ಅಸ್ಸಾಂ(ಮಾ.05):  ಪಂಚಾ ರಾಜ್ಯಗಳ ಚುನಾವಣೆಗೆ ಬಿಜೆಪಿ ಕೂಡ ಭರ್ಜರಿ ತಯಾರಿ ನಡೆಸುತ್ತಿದೆ. ಇದೀಗ ಅಸ್ಸಾಂ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 70 ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದೆ. 

ಪಶ್ಚಿಮ ಬಂಗಾಳ ಚುನಾವಣೆ: 291 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಮಮತಾ ಬ್ಯಾನರ್ಜಿ!

ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಮಜುಲಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದರೆ, ಇನ್ನು ಹಿಮಂತ ಬಿಸ್ವಾ ಶರ್ಮಾ ಜಲ್ಕುಬರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಅಸ್ಸಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಅಸ್ಸಾಂ ಗಣ ಪರಿಷದ್(AGP) ಹಾಗೂ ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್(UPPL) ಪಕ್ಷ  ಒಕ್ಕೂಟವಾಗಿ ಸ್ಪರ್ಧಿಸಲಿದೆ.   AGP ಪಕ್ಷ 26 ಸ್ಥಾನಗಳಿಗೆ ಸ್ಪರ್ಧಿಸಿದರೆ, UPPL ಪಕ್ಷ 8 ಸ್ಥಾನಗಳಿಗೆ ಸ್ಪರ್ಧಿಸಲಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ. 

126 ಸ್ಥಾನಗಳ ಪೈಕಿ ಉಳಿದ 70 ಸ್ಥಾನಗಳಿಗೆ ಬಿಜೆಪಿ ಸ್ಪರ್ಧಿಸಲಿದೆ. ಇದೀಗ ಪಂಚ ರಾಜ್ಯಗಳ ಚುನಾವಣೆ ಕಾವು ಏರುತ್ತಿದೆ. ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.