Asianet Suvarna News Asianet Suvarna News

ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ: ತೇಜಸ್ವಿ ಸೂರ್ಯ ವಿರುದ್ಧ ಚಾರ್ಜ್‌ಶೀಟ್

ಕಾಶ್ಮೀರಿ ಪಂಡಿತರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮನೆ ಎದುರು ಪ್ರತಿಭಟನೆ ನಡೆಸಿದ್ದ ಪ್ರಕರಣದಲ್ಲಿ ದಿಲ್ಲಿ ಪೊಲೀಸರು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 30 ಜನರ ವಿರುದ್ಧ ಕೋರ್ಟ್‌ನಲ್ಲಿ ಚಾರ್ಜ್‌ಶೀಟ್ ಹಾಕಿದ್ದಾರೆ. 

BJPs Tejasvi Surya named in CM Arvind Kejriwal house protest chargesheet gvd
Author
Bangalore, First Published Jul 24, 2022, 10:31 AM IST

ನವದೆಹಲಿ (ಜು.24): ಕಾಶ್ಮೀರಿ ಪಂಡಿತರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮನೆ ಎದುರು ಪ್ರತಿಭಟನೆ ನಡೆಸಿದ್ದ ಪ್ರಕರಣದಲ್ಲಿ ದಿಲ್ಲಿ ಪೊಲೀಸರು, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 30 ಜನರ ವಿರುದ್ಧ ಕೋರ್ಟ್‌ನಲ್ಲಿ ಚಾರ್ಜ್‌ಶೀಟ್ ಹಾಕಿದ್ದಾರೆ. ‘ಸಿಎಂ ನಿವಾಸದೆದುರು ಅಕ್ರಮವಾಗಿ ಜನರು ನೆರೆದಿದ್ದಲ್ಲದೇ, ಸರ್ಕಾರಿ ಆಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ 10 ಜನರ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಲಾಗಿದೆ. 

ಇನ್ನು ಕೆಲವರ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿಯುಂಟು ಮಾಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಹೇಳಿದ್ದಾರೆ. ಪದೇ ಪದೇ ಎಚ್ಚರಿಕೆ ನೀಡಿದರೂ ಕೋರ್ಟಿನ ಆದೇಶವನ್ನು ಉಲ್ಲಂಘಿಸಿ ಬಿಜೆಪಿ ನಾಯಕರು ಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸಿ, ದಾಳಿ ಮಾಡಿದ್ದಾರೆ ಎಂದು ಆರೋಪಿಸಿ, 1000 ಪುಟಗಳ ಚಾರ್ಜ್‌ಶೀಟ್ ದಾಖಲಿಸಲಾಗಿದೆ.

Karauli Violence ಕರೌಲಿ ಪ್ರವೇಶಿಸಲು ಯತ್ನಿಸಿದ ಸಂಸದ ತೇಜಸ್ವಿ ಸೂರ್ಯ ರಾಜಸ್ಥಾನ ಪೊಲೀಸ್ ವಶಕ್ಕೆ!

