*  ಗ್ರೆನೇಡ್ ಸ್ಫೋಟದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ *  ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದಿಂದ ಪರಿಶೀಲನೆ * ಸಣ್ಣ ರಾಕೆಟ್ ಚಾಲಿತ ಗ್ರೆನೇಡ್ ಸ್ಫೋಟ

ಮೊಹಾಲಿ(ಮೇ.10):  ಪಂಜಾಬ್‌ನ ಮೊಹಾಲಿಯಲ್ಲಿರುವ ಪೊಲೀಸ್‌ ಗುಪ್ತಚರ ವಿಭಾಗದ ಕೇಂದ್ರ ಕಚೇರಿಯ(Punjab Police's Intelligence Office) ಮೇಲೆ ಸೋಮವಾರ ಗ್ರೆನೇಡ್‌(Grenade) ದಾಳಿ ನಡೆಸಲಾಗಿದೆ. ಇದರಲ್ಲಿ ಭಯೋತ್ಪಾದನಾ ಸಂಘಟನೆಗಳ ಪಾತ್ರವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಕೆಟ್‌ ಲಾಂಚರ್‌ ಬಳಕೆ ಮಾಡಿ ಈ ಸ್ಫೋಟಕವನ್ನು ಉಡಾಯಿಸಲಾಗಿದ್ದು, 7.45ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಯಾವುದೇ ಆಸ್ತಿ, ಪ್ರಾಣಹಾನಿಯಾಗಿಲ್ಲ ಎಂದು ಪೊಲೀಸ್‌(Police) ಅಧಿಕಾರಿಗಳು ತಿಳಿಸಿದ್ದಾರೆ. 

Explained: ವಿದ್ಯಾವಂತ ಮಹಿಳೆ ಕರಾಚಿಯಲ್ಲಿ ಆತ್ಮಾಹುತಿ ದಾಳಿ ನಡೆಸಲು ಕಾರಣವೇನು?

ಇಡೀ ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ. ವಿಧಿವಿಜ್ಞಾನ ವಿಭಾಗದ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು ತನಿಖೆ ಆರಂಭಿಸಿದ್ದಾರೆ. ದಾಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರ ಸಲ್ಲಿಸುವಂತೆ ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಈ ಸ್ಫೋಟಕ ಮತ್ತು ಏ.24ರಂದು ಬುರೈಲ್‌ ಜೈಲಿನಲ್ಲಿ ವಶಪಡಿಸಿಕೊಂಡ ಸ್ಫೋಟಕಕ್ಕೆ ಸಾಕಷ್ಟು ಸಾಮ್ಯತೆ ಇದೆ.