ಅನಾರೋಗ್ಯದಿಂದ ಬಳಲುತ್ತಿದ್ದ ಬಿಹಾರ ಮಾಜಿ ಉಪಮುಖ್ಯಮಂತ್ರಿ, ರಾಜ್ಯಸಭಾ ಸಂಸದ ಸುಶೀಲ್ ಮೋದಿ ನಿಧನರಾಗಿದ್ದಾರೆ.
ನವದೆಹಲಿ(ಮೇ.13) ಕಳೆದ 7 ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸಂಸದ ಸುಶೀಲ್ ಮೋದಿ ಇಂದು ನಿಧನರಾಗಿದ್ದಾರೆ. ಇಂದು ಸಂಜೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ(AIIMS) ಸುಶೀಲ್ ಮೋದಿ ನಿಧನರಾಗಿದ್ದರೆ. 72 ವರ್ಷದ ಸುಶೀಲ್ ಮೋದಿ ಬಿಹಾರದ ಮಾಜಿ ಉಪಮುಖ್ಯಮಂತ್ರಿಯಾಗಿದ್ದರು.
ಕಳೆದ 7 ತಿಂಗಳನಿಂದ ಸುಶೀಲ್ ಮೋದಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಕಾರಣದಿಂದ ಲೋಕಸಭಾ ಚುನಾವಣೆ ಸ್ಪರ್ಧೆಯಿಂದಲೂ ದೂರ ಉಳಿದಿದ್ದರು. ಬಿಹಾರದಲ್ಲಿ ಬಿಜೆಪಿ ಹಾಗೂ ನೀತೀಶ್ ಕುಮಾರ್ ಅವರ ಜೆಡಿಯು ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದರು. ಆದರೆ ನಿತೀಶ್ ಕಮಾರ್ ಏಕಾಏಕಿ ಯೂಟರ್ನ್ ತೆಗೆದುಕೊಂಡು ಬಿಜೆಪಿ ತೊರೆದಿದ್ದರು. ಇದೀಗ ಮತ್ತೆ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಪತನದ ಬಳಿಕ ಸುಶೀಲ್ ಕುಮಾರ್ ಮೋದಿಯನ್ನು ಬಿಜೆಪಿ ರಾಜ್ಯಸಭಾ ಸಂಸದರಾಗಿ ಮುಂದುವರಿದಿದ್ದರು. ಆದರೆ ಕಳೆದ ರಾಜ್ಯಸಭಾ ಚುನಾವಣೆ ವೇಳೆಯೂ ಸುಶೀಲ್ ಮೋದಿ ಹೆಸರು ಕಾಣಿಸಿಕೊಂಡಿರಲಿಲ್ಲ.
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ ಸುಶೀಲ್ ಮೋದಿ, ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ರಾಜ್ಯಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಿಂದ ಅನಾರೋಗ್ಯದ ಕಾರಣದಿಂದ ಹಿಂದೆ ಸರಿದಿದ್ದರು. ಎಪ್ರಿಲ್ 3, 2024ರಲ್ಲಿ ಪ್ರಧಾನಿ ಮೋದಿ, ಸುಶೀಲ್ ಆರೋಗ್ಯದ ಮಾಹಿತಿ ಬಹಿರಂಗಪಡಿಸಿದ್ದರು. ಸುಶೀಲ್ 6 ತಿಂಗಳ ಹಿಂದೆ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಮೋದಿ ಪ್ರಾರ್ಥಿಸಿದ್ದರು.
1952ರಲ್ಲಿ ಹುಟ್ಟಿದ ಸುಶೀಲ್ ಮೋದಿ, ಬಿಜೆಪಿಯ ಹಿರಿಯ ನಾಯಕರಾಗಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವ ಸಂಘದ ಮೂಲಕ ನಾಯಕರಾಗಿ ಬೆಳೆದ ಸುಶೀಲ್ ಮೋದಿ ಬಿಹಾರದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
Breaking: ದಕ್ಷಿಣ ಕರ್ನಾಟಕದ ದಲಿತ ಸೂರ್ಯ, ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ
1974 ಹಾಗೂ 1975ರಲ್ಲಿ ಸುಶೀಲ್ ಮೋದಿ 5 ಬಾರಿ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಇಂದಿರಾ ಗಾಂಧಿ ಹೇರಿದ ತುರ್ತು ಪರಿಸ್ಥಿತಿ ವೇಳೆ ಸುಶೀಲ್ ಮೋದಿ ಬಂಧನವಾಗಿತ್ತು. ಇನ್ನು ಜೆಪಿ ಚಳುವಳಿಯಲ್ಲೂ ಸುಶೀಲ್ ಮೋದಿ ಅರೆಸ್ಟ್ ಆಗಿದ್ದರು. ತುರ್ತು ಪರಿಸ್ಥಿತಿ ವೇಳೆ ಬರೋಬ್ಬರಿ 19 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು.
