Asianet Suvarna News Asianet Suvarna News

ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 9 ಕಾರ್ಮಿಕರ ದಾರುಣ ಸಾವು

 ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 9 ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

blast in firecrackers factory in tamilnadu 9 killed after massive explosion at kanchipuram akb
Author
First Published Mar 23, 2023, 7:07 AM IST

ಕಾಂಚೀಪುರಂ:  ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 9 ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಪ್ರದೇಶದಲ್ಲಿ  ಈ ಪಟಾಕಿ ಫ್ಯಾಕ್ಟರಿ ಇದ್ದು, ನಿನ್ನೆ ಈ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದೆ.  ಮೃತರಲ್ಲಿ ಮೂವರು ಮಹಿಳಾ ಕಾರ್ಮಿಕರು ಸೇರಿದ್ದಾರೆ.  ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ಮತ್ತು 10 ಆಂಬ್ಯುಲೆನ್ಸ್‌ಗಳು ಆಗಮಿಸಿದ್ದು, ರಕ್ಷಣಾ ಕಾರ್ಯ ನಡೆಸಿವೆ. ದಿಢೀರ್ ಸ್ಫೋಟಕ್ಕೆ ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

ಕಾಂಚೀಪುರಂ ಜಿಲ್ಲಾ ಮ್ಯಾಜಿಸ್ಟ್ರೇಟ್ ಎಂ ಆರತಿ (M Aarthi), ಮತ್ತು ಡಿಐಜಿ ಪಿ ಪಕಲವನ್ (P Pakalavan) ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಕಾಂಚೀಪುರಂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಘಟನೆ ಬಗ್ಗೆ ಹಾಗೂ ಸ್ಫೋಟದ ಕಾರಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ  ಭಾರೀ ಸ್ಫೋಟದ ಪ್ರಭಾವದಿಂದಾಗಿ ಹಲವಾರು ಪ್ರಾಣಿಗಳು ಸಹ ಸಾವನ್ನಪ್ಪಿವೆ. ಸ್ಫೋಟಕ್ಕೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಕೇಸ್‌: ಸಂತ್ರಸ್ಥನ ಬಾಳಿಗೆ ಹೊಸ ಚೈತನ್ಯ ನೀಡಿದ ಯುಗಾದಿ

ರಾಸಾಯನಿಕಗಳು (chemicals) ಮತ್ತು ತಾಪಮಾನ (temperature) ಬದಲಾವಣೆಯ ನಡುವಿನ ಘರ್ಷಣೆ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಕಾರ್ಮಿಕರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ತಮಿಳುನಾಡಿನಲ್ಲಿ  ಪಟಾಕಿ ಫ್ಯಾಕ್ಟರಿಯಲ್ಲಿ ಬೆಂಕಿ ತಗುಲಿ 9 ಮಂದಿ ಸಾವನ್ನಪ್ಪಿರುವುದು ತುಂಬಾ ದುಃಖ ತಂದಿದೆ. ಬಿಜೆಪಿ ಪರವಾಗಿ ನಾನು ಮೃತರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ತಮಿಳುನಾಡು ಸರ್ಕಾರ (Tamil Nadu Government) ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಅಣ್ಣಾಮಲೈ ಟ್ವೀಟ್ ಮಾಡಿದ್ದಾರೆ.

ತುಂಗೆ​ಯಲ್ಲಿ ಬಾಂಬ್‌ ಸ್ಫೋಟ: ಆರೋಪಿಗಳ ವಿರುದ್ಧ ಐಎನ್‌ಎ ಚಾರ್ಜ್‌ಶೀಟ್

 

 

Follow Us:
Download App:
  • android
  • ios