ತೇಜಸ್ವಿ ಸೂರ‍್ಯ ವಿಚಾರಣೆ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮನೆಯೆದುರು ಪ್ರತಿಭಟನೆ ನಡೆಸಿದ್ದಕ್ಕೆ ಬೆಂಗಳೂರಿನ ಬಿಜೆಪಿ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಅಧ್ಯಕ್ಷ ತೇಜಸ್ವಿ ಸೂರ್ಯ ಅವರನ್ನು ದಿಲ್ಲಿ ಪೊಲೀಸರು 2 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. 10 ದಿನಗಳ ಪೂರ್ವದಲ್ಲೂ ತೇಜಸ್ವಿ ಸೂರ್ಯರನ್ನು ಪ್ರತಿಭಟನೆಯಲ್ಲಿ ಅವರ ಪಾತ್ರದ ಕುರಿತಾಗಿ ಪ್ರಶ್ನಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮಾ.30 ರಂದು ತೇಜಸ್ವಿ ಸೂರ್ಯ ಅವರ ನೇತೃತ್ವದ ಬಿಜೆಪಿ ಯುವ ಮೋರ್ಚಾ ಕಾಶ್ಮೀರ್‌ ಫೈಲ್ಸ್‌ ಚಿತ್ರದ ಬಗ್ಗೆ ಕೇಜ್ರಿವಾಲ್‌ ಮಾಡಿದ ಕಾಮೆಂಟ್‌ಗಳನ್ನು ವಿರೋಧಿಸಿ ಕೇಜ್ರಿವಾಲ್‌ ಮನೆಯೆದುರು ಭಾರೀ ಪ್ರತಿಭಟನೆ ನಡೆಸಿತ್ತು. ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ನೂಕಿ, ಸಿಸಿಟೀವಿ ಕ್ಯಾಮರಾ ನಾಶಪಡಿಸಿದ್ದರು. ಈ ಹಿನ್ನೆಲೆಯಲ್ಲಿ 8 ಜನರನ್ನು ಬಂಧಿಸಲಾಗಿತ್ತು. ಪೊಲೀಸರು ತೇಜಸ್ವಿ ಸೂರ್ಯ ಅವರಿಗೆ ನೋಟಿಸ್‌ ಕಳಿಸಿ ವಿಚಾರಣೆಗೆ ಹಾಜರಾಗಲು ತಿಳಿಸಿದ್ದರು.

ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ: ಕಾಶ್ಮೀರದಲ್ಲಿ  ಹಿಂದು ಹತ್ಯೆ ಕುರಿತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅಪಹಾಸ್ಯ ಮಾಡಿದ್ದಾರೆ. ಇದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ಮಾಡಿದೆ. ಈ ಕೂಡಲೇ ಕೇಜ್ರಿವಾಲ್ ಕ್ಷಮೆಯಾಚಿಸಬೇಕು. ಎಲ್ಲಿಯವರೆಗೂ ಕ್ಷಮೆ ಕೇಳುವುದಿಲ್ಲವೋ ಅಲ್ಲಿಯ ತನಕ ಯುವ ಮೋರ್ಚಾ ಪ್ರತಿಭಟಿಸಲಿದೆ ಎಂದು ಹೇಳಿದ್ದಾರೆ. ಅರವಿಂದ್ ಕೇಜ್ರಿವಾಲ್ ಒಬ್ಬ ಮಹಾ ಸುಳ್ಳುಗಾರ. ಆತ ಹಿಂದೂ ವಿರೋಧಿ, ರಾಷ್ಟ್ರ ವಿರೋಧಿ. ಆಮ್ ಆದ್ಮಿ ಪಕ್ಷದ ಮಾತು ಯಾವಾಗಲು ಭಯೋತ್ಪಾದಕರ ಕಡೆ ಇರುತ್ತೆ. ಭಯೋತ್ಪಾದಕದ ಹತ್ಯೆಯಾದವರ ಬಗ್ಗೆ ಒಂದು ಮಾತೂ ಆಡುವುದಿಲ್ಲ. 

ಆಪರೇಷನ್‌ ಗಂಗಾ ಯಶಸ್ವಿ: ಕನ್ನಡಿಗರ ಪರವಾಗಿ ಮೋದಿಗೆ ತೇಜಸ್ವಿ ಸೂರ್ಯ ಧನ್ಯವಾದ!

ಇದು ನಗರ ನಕ್ಸಲರ ತಂತ್ರಗಾರಿಕೆ. ಕೇಜ್ರಿವಾಲ್ ಅವರೇ ನಗರ ನಕ್ಸಲರು ಇದು ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿ ತೋರಿಸುತ್ತೆ ಎಂದು ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ನಡುವೆ, ದೆಹಲಿ ಮುಖ್ಯಮಂತ್ರಿ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ತಡೆಗಳನ್ನು ಮುರಿದು ದುಷ್ಕರ್ಮಿಗಳು ಕೇಜ್ರಿವಾಲ್ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ. "ಸಮಾಜ ವಿರೋಧಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಮೇಲೆ ದಾಳಿ ಮಾಡಿದ್ದಾರೆ. 

Follow Us:
Download App:
  • android
  • ios