ನವದೆಹಲಿ(ಮಾ.22): ಕೊರೋನಾ ಪೀಡಿತರು ಹಾಗೂ ಸೋಂಕು ಇರುವ ಶಂಕಿತರು ತಮಗೆ ವಿಧಿಸಲಾಗಿರುವ ದಿಗ್ಬಂಧನ ಉಲ್ಲಂಘಿಸಿದ್ದೇ ಆದಲ್ಲಿ, ಅಂಥವರಿಗೆ 6 ತಿಂಗಳು ಜೈಲು ಶಿಕ್ಷೆ ಹಾಗೂ 1000 ರು. ದಂಡ ವಿಧಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಕೊರೋನಾ ತಡೆಗಾಗಿ ಸೋಂಕು ಪೀಡಿತ ನಾಗರಿಕರು ಹಾಗೂ ವ್ಯಾಧಿಯ ಶಂಕೆ ಇರುವವರು ತಮ್ಮ ಗೃಹಬಂಧನವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲೇಬೇಕು. ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಗಳಿಗೆ ಅಧಿಕಾರ ನೀಡಿದ್ದೇವೆ. ಇಂಥ ಮಾರಿಗಳನ್ನು ನಿರ್ಬಂಧಿಸಲು ಸಾಮಾಜಿಕ ಅಂತರ ಹಾಗೂ ದಿಗ್ಬಂಧನಗಳು ನಿರ್ಣಾಯಕ ಪಾತ್ರ ವಹಿಸಲಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಕೊರೋನಾ ವೈರಸ್ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇತ್ತೀಚಿನ ದಿನಗಳಲ್ಲಿ ಗೃಹಬಂಧನದಲ್ಲಿರುವ ಹಾಗೂ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಗಳಲ್ಲಿ ಕೊರೋನಾಕ್ಕೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ತಪ್ಪಿಸಿಕೊಂಡು ಹೋಗುತ್ತಿರುವ ಹಿನ್ನೆಲೆ, ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.