ಪಂಜಾಬ್‌ನಲ್ಲಿ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಸಂಬಂಧ ಬಿಜೆಪಿ ಮಹತ್ವದ ಘೋಷಣೆ| ಏಕಾಂಗಿಯಾಗಿ ಸ್ಪರ್ಧಿಸುತ್ತೇವೆಂದ ಬಿಜೆಪಿ|
ಪಂಜಾಬ್(ನ.17): ಪಂಜಾಬ್‌ನಲ್ಲಿ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 117 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದೆ. ಇತ್ತೀಚೆಗಷ್ಟೇ ಎನ್‌ಡಿಎ ಬಿಜೆಪಿಯ ಅತಿ ಹಳೆಯ ಮೈತ್ರಿ ಪಕ್ಷ ಶಿರೋಮಣಿ ಅಕಾಲಿ ದಳ ಸಂಬಂಧ ಕಡಿದುಕೊಂಡಿತ್ತು.
ಹೀಗಿರುವಾಗಲೇ ಈಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಪಂಜಾಬ್‌ನಲ್ಲಿ ಇನ್ನೆರಡು ವರ್ಷದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಏಕಾಂಗಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಸಿದ್ಧತೆ ಆರಂಭಿಸಿರುವುದಾಗಿ ಹೇಳಿದ್ದಾರೆ.''
ಅಂತೂ ಇಂತೂ ಫೈನಲ್? : ರಾಜ್ಯದಲ್ಲಿ ಶಾಲೆ ಆರಂಭ ಯಾವಾಗ..?
ನವೆಂಬರ್ 19 ರಂದು ಹತ್ತು ಜಿಲ್ಲೆಗಳಲ್ಲಿ ಪಕ್ಷದ ಕಚೇರಿ ಉದ್ಘಾಟಿಸಲಿದ್ದಾರೆ ಜೆ. ಪಿ. ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ವರ್ಚುವಲ್ ಕಾರ್ಯಕ್ರಮದ ಮೂಲಕ ನವೆಂಬರ್ 19 ರಂದು ಹತ್ತು ಜಿಲ್ಲೆಗಳಲ್ಲಿ ಪಕ್ಷದ ಕಚೇರಿಯನ್ನೂ ಉದ್ಘಾಟಿಸಲಿದ್ದಾರೆಂದು ತರುಣ್ ತಿಳಿಸಿದ್ದಾರೆ.
ಭರ್ಜರಿ ಕಾರ್ಯಾಚರಣೆ; 200 ಕೋಟಿ ಮೌಲ್ಯದ ಡ್ರಗ್ಸ್ ವಶ!
ಕೃಷಿ ಮಸೂದೆ ವಿರೋದಿಸಿ ಮೈತ್ರಿ ಕಡಿದುಕೊಂಡಿದ್ದ ಶಿರೋಮಣಿ ಅಕಾಲಿ ದಳ
ಇದಕ್ಕೂ ಮೊದಲು ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿ ಮೂರು ಬಿಲ್ ಪಾಸ್ ಮಾಡಿತ್ತು. ಇದನ್ನು ವಿರೋಧ ಪಕ್ಷ ಸೇರಿ ಅಕಾಲಿ ದಳವೂ ವಿರೋಧಿಸಿತ್ತು. ಅಲ್ಲದೇ ಕೇಂದ್ರ ಸಚಿವೆ ಹರ್‌ಸಿಮ್ರತ್ ಕೌರ್ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಹಾಗೂ 1992ರಿಂದ ನಡೆದು ಬಂದಿದ್ದ ಮೈತ್ರಿ ಕಡಿದುಕೊಂಡಿದ್ದರು.
