* ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ* ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ (ಎಪಿಇಡಿಎ) ಅವರ ಮಾಹಿತಿ* 24 ವಿಮಾನಯಾನ ಸಂಸ್ಥೆಗಳು 46 ದೇಶಗಳಿಗೆ ಪೆರಿಷಬಲ್ ಉತ್ಪನ್ನಗಳನ್ನು ರಫ್ತು ಮಾಡುತ್ತಿವೆ*  ರಫ್ತು ಬೇಡಿಕೆಯೂ ಸಹ ದಿನೇದಿನೆ ಹೆಚ್ಚುತ್ತಲೇ ಇದೆ

ಬೆಂಗಳೂರು (ಅ. 08) ಬೆಂಗಳೂರು ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಅತಿ ಹೆಚ್ಚು ಪೆರಿಷೆಬಲ್ ಪದಾರ್ಥಗಳ ಸರಕು ಸಾಗಣಿ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ (ಎಪಿಇಡಿಎ) ಅವರ ಮಾಹಿತಿ ಪ್ರಕಾರ 2020-21ರ ಹಣಕಾಸು ವರ್ಷದಲ್ಲಿ 41,130 ಮೆಟ್ರಿಕ್ ಟನ್‌ನಷ್ಟು ಕಡಿಮೆ ಬಾಳಿಕೆ ಅವಧಿಯ ಹಣ್ಣು, ತರಕಾರಿಯಂಥ (ಪೆರಿಷಬಲ್) ಉತ್ಪನ್ನಗಳನ್ನು ರಫ್ತು ಮಾಡಲಾಗಿದ್ದು, ಇದು ದೇಶದ ಪೆರಿಷಬಲ್ ಉತ್ಪನ್ನಗಳ ಪೈಕಿ ಶೇ.31ರಷ್ಟು ಕೆಂಪೇಗೌಡ ವಿಮಾನ ನಿಲ್ದಾಣದಿಂದಲೇ ರಫ್ತಾಗಿದೆ.

ಕೋಳಿ, ಹೂಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, 28,182 ಮೆಟ್ರಿಕ್‌ಟನ್‌ನಷ್ಟು ಕೋಳಿ ಹಾಗೂ 1,296 ಮೆ.ಟ ಹೂವುಗಳನ್ನು ರಫ್ತು ಮಾಡಲಾಗಿದೆ. 24 ವಿಮಾನಯಾನ ಸಂಸ್ಥೆಗಳು 46 ದೇಶಗಳಿಗೆ ಪೆರಿಷಬಲ್ ಉತ್ಪನ್ನಗಳನ್ನು ರಫ್ತು ಮಾಡುತ್ತಿವೆ. ಪೆರಿಷಬಲ್ ಉತ್ಪನ್ನಗಳನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ಕೆಡದಂತೆ ಸಂಸ್ಕರಿಸಿ ವೇಗವಾಗಿ ರಫ್ತು ಮಾಡಲಾಗುತ್ತಿದೆ. ಇದರಿಂದ ರಫ್ತು ಬೇಡಿಕೆಯೂ ಸಹ ದಿನೇದಿನೆ ಹೆಚ್ಚುತ್ತಲೇ ಇದೆ ಎಂದು ಬಿಐಎಎಲ್ ಸ್ಟಾರ್ಟಜಿ ಆಂಡ್ ಡೆವಲಪ್‌ಮೆಂಟ್ ಮುಖ್ಯಾಧಿಕಾರಿ ಸಾತ್ಯಕಿ ರಘುನಾಥ್ ಹೇಳಿದ್ದಾರೆ. 

ಕೆಂಪೇಗೌಡ ವಿಮಾಣ ನಿಲ್ದಾಣದ ಬಳಿ ಮನರಂಜನಾ ಗ್ರಾಮ... ಒಂದೆರಡಲ್ಲ ವಿಶೇಷ!

ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ರೈತರ ಉತ್ಪನ್ನಗಳಿಗೆ ಆದಾಯ ಕೊಡಿಸುವ ನಿಟ್ಟಿನಲ್ಲಿ ಉತ್ಪನ್ನಗಳ ರಫ್ತು ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣ, ರಫ್ತು ಹಾಗೂ ಪಾಲುದಾರರ ಸಹಯೋಗದಲ್ಲಿ ಕೋಲ್ಡ್ ಸ್ಟೋರೇಜ್‌ನ ಇನ್ನಷ್ಟು ಮೇಲ್ದರ್ಜೆಗೇರಿಸಲು ಸಹ ಯೊಜಿಸಿದ್ದೇವೆ ಎಂದು ಎಪಿಇಡಿಎ ಅಧ್ಯಕ್ಷ ಡಾ.ಎಂ. ಅಂಗಮುತ್ತು ತಿಳಿಸಿದ್ದಾರೆ.

ಮನರಂಜನಾ ಗ್ರಾಮ; ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ತಲೆ ಎತ್ತುತ್ತಿರುವ “ಏರ್‌ಪೋರ್ಟ್ ಸಿಟಿ” ಭಾಗವಾಗಿ “ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ (ಆರ್‌ಡಿಇ) ಗ್ರಾಮ (ಮನರಂಜನಾ ಗ್ರಾಮ) ನಿರ್ಮಿಸಲು ಡಿಪಿ ಆರ್ಕಿಟೆಕ್ಟ್ ಸಿಂಗಾಪುರ ಆಂಡ್ ಪೋರ್ಟ್‌ಲ್ಯಾಂಡ್‌ ಡಿಸೈನ್ ಯುಕೆ ಸಂಸ್ಥೆ ಆರ್ಕಿಟೆಕ್ಟ್ ವಿನ್ಯಾಸಕ್ಕಾಗಿ ನೇಮಕ ಮಾಡಲಾಗಿತ್ತು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಏಷ್ಯಾದಲ್ಲಿಯೇ ಅತ್ಯುತ್ತಮ ಸಿಬ್ಬಂದಿ ಹೊಂದಿರುವ ನಿಲ್ದಾಣ ಎಂಬ ಶ್ರೇಯಕ್ಕೂ ಪಾತ್ರವಾಗಿತ್ತು. ಬೆಂಗಳೂರಿನ ಹಿರಿಮೆಗಳ ಜಾಗದಲ್ಲಿ ಈ ಮನರಂಜನಾ ಗ್ರಾಮ ಸಹ ಸ್ಥಾನ ಪಡೆದುಕೊಳ್ಳಲಿದೆ.