Asianet Suvarna News Asianet Suvarna News

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಗೆ ಬಿಎಸ್‌ಪಿ ಬೆಂಬಲ

ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್‌ಡಿಎ) ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಶನಿವಾರ ಘೋಷಿಸಿದ್ದಾರೆ.

BSP chief Mayawati says will support NDAs presidential candidate Droupadi akb
Author
Bangalore, First Published Jun 25, 2022, 11:34 AM IST

ಲಕ್ನೋ: ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್‌ಡಿಎ) ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಶನಿವಾರ ಘೋಷಿಸಿದ್ದಾರೆ. ನಾವು ಈ ನಿರ್ಧಾರವನ್ನು ಬಿಜೆಪಿ ಅಥವಾ ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿ ಅಥವಾ ಪ್ರತಿಪಕ್ಷಗಳ ವಿರುದ್ಧವಾಗಿ ತೆಗೆದುಕೊಂಡಿಲ್ಲ . ನಮ್ಮ ಪಕ್ಷದ ಸಿದ್ಧಾಂತ ಮತ್ತು ಚಳುವಳಿಯನ್ನು ಗಮನದಲ್ಲಿಟ್ಟುಕೊಂಡು ದ್ರೌಪದಿ ಅವರನ್ನು ಬೆಂಬಲಿಸುತ್ತಿದ್ದೇವೆ ಎಂದು ಬಿಎಸ್‌ಪಿ ಮುಖ್ಯಸ್ಥರು ಹೇಳಿದ್ದಾರೆ.

ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಪ್ರತಿಪಕ್ಷಗಳು ತಮ್ಮನ್ನು ಸಂಪರ್ಕಿಸಿಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಮಾಯವತಿ ಹೇಳಿದರು. ದ್ರೌಪದಿ ಮರ್ಮು (Droupadi Murmu) ಅವರು ಒಡಿಶಾದ (Odisha) ಬುಡಕಟ್ಟು ಸಮುದಾಯದಿಂದ ಬಂದಿರುವ ಬಿಜೆಪಿ ನಾಯಕರಾಗಿದ್ದಾರೆ. ಅವರನ್ನು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ತನ್ನ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಜಾರ್ಖಂಡ್‌ನ (Jharkhand) ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ  64 ವರ್ಷದ ದ್ರೌಪದಿ ಮರ್ಮು, ಈ ರಾಷ್ಟ್ರಪತಿ ಚುನಾವಣೆಯಲ್ಲಿ ಗೆದ್ದರೆ ಒಡಿಶಾದ ಮೊದಲ ಹಾಗೂ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆಯಾಗಲಿದ್ದಾರೆ.

ಜೆಎಂಎಂ ಹಾಗೂ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ (HD Deve Gowda) ನೇತೃತ್ವದ  ಜಾತ್ಯತೀತ ಜನತಾ ದಳ (ಜೆಡಿಎಸ್‌) ಕೂಡ ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮರ್ಮು ಅವರನ್ನು ಬೆಂಬಲಿಸುವ ಸಾಧ್ಯತೆಯಿದೆ. ಆದರೆ ವಿರೋಧ ಪಕ್ಷವೂ, ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ (Yashwant Sinha) ಅವರನ್ನು ತನ್ನ ಜಂಟಿ ಅಭ್ಯರ್ಥಿ ಎಂದು ಘೋಷಿಸಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ದ್ರೌಪದಿ ರಾಷ್ಟ್ರಪತಿಯಾದರೆ ಪಾಂಡವರು ಯಾರು? ಮುಖ್ಯವಾಗಿ ಕೌರವರು ಯಾರು: RGV ವಿರುದ್ಧ ದೂರು
ಮುರ್ಮು ಶುಕ್ರವಾರ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) , ಎನ್‌ಸಿಪಿ ಅಧ್ಯಕ್ಷ (NCP president) ಶರದ್ ಪವಾರ್ (Sharad Pawar) ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ (West Bengal Chief Minister) ಮಮತಾ ಬ್ಯಾನರ್ಜಿ (Mamata Banerjee) ಸೇರಿದಂತೆ ಕೆಲವು ಪ್ರಮುಖ ವಿರೋಧ ಪಕ್ಷದ ನಾಯಕರಿಗೆ ಕರೆ ಮಾಡಿ ಅವರ ಉಮೇದುವಾರಿಕೆಗೆ ಬೆಂಬಲ ಕೋರಿದರು.

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಪ್ರಧಾನಿ ಮೋದಿ!
 

ಮೂಲಗಳ ಪ್ರಕಾರ, ಮುರ್ಮು, ಈ ಎಲ್ಲಾ ನಾಯಕರನ್ನು  ವೈಯಕ್ತಿಕವಾಗಿ ಕರೆದು ಮೊದಲು ಮಾತನಾಡಿದರು ಹಾಗೂ ಮೂವರು ನಾಯಕರು ಆಕೆಗೆ ಶುಭ ಹಾರೈಸಿದರು ಎಂದು ತಿಳಿದು ಬಂದಿದೆ. ಮುರ್ಮು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮತ್ತು ಅಮಿತ್ ಶಾ (Amit Shah), ರಾಜನಾಥ್ ಸಿಂಗ್ (Rajnath Singh) ಮತ್ತು ನಿತಿನ್ ಗಡ್ಕರಿ (Nitin Gadkari) ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ (JP Nadda) ಸೇರಿದಂತೆ ಕೇಂದ್ರ ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

Follow Us:
Download App:
  • android
  • ios