ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ಮಹತ್ತರ ಬದಲಾವಣೆ ಮಾಡಿದೆ. ಇದೀಗ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್ ನೀಡಲಾಗಿದೆ. ಆದರೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡವು ಸಾಧ್ಯತೆ ದಟ್ಟವಾಗಿದೆ.
ನವದೆಹಲಿ(ಜು.29) ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿ ಆರಂಭಿಸಿದೆ. ಇದರ ಬೆನ್ನಲ್ಲೇ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದೆ. ಇತ್ತ ಕರ್ನಾಟಕದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಆಯ್ಕೆ ಕಸರತ್ತು ನಡೆಯುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರ ಪ್ರಕಟಿಸಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ನಾಯಕ ಸಿಟಿ ರವಿಗೆ ಕೊಕ್ ನೀಡಲಾಗಿದೆ. ಈ ನಿರ್ಧಾರದ ಹಿಂದೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ಕಸರತ್ತು ಅಡಗಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ರೇಸ್‌ನಲ್ಲಿ ಸಿಟಿ ರವಿ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಇತ್ತ ಬಿಜೆಪಿ ಹೈಕಮಾಂಡ್ ನಾಯಕ ಸಿಟಿ ರವಿೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ನೀಡಲಾಗಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ.
ಬಿಜೆಪಿ ಹೈಕಮಾಂಡ್ ನಡೆಯಿಂದ ರಾಷ್ಟ್ರಮಟ್ಟದ ಬಿಜೆಪಿ ಸಂಘಟನೆಯಲ್ಲಿ ಇದೀಗ ಕರ್ನಾಟಕದಿಂದ ಬಿಎಲ್ ಸಂತೋಷ್ ಏಕಾಂಗಿಯಾಗಿದ್ದಾರೆ. ಬಿಎಲ್ ಸಂತೋಷ್ ಹೊರತುಪಡಿಸಿದರೆ ಕರ್ನಾಟಕದ ಪ್ರತಿನಿಧಿಸಿಗಳ ಸಂಖ್ಯೆ ಶೂನ್ಯವಾಗಿದೆ. ಸದ್ಯ ಸಿಟಿ ರವಿ ತಮಿಳುನಾಡು ಬಿಜೆಪಿ ಘಟಕ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ರಾಮೇಶ್ವರದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿಟಿ ರವಿ ಪಾಲ್ಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪಾಲ್ಗೊಂಡಿದ್ದಾರೆ.
ಕೆಜೆ ಹಳ್ಳಿ, ಡಿಜೆ ಹಳ್ಳಿ ಆರೋಪಿಗಳನ್ನು ಅಮಾಯಕರೆಂದು ಪರಿಗಣಿಸುವುದು ಅಪಾಯಕಾರಿ: ಸಿ.ಟಿ.ರವಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಯನ್ನು ಮುಕ್ತಿಗೊಳಿಸಿದ ಬೆನ್ನಲ್ಲೇ ಖುದ್ದು ಸಿಟಿ ರವಿ ಟ್ವೀಟ್ ಮೂಲಕ ಬಿಜೆಪಿ ಹೈಕಮಾಂಡ್‌ಗೆ ಧನ್ಯವಾದ ಅರ್ಪಿಸಿದ್ದಾರೆ. ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಜವಾಬ್ದಾರಿ ನೀಡಿ ,ಅವಕಾಶ ಮಾಡಿಕೊಟ್ಟ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ತುಂಬು ಹೃದಯದ ಧನ್ಯವಾದಗಳು. ಈ ಜವಾಬ್ದಾರಿ ನನಗೆ ಬಹಳಷ್ಟು ಅನುಭವ ಮತ್ತು ಬದುಕಿಗೆ ಹೊಸ ಆಯಾಮಗಳನ್ನು ನೀಡಿದೆ. ಬೂತ್ ಮಟ್ಟದ ಕಾರ್ಯಕರ್ತನಿಂದ ಹಿಡಿದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದವರೆಗಿನ ನನ್ನ ಪಯಣದಲ್ಲಿ ನಿರಂತರವಾಗಿ ಕಾರ್ಯಕರ್ತನ ಭಾವದಲ್ಲಿ ಕೆಲಸ ಮಾಡಿದ್ದೇನೆ, ಇನ್ನು ಮುಂದೆಯೂ ಅದೇ ಭಾವದಿಂದ ಕೆಲಸ, ಪಕ್ಷ ನೀಡಿದ ಜವಾಬ್ದಾರಿಯನ್ನು ಕಾಯಾ ವಾಚಾ ಮನಸಾ ನಡೆಸುತ್ತೇನೆ. ಭಾರತ್ ಮಾತಾ ಕಿ ಜೈ ಎಂದು ಸಿಟಿ ರವಿ ಟ್ವೀಟ್ ಮಾಡಿದ್ದಾರೆ.
ವಿದ್ಯಾರ್ಥಿನಿಯರ ಆಶ್ಲೀಲ ವೀಡಿಯೋ ಪ್ರಕರಣ, ಸಮಗ್ರ ತನಿಖೆ ಸಿಟಿ ರವಿ ಒತ್ತಾಯ
ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷ ಅವಧಿ ಮುಗಿದಿದೆ. ಇತ್ತೀಚೆಗೆ ಬಿಜೆಪಿ ಹೈಕಮಾಂಡ್ ಆಂಧ್ರ ಪ್ರದೇಶ, ತೆಲಂಗಾಣ, ಪಂಜಾಬ್ ಸೇರಿದಂತೆ 4 ರಾಜ್ಯಗಳಿಗೆ ರಾಜ್ಯಾಧ್ಯಕ್ಷರ ಘೋಷಣೆ ಮಾಡಿತ್ತು. ಇದೇ ವೇಳೆ ಕರ್ನಾಟಕಕ್ಕೂ ರಾಜ್ಯಾಧ್ಯಕ್ಷರ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿತ್ತು. ಆದರೆ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಹೀಗಾಗಿ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆ ಎರಡನ್ನು ತಡೆ ಹಿಡಿದಿತ್ತು.
