ಮೂರು ರಾಜ್ಯಗಳಲ್ಲೂ ಕೇಂದ್ರ ಸಚಿವರು, ಸಂಸದರು, ಹೊಸಬರು ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿವೆ. ಹೀಗಾಗಿ ಬಿಜೆಪಿ ಈ ರಾಜ್ಯಗಳಿಗೆ ವೀಕ್ಷಕರನ್ನು ನೇಮಕ ಮಾಡಲಿದೆ. ಇವರು ರಾಜ್ಯದ ಶಾಸಕರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಯಾರಾಗಬೇಕೆಂಬ ವರದಿಯನ್ನು ವರಿಷ್ಠರಿಗೆ ಸಲ್ಲಿಸಲಿದ್ದಾರೆ.

ನವದೆಹಲಿ (ಡಿಸೆಂಬರ್ 8, 2023): ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಸ್ಪಷ್ಟ ಬಹುಮತದೊಂದಿಗೆ ಜಯಗಳಿಸಿದ್ದರೂ ಸಹ ಇನ್ನೂ ಮುಖ್ಯಮಂತ್ರಿ ಆಯ್ಕೆಯನ್ನು ಅಂತಿಮಗೊಳಿಸಿಲ್ಲ. ಹೀಗಾಗಿ ಮುಖ್ಯಮಂತ್ರಿಗಳ ಆಯ್ಕೆಗೆ ಶಾಸಕರ ಅಭಿಪ್ರಾಯ ಸಂಗ್ರಹಕ್ಕಾಗಿ ಈ 3 ರಾಜ್ಯಗಳಿಗೆ ವೀಕ್ಷಕರನ್ನು ಶುಕ್ರವಾರ ನೇಮಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೇ ಬಿಜೆಪಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಜಯಗಳಿಸಿತ್ತು. ಹೀಗಾಗಿ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಮುಂದುವರೆದಿದೆ. 

Add Asianetnews Kannada as a Preferred SourcegooglePreferred

ಮೂರು ರಾಜ್ಯಗಳಲ್ಲೂ ಕೇಂದ್ರ ಸಚಿವರು, ಸಂಸದರು, ಹೊಸಬರು ಸೇರಿದಂತೆ ಹಲವು ಹೆಸರುಗಳು ಕೇಳಿಬಂದಿವೆ. ಹೀಗಾಗಿ ಬಿಜೆಪಿ ಈ ರಾಜ್ಯಗಳಿಗೆ ವೀಕ್ಷಕರನ್ನು ನೇಮಕ ಮಾಡಲಿದೆ. ಇವರು ರಾಜ್ಯದ ಶಾಸಕರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಯಾರಾಗಬೇಕೆಂಬ ವರದಿಯನ್ನು ವರಿಷ್ಠರಿಗೆ ಸಲ್ಲಿಸಲಿದ್ದಾರೆ.

ಇದನ್ನು ಓದಿ: ಸಂಸತ್ತಿನಲ್ಲಿ ನಮೋಗೆ ಚಪ್ಪಾಳೆಯ ಸ್ವಾಗತ; ಸಂಸದರಿಂದ 3ನೇ ಬಾರಿ ಮೋದಿ ಸರ್ಕಾರ ಘೋಷಣೆ

ಈ ನಡುವೆ ರಾಜಸ್ಥಾನ ಸಿಎಂ ಆಕಾಂಕ್ಷಿ ವಸುಂಧರಾ ರಾಜೇ ಅವರು ಗುರುವಾರ ಕೇಂದ್ರ ಸಚಿವ ಅಮಿತ್‌ ಶಾ ಅವರನ್ನು ದಿಲ್ಲಿಯಲ್ಲಿ ಭೇಟಿಯಾದರು. ಇನ್ನೊಬ್ಬ ಆಕಾಂಕ್ಷಿ ಬಾಬಾ ಬಾಲಕನಾಥ್‌ ಅವರು ಪಕ್ಷಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾದರು. ಈ ನಡುವೆ, ಪ್ರಧಾನಿ ನರೇಂದ್ರ ಮೋದಿ - ಅಮಿತ್‌ ಶಾ ಅವರೂ ಗುರುವಾರ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

ಬಿಜೆಪಿ ಗೆದ್ದಿದ್ದಕ್ಕೆ ಮಧ್ಯಪ್ರದೇಶದ ಇಬ್ಬರು ಕಾಂಗ್ರೆಸ್ಸಿಗರಿಂದ ಮುಖಕ್ಕೆ ಮಸಿ

ಭೋಪಾಲ್: ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಗಳಿಸಿದ್ದರಿಂದ ಇಬ್ಬರು ಕಾಂಗ್ರೆಸ್‌ ನಾಯಕರು ತಮ್ಮ ಮುಖಕ್ಕೆ ಮಸಿ ಬಳಿದುಕೊಂಡಿದ್ದಾರೆ. ‘ರಾಜ್ಯದಲ್ಲಿ ಬಿಜೆಪಿ 50 ಸೀಟು ಗೆದ್ದರೆ ಮಸಿ ಬಳೆದುಕೊಳ್ಳುತ್ತೇನೆ’ ಎಂದಿದ್ದ ಮಧ್ಯಪ್ರದೇಶ ಕಾಂಗ್ರೆಸ್‌ ನಾಯಕ ಫೂಲ್‌ ಸಿಂಗ್‌ ಬರೈಯಾ ಹೇಳಿದ್ದರು. ಈ ಮಾತಿನಂತೆ ಅವರು ಗುರುವಾರ ರಾಜಭವನ ಎದುರು ತಮ್ಮ ಮುಖಕ್ಕೆ ಮಸಿ ಬಳಿದುಕೊಂಡರು. ಇದಕ್ಕೂ ಮುನ್ನ ಮತ್ತೊಬ್ಬ ಕಾಂಗ್ರೆಸ್‌ ನಾಯಕ, ಕಿಸಾನ್‌ ಮೋರ್ಚಾದ ಮಹಾಮಂತ್ರಿ ಯೋಗೇಶ್‌ ದಂಡೌತಿಯಾ ಸಹ ತಮ್ಮ ಮುಖಕ್ಕೆ ಮಸಿ ಬಳಿದುಕೊಂಡರು.

ಇದನ್ನು ಓದಿ: ಮೋದಿ ದೂರವಿಟ್ಟು ತಮ್ಮ ಕ್ಷೇತ್ರದಲ್ಲೇ ಸೋತ ಮಿಜೋರಾಂ ಸಿಎಂ, ಡೆಪ್ಯುಟಿ ಸಿಎಂ: ZPM ಗೆ ಅಧಿಕಾರ ನೀಡಿದ ಮತದಾರ ಪ್ರಭು!