Asianet Suvarna News Asianet Suvarna News

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತೀದೊಡ್ಡ ಪಕ್ಷವಾಗಲಿದೆ, ಆದರೆ..ಶಶಿ ತರೂರ್ ಭವಿಷ್ಯ!

ಲೋಕಸಭಾ ಚುನಾವಣೆ ಗೆಲುವಿಗೆ ಭಾರಿ ರಣತಂತ್ರ ರೆಡಿಯಾಗುತ್ತಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಶಶಿ ತರೂರ್ ಭವಿಷ್ಯ ನುಡಿದಿದ್ದಾರೆ. 2024ರ ಚುನಾವಣೆಯಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ತರೂರ್ ಹೇಳಿದ್ದಾರೆ. ಇದೇ ವೇಳೆ ಸರ್ಕಾರ ರಚನೆ ಸೀಕ್ರೆಟ್ ಭಾಗ್ಯ ಯಾರಿಗೆ ಅನ್ನೋ ಭವಿಷ್ಯವನ್ನೂ ನುಡಿದಿದ್ದಾರೆ.

BJP Will emerge single largest party in upcoming Lok Sabha Election Shashi Tharoor Prediction ckm
Author
First Published Jan 14, 2024, 8:22 PM IST

ತಿರುವನಂತಪುರಂ(ಜ.14) ಮುಂಬರುವ ಲೋಕಸಭಾ ಚುನಾವಣೆ ಕಾವು ಏರತೊಡಗಿದೆ. ಇಂಡಿಯಾ ಮೈತ್ರಿ ಒಕ್ಕೂಟ ಸತತ ಸಭೆ ನಡೆಸುತ್ತಿದೆ. ಸೀಟು ಹಂಚಿಕೆ ಕುರಿತು ಅಸಮಾಧಾನಗಳಿದ್ದರೂ ಒಗ್ಗಟ್ಟಿನ ಮಂತ್ರ ಪಠಿಸಿದೆ. ಇತ್ತ ಬಿಜೆಪಿ ಕೂಡ ರಣತಂತ್ರ ರೂಪಿಸಿದೆ. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಸೇರಿದಂತೆ ಹಲವು ಪ್ರಯೋಗಗಳು ಕಾಂಗ್ರೆಸ್ ಕೈಹಿಡಿಯಲಿದೆ ಅನ್ನೋ ಲೆಕ್ಕಾಚಾರ ಜೋರಾಗಿದೆ. ಇತ್ತ ಬಿಜೆಪಿ 400 ಸ್ಥಾನ ಗೆಲ್ಲುವ ಮೂಲಕ ದಾಖಲೆ ಬರೆಯಲು ಸಜ್ಜಾಗಿದೆ. ಇದರ ನಡುವೆ ಕಾಂಗ್ರೆಸ್ ನಾಯಕ ಶಶಿ ತರೂರ್ ಚುನಾವಣಾ ಭವಿಷ್ಯ ನುಡಿದಿದ್ದಾರೆ. 2024ರ ಚುನಾವಣೆಯಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆದರೆ ಸರ್ಕಾರ ರಚಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ. ಬಿಜೆಪಿ ಕಳೆದ ಚುನಾವಣೆಯಲ್ಲಿ ಪಡೆದ ಸ್ಥಾನಕ್ಕಿಂತ ಕಡಿಮೆ ಸ್ಥಾನಗಳನ್ನು 2024ರ ಚುನಾವಣೆಯಲ್ಲಿ ಪಡೆದುಕೊಳ್ಳಲಿದೆ. ಅತೀ ದೊಡ್ಡ ಪಕ್ಷವಾದರೂ ಬಿಜೆಪಿ ಜೊತೆಗಿನ ಮೈತ್ರಿ ಪಕ್ಷಗಳು NDA ಮೈತ್ರಿಯ ನಂಬಿಕೆ ಕಳೆದುಕೊಂಡಿದೆ. ಇತ್ತ ಇಂಡಿಯಾ ಮೈತ್ರಿ ಒಗ್ಗಟ್ಟಾಗಿ ಹೆಚ್ಚು ಸ್ಥಾನ ಗೆಲ್ಲಲಿದೆ. ಹೀಗಾಗಿ ಬಿಜಿಪಿಗೆ ಸರ್ಕಾರ ರಚಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಲೋಕಸಭಾ ಚುನಾವಣೆ 2024: ಯತೀಂದ್ರ ನನ್ನೆದುರು ಸ್ಪರ್ಧೆಗೆ ಇಳಿಯಲಿ, ಪ್ರತಾಪ್ ಸಿಂಹ

