ನವದೆಹಲಿ(ಡಿ.13): ಭಾರತ ‘ರೇಪ್ ಇನ್ ಇಂಡಿಯಾ’ ಆಗಿ ಬದಲಾಗುತ್ತಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ, ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಚುನಾವಣಾ ಪ್ರಚಾರದ ವೇಳೆ ಅತ್ಯಾಚಾರ ಪ್ರಕರಣಗಳನ್ನು ಉಲ್ಲೇಖಿಸಿರುವ ರಾಹುಲ್ ಗಾಂಧಿ, ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ದೂರು ನೀಡಿದೆ.

ರೇಪ್ ಇನ್ ಇಂಡಿಯಾ: ರಾಹುಲ್ ಕ್ಷಮೆಗೆ ಸದನದ ಒತ್ತಾಯ!

ಇಂದು ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ನೇತೃತ್ವದ ಬಿಜೆಪಿ ನಿಯೋಗ, ರಾಹು್ಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗವನ್ನು ಒತ್ತಾಯಿಸಿತು.

ರಾಹುಲ್ ಹೇಳಿಕೆಯಿಂದ ದೇಶದ ಮಾನ ಹರಾಜಾಗಿದ್ದು, ಅತ್ಯಾಚಾರ ಪ್ರಕರಣಗಳನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಒತ್ತಾಯಿಸಿದೆ.