ರದಲ್ಲಿ ಬಿಜೆಪಿ-ಟಿಡಿಪಿ-ಜನಸೇನಾ ಮೈತ್ರಿ ಫೈನಲ್..? ಜಗನ್‌ಮೋಹನ್ ರೆಡ್ಡಿಗೆ ಬಿಗ್ ಶಾಕ್..!

Latest Videos
Follow Us:
Download App:
  • android
  • ios