Asianet Suvarna News Asianet Suvarna News

ಯೋಗಿ ಪ್ರಮಾಣವಚನ, 45 ಸಾವಿರ ಮಂದಿಗೆ ಆಮಂತ್ರಣ: ರಾಗಾ, ಸೋನಿಯಾ, ಅಖಿಲೇಶ್‌ಗೂ ಆಹ್ವಾನ!

* 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ

* ಗೆಲುವಿನ ಬೆನ್ನಲ್ಲೇ ಯೋಗಿ ಪ್ರಮಾಣವಚನಕ್ಕೆ ಸಿದ್ಧತೆ

* ಏಕನಾ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಆಯೋಜನೆ

BJP to Invite 45 people for Yogi Adityanath oath taking ceremony in UP pod
Author
Bangalore, First Published Mar 17, 2022, 10:35 AM IST

ಲಕ್ನೋ(ಮಾ.17): 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿದೆ. ಇದೀಗ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ಸಕಲ ಸಿದ್ಧತೆಗಳು ನಡೆಯುತ್ತಿವೆ. ಏಕನಾ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. 

ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ 45 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಈ ಕಾರ್ಯಕ್ರಮಕ್ಕಾಗಿ 200 ವಿವಿಐಪಿ ಅತಿಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಸೋನಿಯಾ ಗಾಂಧಿ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಮುಲಾಯಂ ಸಿಂಗ್ ಯಾದವ್, ಬಿಎಸ್‌ಪಿ ವರಿಷ್ಠೆ ಮಾಯಾವತಿ ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಲಾಗುತ್ತದೆ ಎನ್ನಲಾಗಿದೆ. ಇದರೊಂದಿಗೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೂ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಮಾಹಿತಿ ಪ್ರಕಾರ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎಲ್ಲ ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಮಾಣ ವಚನ ಸಮಾರಂಭದಲ್ಲಿ 45 ಸಾವಿರ ಮಂದಿ ಪಾಲ್ಗೊಳ್ಳಬಹುದು ಎಂದು ಹೇಳಲಾಗುತ್ತಿದೆ. ಮಾಧ್ಯಮ ವರದಿಗಳ ಪ್ರಕಾರ, 200 ಕ್ಕೂ ಹೆಚ್ಚು ವಿವಿಐಪಿ ಅತಿಥಿಗಳ ಪಟ್ಟಿಯನ್ನು ಸಹ ಸಿದ್ಧಪಡಿಸಲಾಗಿದೆ. ಸಮಾರಂಭಕ್ಕೆ ವಿರೋಧ ಪಕ್ಷದ ನಾಯಕರಿಗೂ ಆಹ್ವಾನ ನೀಡಲಾಗುವುದು. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ, ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್, ಮಾಯಾವತಿ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರಿಗೆ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗುವುದು. ಇವರಲ್ಲದೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಗಳಿಂದ ಲಾಭ ಪಡೆದ ರಾಜ್ಯಾದ್ಯಂತದ ಫಲಾನುಭವಿಗಳನ್ನು ಸಹ ಆಹ್ವಾನಿಸಲಾಗುತ್ತದೆ.

ಬಿಜೆಪಿಗೆ ಐತಿಹಾಸಿಕ ಗೆಲುವು

ಉತ್ತರ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ಧತೆ ಆರಂಭವಾಗಿದೆ ಎಂಬುವುದು ಉಲ್ಲೇಖನೀಯ. ಹೋಳಿ ನಂತರ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಬಾರಿ ಸ್ಮೃತಿ ಉಪ್ವಾನ್ ಬದಲಿಗೆ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಯುಪಿಯಲ್ಲಿ 37 ವರ್ಷಗಳ ನಂತರ ಒಂದು ಪಕ್ಷವು ಸತತ ಎರಡನೇ ಬಾರಿಗೆ ಸರ್ಕಾರ ರಚಿಸಲು ಹೊರಟಿರುವಾಗ ಇದು ಸಂಭವಿಸಿದೆ ಎಂಬುದು ಗಮನಿಸಬೇಕಾದ ಸಂಗತಿ. ಹೀಗಿರುವಾಗ ಈ ಐತಿಹಾಸಿಕ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ಬಿಜೆಪಿ ಸಿದ್ಧತೆ ನಡೆಸಿದೆ.

Follow Us:
Download App:
  • android
  • ios