ನವದೆಹಲಿ(ನ.17):  ಮಹತ್ವದ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. 12ನೇ ಬಿಕ್ರ್ಸ್ ಸಮ್ಮಿಟ್‌ನಲ್ಲಿ ಮೋದಿ, ಭಯೋತ್ಪಾದನೆ ವಿರುದ್ಧ ಒಗ್ಗಾಟ್ಟಾಗಿ ಹೋರಾಟ ಮಾಡಬೇಕೆಂದು ಪುನರುಚ್ಚರಿಸಿದ್ದಾರೆ. ಸದ್ಯ ಭಯೋತ್ಪಾದನೆ ವಿಶ್ವದ ಅತೀ ದೊಡ್ಡ ಹಾಗೂ ಗಂಭೀರ ಸಮಸ್ಯೆ. ಆದರೆ ಪಾಕಿಸ್ತಾನ ಸೇರಿದಂತೆ ಭಯೋತ್ಪಾದನೆಯನ್ನು ಪೋತ್ಸಾಹಿಸುವ ದೇಶಗಳು ಸದ್ಯದ ಪರಿಸ್ಥಿತಿಯ ಜವಾಬ್ದಾರರು ಎಂದು ಮೋದಿ ಹೇಳಿದ್ದಾರೆ.

ಪಿಎಂ ಮೋದಿಯ ಆತ್ಮನಿರ್ಭರ ಕನಸಿಗೆ ಸಾಧು ಸಂತರ ಸಾಥ್!

ಭಯೋತ್ಪಾದನೆ ನಿಗ್ರಹಕ್ಕೆ ಎಲ್ಲಾ ದೇಶಗಳು ಪಣತೊಟ್ಟಿವೆ. ಈ ನಿಟ್ಟಿನಲ್ಲಿ ರಷ್ಯಾ ಅಧ್ಯಕ್ಷತೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯತಂತ್ರಕ್ಕೆ ಅಂತಿಮ ಆಕಾರವನ್ನು ನೀಡಲು ಬ್ರಿಕ್ಸ್ ಯಶಸ್ವಿಯಾಗಿದೆ ಎಂದು ಮೋದಿ ಹೇಳಿದರು.

 

JNU ಕ್ಯಾಂಪಸ್‌ನಲ್ಲಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಿದ ಮೋದಿ!.

ಕೊರೋನಾ ವೈರಸ್ ಸಾಂಕ್ರಾಮಿಕ ಬಿಕ್ಕಟ್ಟಿನ ನಡುವೆ ಜಗತ್ತು ಎದುರಿಸುತ್ತಿರುವ ಸಮಸ್ಯೆಗಳ ಸೇರಿದಂತೆ ಹಲವು ವಿಷಯಗಳಿಗೆ ಕುರಿತು ಬ್ರಿಕ್ಸ್ ಸಮ್ಮಿಟ್ ವೇದಿಕೆಯಾಗಲಿದೆ. ವರ್ಚುವಲ್ ಕಾರ್ಯಕ್ರಮದ ಮೂಲಕ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಒಂದು ವಾರದಲ್ಲಿ ಎರಡನೇ ಬಾರಿಗೆ ಪ್ರಧಾನಿ ಮೋದಿ ಹಾಗೂ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಒಂದೇ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ.

ಸ್ಥಿರತೆ, ಸುರಕ್ಷತೆ ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಜಿಯೋಸ್ಟ್ರಾಟೆಜಿಕ್ ಬದಲಾವಣೆಗಳು ಜಗತ್ತಿನಲ್ಲಿ ನಡೆಯುತ್ತಿವೆ. ಈ ಮೂರು ಕ್ಷೇತ್ರಗಳಲ್ಲಿ ಬ್ರಿಕ್ಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಮೋದಿ ಹೇಳಿದರು. ಭಯೋತ್ಪಾದನೆ ಕುರಿತು ವಿಚಾರ ಪ್ರಸ್ತಾಪಿಸಿದ ಮೋದಿ, ಭಯೋತ್ಪಾದನೆಯನ್ನು ಪೋಷಿಸುವ ಹಾಗೂ ಬೆಂಬಲಿಸುವ ದೇಶಗಳು ತಪ್ಪಿತಸ್ಥರಾಗಿದ್ದಾರೆ.  ಈ ನಿಟ್ಟಿನಲ್ಲಿ  ಬ್ರಿಕ್ಸ್ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಮೋದಿ ಹೇಳಿದ್ದಾರೆ.