ಕೇಂದ್ರದ ಮಾಜಿ ಸಚಿವ, ಬಿಜೆಪಿ ನಾಯಕ ಶೆಹನವಾಜ್‌ಗೆ ಹೃದಯಾಘಾತ, ಆಸ್ಪತ್ರೆ ದಾಖಲು!
ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶೆಹನವಾಜ್ ಹುಸೈನ್ ತೀವ್ರ ಹೃದಯಾಘತದಿಂದ ಆಸ್ಪತ್ರೆ ದಾಖಲಾಗಿದ್ದಾರೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮುಂಬೈ(ಸೆ.26) ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ಶೆಹನವಾಜ್ ಹುಸೈನ್ ಹೃದಯಾಘಾತದಿಂದ ಆಸ್ಪತ್ರೆ ದಾಖಲಿಸಲಾಗಿದೆ. ಇಂದು ಹೃದಯಾಘಾತದಿಂದ ಅಸ್ವಸ್ಥಗೊಂಡ ಶೆಹನವಾಜ್ ಅವರನ್ನು ತಕ್ಷಣವೇ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶೆಹನವಾಜ್ ಪರಿಸ್ಥಿತಿ ಗಮನಿಸಿದ ವೈದ್ಯರ ತಂಡ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಿದ್ದಾರೆ. ಆ್ಯಂಜಿಯೋಪ್ಲಾಸ್ಟಿ ಸರ್ಜರಿ ಯಶಸ್ವಿಯಾಗಿ ಮಾಡಲಾಗಿದೆ. ಸದ್ಯ ಶೆಹನವಾಜ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಸದ್ಯ ಚೇತರಿಸಿಕೊಳ್ಳುತ್ತಿರುವ ಶೆಹನವಾಜ್ ಅವರನ್ನು ನಾಳೆ ವಾರ್ಡ್‌ಗೆ ಸ್ಥಳಾಂತರ ಮಾಡಲಾಗುವುದು. ಶೆಹನವಾಜ್ ಆರೋಗ್ಯದ ಕುರಿತು ಸೂಕ್ಷ್ಮವಾಗಿ ನಿಘಾವಹಿಸಲಾಗುತ್ತದೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಲೀಲಾವತಿ ಆಸ್ಪತ್ರೆ ಮಾಹಿತಿ ನೀಡಿದೆ. ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಾಗಿರುವ ಶೆಹನವಾಜ್, ಬಿಜೆಪಿ ವಕ್ತಾರ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.
ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್‌ಗೆ ಹೃದಯಾಘಾತ!
ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಜವಳಿ ಹಾಗೂ ನಾಗರೀಕ ವಿಮಾಯಾನ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 2021ರಿಂದ 2022ರ ವರೆಗೆ ಬಿಹಾರದ ಬಿಜೆಪಿ ಜೆಡಿಯು ಮೈತ್ರಿ ಸರ್ಕಾರದಲ್ಲಿ ಕೈಗಾರಿಕಾ ಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕಿಶನ್‌ಗಂಜ್ ಕ್ಷೇತ್ರದಿಂದ 1999ರ ಲೋಕಸಭಾ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಯಾದ ಶೆಹನವಾಜ್ ಹುಸೈನ್ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ. ಮೊದಲ ಬಾರಿ ಆಯ್ಕೆಯಾದ ಬೆನ್ನಲ್ಲೇ ವಾಜಪೇಯಿ ಸರ್ಕಾರದಲ್ಲಿ ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಸಂಪುಟದಲ್ಲಿ ಕೆಲಸ ಮಾಡಿದ್ದಾರೆ. ಯುವಜನ ಮತ್ತು ಕ್ರೀಡೆ, ಕೈಗಾರಿಕೆ, ಆಹಾರ ಸೇರಿದಂತೆ ಹಲವು ಖಾತೆಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
2004ರಲ್ಲಿ ಚುನಾವಣೆಯಲ್ಲಿ ಮುಗ್ಗರಿಸಿದ ಶೆಹನವಾಜ್ 2006ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಹಾರದ ಬಾಘಲುಪರ್ ಕ್ಷೇತ್ರದಿಂದ ಸ್ಪರ್ಧಿಸಿ ಲೋಕಸಭೆ ಪ್ರವೇಶ ಮಾಡಿದರು. 2014ರಲ್ಲಿ ಭಘಲಪುರ ಕ್ಷೇತ್ರದಲ್ಲಿ ಕೆಲವೇ ಕೆಲವು ಮತಗಳಿಂದ ಸೋಲು ಕಂಡರು. ಆದರೆ ಪ್ರಧಾನಿ ಮೋದಿ ಸ್ಮಾರ್ಟ್ ಸಿಟಿ ಯೋಜನೆಯನ್ನು ತನ್ನ ಕ್ಷೇತ್ರದಲ್ಲಿ ಕಾರ್ಯಗತಗೊಳಿಸುವಲ್ಲಿ ಶೆಹನವಾಜ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.