Asianet Suvarna News Asianet Suvarna News

ಸಂವಿಧಾನ ತಿದ್ದುಪಡಿಗೆ ಬಿಜೆಪಿಗೆ ಪ್ರಚಂಡ ಬಹುಮತ ಬೇಕು: ಜ್ಯೋತಿ ಮಿರ್ಧಾ

ಕಾಂಗ್ರೆಸ್‌ ತಮ್ಮಿಷ್ಟದಂತೆ ಬದಲಾಯಿಸಿರುವ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುವುದು ಅಗತ್ಯ ಎಂಬ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಮತ್ತೋರ್ವ ಲೋಕಸಭಾ ಅಭ್ಯರ್ಥಿ ಜ್ಯೋತಿ ಮಿರ್ಧಾ ಇಂಥದ್ದೇ ಅರ್ಥದ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದಾರೆ. 
 

BJP candidate Jyoti Mirdha remarks on amending Constitution give ammo to Congress gvd
Author
First Published Apr 3, 2024, 5:49 AM IST

ನವದೆಹಲಿ (ಏ.03): ಕಾಂಗ್ರೆಸ್‌ ತಮ್ಮಿಷ್ಟದಂತೆ ಬದಲಾಯಿಸಿರುವ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಈ ಬಾರಿ ಬಿಜೆಪಿ 400 ಸ್ಥಾನ ಗೆಲ್ಲುವುದು ಅಗತ್ಯ ಎಂಬ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ಮತ್ತೋರ್ವ ಲೋಕಸಭಾ ಅಭ್ಯರ್ಥಿ ಜ್ಯೋತಿ ಮಿರ್ಧಾ ಇಂಥದ್ದೇ ಅರ್ಥದ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದಾರೆ. ಮಿರ್ಧಾ ಹೇಳಿಕೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್‌, ಬಿಜೆಪಿಯ ಉದ್ದೇಶವೇ ಸಂವಿಧಾನ ಬದಲಾವಣೆ ಎಂದಿದೆ.

ರಾಜಸ್ಥಾನದ ನಾಗೋರ್‌ನ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ದಾ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ,‘ಮುಂದೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ಈ ನಿರ್ಧಾರ ತೆಗೆದುಕೊಳ್ಳಲು ಸಂವಿಧಾನಕ್ಕೆ ತಿದ್ದುಪಡಿ ತರಬೇಕಿದೆ. ತಿದ್ದುಪಡಿ ಮಾಡಬೇಕಾದರೆ ಉಭಯ ಸದನದಲ್ಲಿ ಪ್ರಚಂಡ ಬಹುಮತ ಬೇಕಾಗಿದೆ. ಪ್ರಸ್ತುತ ಎನ್‌ಡಿಎಗೆ ಲೋಕಸಭೆಯಲ್ಲಿ ಮಾತ್ರ ಬಹುಮತವಿದ್ದು, ರಾಜ್ಯಸಭೆಯಲ್ಲಿಯೂ ಬಹುಮತ ಬೇಕಾಗಿದೆ’ ಎಂದು ಹೇಳಿದ್ದಾರೆ.

ದಿಂಗಾಲೇಶ್ವರ ಶ್ರೀ ವಿಚಾರವಾಗಿ ಯಾರೊಂದಿಗೂ ಮಾತಾಡಿಲ್ಲ: ಪ್ರಲ್ಹಾದ್‌ ಜೋಶಿ

ಈ ವಿಡಿಯೋ ತುಣಕನ್ನು ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ‘ಈ ಹಿಂದೆ ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆ ನೀಡಿದಾಗ, ಇದೇ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿತು. ಈಗ ಮತ್ತೋರ್ವ ಬಿಜೆಪಿ ಅಭ್ಯರ್ಥಿ ಇದೇ ಹೇಳಿಕೆ ನೀಡಿದ್ದಾರೆ. ಇನ್ನೆಷ್ಟು ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಲಿದೆ’ ಎಂದು ಪ್ರಶ್ನಿಸಿದರು. ಇನ್ನು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌, ‘ಇದೆಲ್ಲಾ ಬಿಜೆಪಿಯ ‘ಮಹಾಸೂತ್ರಧಾರ (ಪ್ರಧಾನಿ ಮೋದಿ)’ ಅವರಿಂದ ಸಂಘಟಿತವಾಗಿದ್ದು, ಇದು ಬಿಜೆಪಿಯ ಉದ್ದೇಶಪೂರ್ವಕ ತಂತ್ರ’ ಎಂದು ಆರೋಪಿಸಿದರು.

Follow Us:
Download App:
  • android
  • ios