NDA ಮೈತ್ರಿಯಲ್ಲಿರುವ ಪಕ್ಷಗಳು ಬಿಜೆಪಿ ಮೇಲಿನ ನಂಬಿಕೆ ಕಳೆದುಕೊಂಡಿದೆ. ಹೀಗಾಗಿ ಈ ಪಕ್ಷಗಳು ಇಂಡಿಯಾ ಮೈತ್ರಿಯತ್ತ ಒಲವು ತೋರಲಿದೆ. ಬಿಜೆಪಿ ಅತೀ ದೊಡ್ಡ ಪಕ್ಷವಾದರೂ ಸರ್ಕಾರ ರಚಿಸುವಲ್ಲಿ ಎಡವಲಿದೆ. ಕಾರಣ ಮೈತ್ರಿ ಪಕ್ಷಗಳು ಬಿಜೆಪಿ ಬೆಂಬಲಿಸುವ ಸಾಧ್ಯತೆಗಳು ಕಡಿಮೆ. ಹೀಗಾದಾಗ ಇಂಡಿಯಾ ಮೈತ್ರಿ ಒಕ್ಕೂಟ ಸರ್ಕಾರ ರಚಿಸಲು ಸಾಧ್ಯವಾಗಲಿದೆ ಎಂದು ಶಶಿ ತರೂರ್ ಹೇಳಿದ್ದಾರೆ.

ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿ ಹೆಚ್ಚಿನ ಲಾಭ ತಂದುಕೊಡಲಿದೆ. ಕೇರಳದಲ್ಲಿ ಸೀಟು ಹಂಚಿಕೆಯ ಮಾತುಕತೆ ನಡೆದಿದೆ. ಹೀಗಾಗಿ ಬಿಜೆಪಿಗೆ ಈ ಚುನಾವಣೆ ಸವಾಲಾಗಲಿದೆ ಎಂದು ಶಶಿ ತರೂರ್ ಹೇಳಿದ್ದಾರೆ. ದೇಶದಲ್ಲಿ ಸೀಟು ಹಂಚಿಕೆಯಲ್ಲಿ ಹೆಚ್ಚಿನ ವ್ಯತ್ಯಾಸಗಳು, ಅಸಮಾಧನಗಳಿಲ್ಲ. ಪ್ರತಿ ರಾಜ್ಯಗಳು ಇಂತಿಷ್ಟು ಸ್ಥಾನಗಳನ್ನು ಕೇಳಿದೆ. ಮೈತ್ರಿಯ ಪ್ರತಿ ಪಕ್ಷಕ್ಕೂ ಸ್ಥಾನ ಕೇಳುವ ಹಾಗೂ ಸ್ಪರ್ಧಿಸುವ ಹಕ್ಕಿದೆ. ಈ ಕುರಿತು ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತರೂರ್ ಹೇಳಿದ್ದಾರೆ.

ಲೋಕ ಕದನ 2024: ಹ್ಯಾಟ್ರಿಕ್ ವೀರ ಡಿಕೆಸು ವಿರುದ್ಧ ಮೈತ್ರಿ ಅಭ್ಯರ್ಥಿ ಯಾರು?
 

Latest Videos
Follow Us:
Download App:
  • android
  • ios