ಔರಂಗಾಬಾದ್(ನ.24): ಮುಂದಿನ 2-3 ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ರಾವ್‌ಸಾಹೇಬ್‌ ದನ್ವೆ ಭರವಸೆ ವ್ಯಕ್ತಪಡಿಸಿದ್ದಾರೆ.

ಪದವೀಧರರ ಕ್ಷೇತ್ರದ ವಿಧಾನಪರಿಷತ್‌ ಚುನಾವಣೆ ರಾರ‍ಯಲಿಯನ್ನುದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಈಗಾಗಲೇ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದಿದ್ದಾರೆ. ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ಬರಲ್ಲ ಎಂಬ ಆತಂಕದಿಂದ ಬಿಜೆಪಿ ಕಾರ್ಯಕರ್ತರು ಹೊರಬರಬೇಕು. ಈ ಚುನಾವಣೆಗಳು ಮುಗಿಯುವವರೆಗೆ ಮಾತ್ರ ಕಾಯಬೇಕಿದೆ. ಮಹಾರಾಷ್ಟ್ರದ ಆಡಳಿತದ ಚುಕ್ಕಾಣಿ ಬಿಜೆಪಿ ಕೈಗೆ ಬರಲಿದೆ ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.

ಬಿಹಾರ ವಿಧಾನಸಭೆ ಫಲಿತಾಂಶದ ಬಳಿಕ ಮಾತನಾಡಿದ್ದ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್, ರಾಜ್ಯದಲ್ಲಿ ಠಾಕ್ರೆ ಸರ್ಕಾರ ಮುಂದಿನ ನಾಲ್ಕು ವರ್ಷ ಪೂರ್ಣ ಮಾಡಲ್ಲ. ಉದ್ಧವ್ ಠಾಕ್ರೆ ಸರ್ಕಾರ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದರು.ನಾವು ಸಂವಿಧಾನ ಒಪ್ಪಿಕೊಳ್ಳುವರು. ಹಾಗಾಗಿ ಸಂವಿಧಾನ ವಿರುದ್ಧವಾಗಿ ನಾವು ಯಾವುದೇ ನಿರ್ಧಾರ ತೆಗೆದುಕೊಳ್ಳಲ್ಲ. ವಿಪಕ್ಷ ಸ್ಥಾನದಲ್ಲಿ ಕುಳಿತು ನಾವು ಸಮರ್ಥವಾಗಿ ಕೆಲಸ ಮಾಡುತ್ತೇವೆ. ಆದ್ರೆ ಮೂರು ಪಕ್ಷಗಳ (ಶಿವಸೇನೆ+ಎನ್‍ಸಿಪಿ+ಕಾಂಗ್ರೆಸ್) ಮೈತ್ರಿ ಅಂತ್ಯವಾಗಲಿದೆ. ಮುಂದಿನ ದಿನಗಳಲ್ಲಿ ಚುನಾವಣೆ ಎದುರಾಗಬಹುದು ಅಥವಾ ನಾವೇ ಸರ್ಕಾರ ರಚಿಸುವ ಸಾಧ್ಯತೆಗಳಿವೆ ಎಂದು ಚಂದ್ರಕಾಂತ್ ಪಾಟೀಲ್ ಹೇಳಿದ್ದರು.

ಮೋದಿ ಸಂಸದ ಸ್ಥಾನಕ್ಕೆ ಸವಾಲೆಸೆದ ಮಾಜಿ ಯೋಧ ತೇಜ್‌ ಬಹದ್ದೂರ್‌ ಅರ್ಜಿ ವಜಾ!

ಆಪರೇಸಷನ್ ಕಮಲ?: ಬಿಹಾರ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಬಿಜೆಪಿ ಶೀಘ್ರದಲ್ಲೇ ಆಪರೇಷನ್ ಕಮಲಕ್ಕೆ ಮುಂದಾಗಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. ಈ ಮಾತುಗಳಿಗೆ ಪೂರಕ ಎಂಬಂತೆ ರಾವ್‌ಸಾಹೇಬ್‌ ದನ್ವೆ ಹಾಗೂ ಚಂದ್ರಕಾಂತ್ ಪಾಟೀಲ್ ಹೇಳಿಕೆ ಮಹಾ ಅಂಗಳದಲ್ಲಿ ಸಂಚಲನ ಮೂಡಿಸಿದೆ.