ಲೋಕಸಭೆಗೆ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ‘ಇಂಡಿಯಾ’ ಒಕ್ಕೂಟಕ್ಕೆ ಮಾಯಾವತಿ ಶಾಕ್
ಏಪ್ರಿಲ್ - ಮೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಬಿಎಸ್‌ಪಿ ಸ್ಪರ್ಧಿಸಲಿದೆ. ಚುನಾವಣೆಯ ನಂತರ ಮೈತ್ರಿಯ ಬಗ್ಗೆ ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಮಾಯಾವತಿ ಹೇಳಿದರು.
ಲಖನೌ (ಜನವರಿ 16, 2024): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ವರಿಷ್ಠೆ ಮಾಯಾವತಿ ಹೇಳಿದ್ದಾರೆ. ಇದು ಉತ್ತರಪ್ರದೇಶದಲ್ಲಿ ಎಸ್‌ಪಿ ಮತ್ತು ಬಿಎಸ್‌ಪಿ ಪಕ್ಷಗಳನ್ನು ಜೊತೆಗೂಡಿಸಿಕೊಂಡು ಚುನಾವಣಾ ಕಣಕ್ಕೆ ಇಳಿಯಲು ಉದ್ದೇಶಿಸಿದ್ದ ಇಂಡಿಯಾ ಮೈತ್ರಿಕೂಟದ ನಾಯಕರಿಗೆ ಬಹುದೊಡ್ಡ ಶಾಕ್ ನೀಡಿದೆ.
ಸೋಮವಾರ ಇಲ್ಲಿ ತಮ್ಮ ಜನ್ಮದಿನದ ಕಾರ್ಯಕ್ರಮದ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ, ಮಾಯಾವತಿ, ‘ರಾಜಕೀಯದಿಂದ ತಾವು ನಿವೃತ್ತಿಯಾಗುವ ಮಾಧ್ಯಮಗಳ ವರದಿಯನ್ನು ತಳ್ಳಿಹಾಕಿದರು. ಏಪ್ರಿಲ್ - ಮೇ ತಿಂಗಳಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಬಿಎಸ್‌ಪಿ ಸ್ಪರ್ಧಿಸಲಿದೆ. ಚುನಾವಣೆಯ ನಂತರ ಮೈತ್ರಿಯ ಬಗ್ಗೆ ಗಣನೆಗೆ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.
ದೇಶದಲ್ಲಿ 25 ಕೋಟಿ ಜನರು ಬಡತನಮುಕ್ತ! 9 ವರ್ಷದಲ್ಲಿ ಸಾಧನೆ
ಶಿಂಧೆ ಬಣ ನಿಜ ಶಿವಸೇನೆ: ಸ್ಪೀಕರ್ ತೀರ್ಪು ಪ್ರಶ್ನಿಸಿ ಉದ್ಧವ್ ಸುಪ್ರೀಂಗೆ
ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ನಿರ್ಣಯ ಹೊರಡಿಸಿದ್ದ ಮಹಾರಾಷ್ಟ್ರ ಸ್ಪೀಕರ್ ಆದೇಶ ಪ್ರಶ್ನಿಸಿ ಉದ್ಧವ್ ಬಣ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜನವರಿ 10 ರಂದು ನೀಡಿದ ಆದೇಶದಲ್ಲಿ ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್, ‘ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕನಾಥ್ ಶಿಂದೆ ಬಣವೇ ನಿಜವಾದ ಶಿವಸೇನೆ ಪಕ್ಷ’ ಎಂದು ತೀರ್ಪು ನೀಡಿದ್ದರು.
ಅಲ್ಲದೆ ಶಿಂಧೆ ಬಣದ 16 ಶಾಸಕರನ್ನು ಅನರ್ಹ ಮಾಡಬೇಕೆಂಬ ಉದ್ಧವ್ ಬಣದ ಮನವಿಯನ್ನು ತಿರಸ್ಕರಿಸಿದ್ದರು. ಹೀಗಾಗಿ ಆದೇಶ ಪ್ರಶ್ನಿಸಿ ಉದ್ಧವ್ ಬಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಮತ್ತೊಮ್ಮೆ ಮೋದಿ: ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಜೆ.ಪಿ. ನಡ್ಡಾ ಚಾಲನೆ; ರಾಜ್ಯದಲ್ಲೂ ಶುರು