BJP Executive Meeting ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವಧಿ ವಿಸ್ತರಣೆ, 2024ರ ವರೆಗೆ ಅಧಿಕಾರ!

ಕರ್ನಾಟಕ ಸೇರಿದಂತೆ ಸಾಲು ಸಾಲು ವಿಧಾನಸಭಾ ಚುನಾವಣೆ ಸೇರಿದಂತೆ ಹಲವು ಪ್ರಮುಖ ಸವಾಲುಗಳು ಬಿಜೆಪಿ ಮುಂದಿದಿ. ಈ ನಿಟ್ಟಿನಲ್ಲಿ ಇಂದು ನಡೆದ ಬಿಜಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ನಿರ್ಧಾರ ಹೊರಬಿದ್ದಿದೆ. ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ ಜೆಡಿ ನಡ್ಡ ಅವಧಿ ವಿಸ್ತರಿಸಲಾಗಿದೆ. 

BJP national Executive Meeting 2023 president JP nadda term extended till 2024 lok Sabha election ckm

ನವದೆಹಲಿ(ಜ.17):  ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ನಿರ್ಧಾರ ಹೊರಬಿದ್ದಿದೆ. ಸಾಲು ಸಾಲು ಚುನಾವಣೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವಧಿಯನ್ನು ಮತ್ತೆ ಒಂದು ವರ್ಷಕ್ಕೆ ವಿಸ್ತರಿಸಲಾಗಿದೆ. 2024ರ ಲೋಕಸಭಾ ಚುನಾವಣೆವರೆಗೆ ಜೆಪಿ ನಡ್ಡಾ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಜೂನ್ 2024ರ ವರೆಗೆ ಜೆಪಿ ನಡ್ಡಾ ಅವಧಿ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ. 

ಜೆಪಿ ನಡ್ಡಾ ಅವಧಿಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಸ್ಟ್ರೈಕ್ ರೇಟ್ ಹೆಚ್ಚಿದೆ. ನಡ್ಡಾ ಅವಧಿಯಲ್ಲಿ ಎದುರಿಸಿದ ಚುನಾವಣೆಗಳಲ್ಲಿ ಬಿಹಾರ, ಮಹಾರಾಷ್ಟ್ರ, ಉತ್ತರ ಪ್ರದೇಶದಲ್ಲಿ ಅಧಿಕಾರ ಹಿಡಿದಿದೆ. ಪಶ್ಚಿಮ ಬಂಗಾಳದಲ್ಲಿ ನಮ್ಮ ಸ್ಥಾನ ಹೆಚ್ಚಾಗಿದೆ. ಇನ್ನು ಗುಜರಾತ್‌ನಲ್ಲಿ ದಾಖಲೆಯ ಗೆಲುವು ಸಾಧಿಸಿದೆ ಎಂದು ಅಮಿತ್ ಶಾ, ಕಾರ್ಯಕಾರಿಣಿ ಸಭೆಯಲ್ಲಿ ಹೇಳಿದ್ದಾರೆ. ಜೆಪಿ ನಡ್ಡಾ ಹಾಗೂ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ 2024ರ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗೆದ್ದು ಹೊಸ ದಾಖಲೆ ಬರೆಯಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಬಿಎಸ್‌ವೈ ಜತೆ ಮೋದಿ ಮಾತುಕತೆ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಡೀತಾ ಚರ್ಚೆ..?

ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿನ್ನೆ(ಜ.16)ಕ್ಕೆ ಆರಂಭಗೊಂಡಿದೆ. ಕೊನೆಯ ದಿನ ಬಿಜೆಪಿ ವರಿಷ್ಠರು ಈ ನಿರ್ಧಾರ ಪ್ರಕಟಿಸಿದ್ದಾರೆ. ಮೊದಲ ದಿನದ ಸಭೆಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ಮಹತ್ವದ ಚರ್ಚೆ ನಡೆಸಲಾಗಿತ್ತು. ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರ ಸೇರಿದಂತೆ ಚುನಾವಣಾ ಸಿದ್ಧತೆಗಳ ಕುರಿತು ಸುಮಾರು ಅರ್ಧಗಂಟೆ ಕಾಲ ಸುದೀರ್ಘ ಚರ್ಚೆ ನಡೆಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ವಿವಿಐಪಿಗಳು ಭಾಗವಹಿಸಲಿರುವ ರಾರ‍ಯಲಿಗಳು, ಮುಖ್ಯಮಂತ್ರಿ ಬೊಮ್ಮಾಯಿ, ರಾಜ್ಯಾಧ್ಯಕ್ಷ ಕಟೀಲು, ಮಾಜಿ ಸಿಎಂ ಯಡಿಯೂರಪ್ಪ ಸೇರಿ ರಾಜ್ಯ ನಾಯಕರು ನಡೆಸುವ ಸಭೆಗಳ ಕುರಿತು ಮಾಹಿತಿ ಹಂಚಿಕೊಂಡಿದ್ದರು. ಇದೇ ವೇಳೆ ಬಿಜೆಪಿ ವರಿಷ್ಠರು ರಾಜ್ಯದ ಆಡಳಿತ, ಪಕ್ಷದ ಸಂಘಟನೆ ಹಾಗೂ ಚುನಾವಣಾ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರಿಂದ ಸುದೀರ್ಘ ವಿವರಣೆ ಪಡೆದಿದ್ದರು.

9 ರಾಜ್ಯಗಳ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ, ಪ್ರಧಾನಿ ಭರ್ಜರಿ ರೋಡ್‌ ಶೋ!

ಇದೇ ವೇಳೆ ರಾಜ್ಯದ ಜನಸಂಕಲ್ಪ ಯಾತ್ರೆಗೆ ಸಿಕ್ಕಿರುವ ಜನಸ್ಪಂದನೆಯನ್ನು ಬಳಸಿಕೊಂಡು ಇದೀಗ ರಾಜ್ಯದ ಉದ್ದಗಲಕ್ಕೂ ರಥ ಯಾತ್ರೆ ಆರಂಭಿಸಲು ಸೂಚನೆ ನೀಡವಾಗಿದೆ. ಇದರ ಹಿನ್ನಲೆಯಲ್ಲಿ ಬಜೆಟ್‌ ಅಧಿವೇಶನದ ಬಳಿಕ ರಾಜ್ಯದ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಮಹದಾಯಿ ನದಿಪಾತ್ರ (ಧಾರವಾಡ, ಗದಗ ಜಿಲ್ಲಾ ವ್ಯಾಪ್ತಿ), ಕೃಷ್ಣಾ ನದಿಪಾತ್ರ (ವಿಜಯಪುರ, ಬೆಳಗಾವಿ, ಬಾಗಲಕೋಟೆ), ಕಾವೇರಿ ನದಿಪಾತ್ರ (ಮೈಸೂರು, ಮಂಡ್ಯ) ಹಾಗೂ ಬೀದರ್‌ನಿಂದ ಕೊಪ್ಪಳದವರೆಗೆ ರಥಯಾತ್ರೆ ನಡೆಯಲಿದೆ. ಮಹದಾಯಿ ನದಿಪಾತ್ರದ ಜಿಲ್ಲೆಗಳ ವ್ಯಾಪ್ತಿಯಲ್ಲಿ ನಡೆಯುವ ರಥಯಾತ್ರೆ ವೇಳೆಯಲ್ಲಿಯೇ ಮಹದಾಯಿ ಕುಡಿಯುವ ನೀರು ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ.

Latest Videos
Follow Us:
Download App:
  • android
  • ios