ಮಮತಾ, ಕಾಂಗ್ರೆಸ್ ನಡುವೆ ವಾಕ್ಸಮರ : 240 ಸೀಟಿಗೆ ದೀದಿ ಬೇಡಿಕೆ , ಇಂಡಿಯಾ ಒಕ್ಕೂಟದಲ್ಲಿ ಒಡಕು?
ವಿಪಕ್ಷಗಳ ಇಂಡಿಯಾ ಕೂಟದಲ್ಲಿ ಒಡಕು ಮುಂದುವರಿದಿದ್ದು, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಹಾಗೂ ಸಿಪಿಎಂ ಮುಖಂಡ ಸುಜನ್ ಚಕ್ರವರ್ತಿ ನಡುವೆ ಮಾತಿನ ಸಮರ ಏರ್ಪಟ್ಟಿದೆ. ಈ ಸಮರದ ನಡುವೆ ಬಿರುಕಿಗೆ ತೇಪೆ ಹಚ್ಚಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಯತ್ನಿಸಿದ್ದಾರೆ.
ಕೋಲ್ಕತಾ: ವಿಪಕ್ಷಗಳ ಇಂಡಿಯಾ ಕೂಟದಲ್ಲಿ ಒಡಕು ಮುಂದುವರಿದಿದ್ದು, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಹಾಗೂ ಸಿಪಿಎಂ ಮುಖಂಡ ಸುಜನ್ ಚಕ್ರವರ್ತಿ ನಡುವೆ ಮಾತಿನ ಸಮರ ಏರ್ಪಟ್ಟಿದೆ. ಈ ಸಮರದ ನಡುವೆ ಬಿರುಕಿಗೆ ತೇಪೆ ಹಚ್ಚಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಯತ್ನಿಸಿದ್ದಾರೆ.
ಕೋಲ್ಕತಾದಲ್ಲಿ ಮಾತನಾಡಿದ ಮಮತಾ, 'ಕಾಂಗ್ರೆಸ್ ಪಕ್ಷ 300 ಸೀಟಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿ. ಉಳಿದ ಸುಮಾರು 240 ಸ್ಥಾನಗಳನ್ನು ಟಿಎಂಸಿಗೆ ಹಾಗೂ ಇತರ ಪ್ರಾದೇಶಿಕ ಪಕ್ಷಗಳಿಗೆ ಬಿಟ್ಟುಕೊಡಬೇಕು. ಸೀಟು ಹಂಚಿಕೆ ವಿಳಂಬ ಸಲ್ಲದು' ಎಂದು ಆಗ್ರಹಿಸಿದರು. ಅಲ್ಲದೆ, 'ಇಂಡಿಯಾ ಕೂಟ ನಿಯಂತ್ರಿಸಲು ಸಿಪಿಎಂ ಯತ್ನ ನಡೆಸುತ್ತಿದೆ' ಎಂದು ದೂರಿದರು ಮತ್ತು 'ಬಿಜೆಪಿ
ರಾಮಮಂದಿರ ಅಜೆಂಡಾ ಹಣಿಯಲು ವಿಪಕ್ಷದವರು (ರಾಹುಲ್ ಗಾಂಧಿ) ಕೇವಲ ದೇಗುಲ ದರ್ಶನ ಮಾಡಿದರೆ ಸಾಲದು. ನನ್ನ ರೀತಿ ಮಸೀದಿ, ಮಂದಿರ, ಗುರುದ್ವಾರಕ್ಕೂ ಹೋಗಬೇಕು' ಎಂದರು.
ಇಂಡಿಯಾ ಕೂಟದ ಸಂಚಾಲಕರಾಗಿ ಬಿಹಾರ ಸಿಎಂ: ಮುನಿಸಿಕೊಂಡ ನಿತೀಶ್‌ರ ಸಮಾಧಾನಿಸುವ ಯತ್ನ?
ಇದಕ್ಕೆ ಕಾಂಗ್ರೆಸ್ಸಿಗ ಅಧೀರ್ ತಿರುಗೇಟು ನೀಡಿ, ಬಿಜೆಪಿಗೆ ಸಹಾಯಮಾಡಲು ಮಮತಾ ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇನ್ನು ಸಿಪಿಎಂನ ಚಕ್ರವರ್ತಿ ಮಾತನಾಡಿ, 'ಇಂಡಿಯಾ ಕೂಟವನ್ನು ಸಿಪಿಎಂ ನಿಯಂತ್ರಿಸುತ್ತಿದೆ ಎಂಬುದು ಸುಳ್ಳು' ಎಂದಿದ್ದಾರೆ.
ಖರ್ಗೆ ಪ್ರಧಾನಿ ಅಭ್ಯರ್ಥಿಗೆ ಇಂಡಿಯಾದಲ್ಲೀಗ ಭಿನ್ನ ರಾಗ, ಶರದ್ ಪವಾರ್ ಅಪಸ್ವರ
ರಾಹುಲ್ ತೇಪೆ: ಇನ್ನು ಅಸ್ಸಾಂನಲ್ಲಿ ರಾಹುಲ್ ಗಾಂಧಿ ಮಾತನಾಡಿ, ನಮಗೂ ಮಮತಾ ಬ್ಯಾನರ್ಜಿಗೂ ಉತ್ತಮ ಸ್ನೇಹವಿದೆ. ಮಮತಾ ಬಗ್ಗೆ ನಮ್ಮ ಅಧೀರ್ ಹೇಳಿಕೆಗಳು ಲೆಕ್ಕಕ್ಕೆ ಬರುವುದಿಲ್ಲ' ಎಂದರು.