‘ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಅಭಿವೃದ್ಧಿ ಫಟಾಫಟ್‌ (ಶೀಘ್ರದಲ್ಲಿ) ಆಗತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರ ಪಕ್ಷ ಆಡಳಿತದಲ್ಲಿರುವ ಸರ್ಕಾರದಲ್ಲಿ ಅಭಿವೃದ್ಧಿ ಹಣ ಇಲ್ಲ’ ಎಂದು ಬಿಜೆಪಿ ಹರಿಹಾಯ್ದಿದೆ.

ನವದೆಹಲಿ (ಮೇ.21): ‘ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಅಭಿವೃದ್ಧಿ ಫಟಾಫಟ್‌ (ಶೀಘ್ರದಲ್ಲಿ) ಆಗತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರ ಪಕ್ಷ ಆಡಳಿತದಲ್ಲಿರುವ ಸರ್ಕಾರದಲ್ಲಿ ಅಭಿವೃದ್ಧಿ ಹಣ ಇಲ್ಲ’ ಎಂದು ಬಿಜೆಪಿ ಹರಿಹಾಯ್ದಿದೆ.

ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ತ್ವರಿತವಾಗಿ, ಸಕಾಲಿಕವಾಗಿ ತಲುಪುತ್ತದೆ ಎಂದಿದ್ದರು. ಆದರೆ ಇದೀಗ ವಿಳಂಬವಾಗುತ್ತಿರುವುದಕ್ಕೆ ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ, ‘ ರಾಹುಲ್‌ರ ಫಟಾ ಫಟ್‌ ಅರ್ಥಶಾಸ್ತ್ರವು ತನ್ನದೇ ಭಾರದಿಂದ ಕುಸಿಯುತ್ತಿದೆ. ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯಡಿ ಕೋಟಿಗಟ್ಟಲೆ ಹಣ ವರ್ಗಾಯಿಸಲಾಗಿದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವ ಕಟುವಾಗಿದೆ, ಅವರ ಕಾಂಗ್ರೆಸ್‌ ಸರ್ಕಾರದ ಬಳಿ ಹಣವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಏನು ಸಾಧನೆ ಮಾಡಿದ್ದೀರಿ ಅಂತ ಸಾಧನಾ ಸಮಾವೇಶ?: ಎರಡು ವರ್ಷದಲ್ಲಿ ಏನು ಸಾಧನೆ ಮಾಡಿದ್ದೀರಿ ಅಂತ ಸಮಾವೇಶ ‌ಮಾಡುತ್ತೀರಿ? ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ಶಾಸಕ ಮಹೇಶ ಟೆಂಗಿನಕಾಯಿ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ವಿಜಯನಗರದ ಕಾಂಗ್ರೆಸ್ ಸಮಾವೇಶ ಹಿನ್ನೆಲೆಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಎರಡು ವರ್ಷ ರಾಜ್ಯವನ್ನು ಲೂಟಿ, ದರೋಡೆ ಮಾಡಿದ್ದಕ್ಕೆ ಸಮಾವೇಶನಾ? ಎಂದು ಕೇಳಿದ ಅವರು ಎಐಸಿಸಿಗೆ ರಾಜ್ಯ ಎಟಿಎಂ ಆಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಇರೋವರೆಗೂ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಡಿ.ಕೆ.ಶಿವಕುಮಾರ್‌

ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಮಾತನಾಡಿ, ನೂರಾರು ಬಾಣಂತಿಯರ ಸಾವು, ದಲಿತರ ಹಣ ಲೂಟಿ ಹೊಡೆದಿದ್ದೆ ಇವರ ಸಾಧನೆ. ಸಿಎಂ ಸಿದ್ದರಾಮಯ್ಯ ಅವರಿಂದ ಹಿಡಿದು ಎಲ್ಲರೂ ಲೂಟಿ‌ ಹೊಡೆದಿದಿದ್ದಾರೆ. ಇದು 60 ಪರ್ಸೆಂಟೇಜ್‌ ಸರ್ಕಾರ. ಗುತ್ತಿಗೆದಾರರೇ ಈ ಬಗ್ಗೆ ಹೇಳುತ್ತಿದ್ದಾರೆ. ಈ ಸರ್ಕಾರದಿಂದ ಒಂದೇ ಒಂದು ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಮುಸ್ಲಿಂ ಗುತ್ತಿಗೆದಾರರಿಗೆ ಶೇ. 4 ಮೀಸಲಾತಿ ಸೇರಿದಂತೆ ಮುಸ್ಲಿಮರ ತುಷ್ಠೀಕರಣ ಮಾಡುತ್ತಿದೆ ಎಂದು ದೂರಿದರು. ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾ‍‍ಳಿಯಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರತಿ ಕ್ಷೇತ್ರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಸಮಾವೇಶದಲ್ಲಿ ಸಿಎಂ ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಕುರಿತು ಪ್ರಸ್ತಾಪಿಸುತ್ತೀರಾ ಎಂದು ಪ್ರಶ್ನಿಸಿದರು.