ಬ್ರಿಜ್ ಭೂಷಣ್ ವಿರುದ್ಧ ಐಪಿಸಿ ಸೆಕ್ಷನ್ 354, 354ಎ (ಲೈಂಗಿಕ ಕಿರುಕುಳ) ಮತ್ತು 506 (ಐ) (ಅಪರಾಧ ಬೆದರಿಕೆ) ಅಡಿಯಲ್ಲಿ ಅಪರಾಧಗಳಿಗಾಗಿ ಆರೋಪಗಳನ್ನು ರೂಪಿಸಲು ನ್ಯಾಯಾಲಯವು ಸಾಕಷ್ಟು ಪುರಾವೆಗಳನ್ನು ಕಂಡುಕೊಂಡಿದೆ ಎಂದು ತಿಳಿಸಿದೆ. 

ನವದೆಹಲಿ (ಮೇ. 10): ಐವರು ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ (ಎಂಪಿ) ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ನ್ಯಾಯಾಲಯವು ಶುಕ್ರವಾರ ಲೈಂಗಿಕ ಕಿರುಕುಳ ಮತ್ತು ಮಹಿಳೆಯರ ಘನತೆಗೆ ಧಕ್ಕೆ ತಂದ ಆರೋಪಗಳನ್ನು ಹೊರಿಸಿದೆ. ರೂಸ್ ಅವೆನ್ಯೂ ಕೋರ್ಟ್‌ನ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪ್ರಿಯಾಂಕಾ ರಾಜ್‌ಪೂತ್ ಈ ಆದೇಶ ನೀಡಿದ್ದಾರೆ. "ಆರೋಪಿ ನಂ 1 ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳಿಗಾಗಿ [ಮಹಿಳೆಯರ ಮೇಲಿನ ದೌರ್ಜನ್ಯ] ಮತ್ತು 354A [ಲೈಂಗಿಕ ಕಿರುಕುಳ] ಸಂತ್ರಸ್ತ ನಂ 1 ಗೆ ಸಂಬಂಧಿಸಿದಂತೆ ಆರೋಪಗಳನ್ನು ದಾಖಲಿಸಲು ಸಾಕಷ್ಟು ದಾಖಲೆಗಳಿವೆ' ಎಂದು ಕೋರ್ಟ್‌ ಹೇಳಿದೆ. ಐವರು ಸಂತ್ರಸ್ತೆಯರು ನೀಡಿದ ದೂರಿನ ಆಧಾರದ ಮೇಲೆ ಈ ಕೇಸ್‌ ದಾಖಲು ಮಾಡಬಹುದು ಎಂದಿದೆ.

ಇಬ್ಬರು ಕುಸ್ತಿಪಟುಗಳಿಗೆ ಸಂಬಂಧಿಸಿದಂತೆ ಐಪಿಸಿಯ ಸೆಕ್ಷನ್ 506 (1) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಸಿಂಗ್ ವಿರುದ್ಧ ಆರೋಪಗಳನ್ನು ರೂಪಿಸಲು ಸಾಕಷ್ಟು ದಾಖಲೆಗಳು ದಾಖಲೆಯಲ್ಲಿವೆ ಎಂದು ನ್ಯಾಯಾಧೀಶೆ ರಾಜ್‌ಪೂತ್ ಹೇಳಿದರು. ಆದರೆ, 6ನೇ ಸಂತ್ರಸ್ಥೆ ಹೊರಿಸಿದ ಆರೋಪದ ವಿರುದ್ಧ ಬ್ರಿಜ್‌ಭೂಷಣ್‌ ಸಿಂಗ್‌ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಕೋರ್ಟ್‌ ತಿಳಿಸಿದೆ.

ಮೊದಲ ಸಂತ್ರಸ್ಥೆಯ ವಿರುದ್ಧದ ಅಪರಾಧಕ್ಕಾಗಿ ಸಹ ಆರೋಪಿ ವಿನೋದ್ ತೋಮರ್ ವಿರುದ್ಧ ಕ್ರಿಮಿನಲ್ ಬೆದರಿಕೆಯ ಅಪರಾಧವನ್ನು ನ್ಯಾಯಾಲಯ ಆರೋಪಿಸಿದೆ. "ಎಲ್ಲ ಆರೋಪಿಗಳಿಗೆ ಸಂಬಂಧಿಸಿದಂತೆ ಕುಮ್ಮಕ್ಕು ನೀಡಿದ ಅಪರಾಧದಿಂದ ಅವರನ್ನು ಬಿಡುಗಡೆ ಮಾಡಲಾಗಿದೆ" ಎಂದು ನ್ಯಾಯಾಲಯ ಹೇಳಿದೆ. ತೋಮರ್ ಡಬ್ಲ್ಯುಎಫ್‌ಐನ ಮಾಜಿ ಸಹಾಯಕ ಕಾರ್ಯದರ್ಶಿಯಾಗಿದ್ದಾರೆ.

ಸಿಂಗ್ ವಿರುದ್ಧ ಆರು ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿದ್ದರು. ಅವರ ದೂರುಗಳ ಆಧಾರದ ಮೇಲೆ ಪೊಲೀಸರು ಸಂಸದರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದರು. 2023ರ ಜೂನ್ 15 ರಂದು, ಪೊಲೀಸರು ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 35, , 354A (ಲೈಂಗಿಕ ಟೀಕೆಗಳು), 354D (ಹಿಂಬಾಲಿಸುವಿಕೆ) ಮತ್ತು 506 (1) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಅಪರಾಧಗಳಿಗಾಗಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರುದಾರರು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆ ಬಳಿಕ ದೆಲಿ ಪೊಲೀಸರು ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಅಪ್ರಾಪ್ತ ಕುಸ್ತಿಪಟು ಕೂಡ ಸಿಂಗ್ ವಿರುದ್ಧ ಆರೋಪ ಮಾಡಿದ್ದರು. ನಂತರ ಆಕೆ ತನ್ನ ದೂರನ್ನು ಹಿಂತೆಗೆದುಕೊಂಡಳು ಮತ್ತು ದೆಹಲಿ ಪೊಲೀಸರು ಆ ಪ್ರಕರಣದಲ್ಲಿ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ ಕಾಯಿದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ರದ್ದತಿ ವರದಿಯನ್ನು ಸಲ್ಲಿಸಿದರು.

Uttar Pradesh ಕೈಸರ್‌ಗಂಜ್‌ನಿಂದ ಬ್ರಿಜ್‌ಭೂಷಣ್‌ಗೆ ಟಿಕೆಟ್‌ ಡೌಟ್‌!

ವಿಶೇಷವೆಂದರೆ, ಏಪ್ರಿಲ್ 26 ರಂದು, ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ ಸಿಂಗ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಕುಸ್ತಿಪಟು ಆರೋಪಿಸಿದ ಘಟನೆ ನಡೆದಾಗ ತಾನು ದೆಹಲಿಯಲ್ಲಿ ಇರಲಿಲ್ಲ ಎಂದು ಸಿಂಗ್ ಹೇಳಿದ್ದರು.

ಕುಸ್ತಿ ಸಮಸ್ಯೆ ಪರಿಹರಿಸಿ: ಜಾಗತಿಕ ಸಂಸ್ಥೆಯ ಮೊರೆ ಹೋದ ಭಾರತದ ರೆಸ್ಲರ್ಸ್‌