ಫಿಟ್ನೆಸ್‌ಗಾಗಿ ಯೋಗ, ಜಿಮ್ ಸೇರಿದಂತೆ ಹಲವು ವಿಧಾನಗಳನ್ನು ಜನರು ಅನಸರಿಸುತ್ತಾರೆ. ಖ್ಯಾತ ಉದ್ಯಮಿಯೊಬ್ಬರು ಪ್ರತಿ ದಿನ ಜುಂಬಾ ಡ್ಯಾನ್ಸ್ ಮೂಲಕ ಫಿಟ್ನೆಸ್ ಕಾಪಾಡಿಕೊಳ್ಳುತ್ತಾ ಬಂದಿದ್ದಾರೆ. ಆದರೆ ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಾವಿನ ಕೊನೆಯ ಕ್ಷಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮುಂಬೈ(ಜು.22) ಫಿಟ್ನೆಸ್ ಕಾಪಾಡಿಕೊಳ್ಳಲು ಹಲವರು ಜುಂಬಾ ಡ್ಯಾನ್ಸ್ ಮೊರೆ ಹೋಗುತ್ತಾರೆ. ಪ್ರತಿ ದಿನ ಜುಂಬಾ ಡ್ಯಾನ್ಸ್ ಕ್ಲಾಸ್‌ಗೆ ತೆರಳಿ ಬೆವರು ಹರಿಸುತ್ತಾರೆ. ಹೀಗೆ ಮಹಾರಾಷ್ಟ್ರದ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಫಿಟ್ನೆಸ್‌ಗಾಗಿ ಪ್ರತಿ ದಿನ ಜುಂಬಾ ಕ್ಲಾಸ್‌ಗೆ ತೆರಳಿ ಡ್ಯಾನ್ಸ್ ಮಾಡುತ್ತಾ ಬೆವರು ಹರಿಸುತ್ತಾರೆ. ಇಂದು ಬೆಳಗ್ಗೆ ಜುಂಬಾ ಡ್ಯಾನ್ಸ್ ಮಾಡುತ್ತಿದ್ದಂತೆ ಉದ್ಯಮಿ ಕವಲ್ಜಿತ್ ಸಿಂಗ್ ಬಗ್ಗಾ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಉದ್ಯಮಿ ಬದುಕುಳಿಯಲಿಲ್ಲ.
ಛತ್ರಪತಿ ಸಂಭಾಜಿನಗರದ ನಿವಾಸಿಯಾಗಿರುವ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರತಿದಿನ ಜುಂಬಾ ಡ್ಯಾನ್ಸ್ ಮಾಡುತ್ತಾರೆ. ಎಂದಿನಂತೆ ಇಂದೂ ಕೂಡ ಅವಲ್ಜಿತ್ ಸಿಂಗ್ ಬಾಗ್ಗಾ ಜುಂಬಾ ಡ್ಯಾನ್ಸ್‌ಗೆ ತೆರಳಿದ್ದಾರೆ. ಅವಲ್ಜಿತ್ ಸಿಂಗ್ ರೀತಿಯಲ್ಲಿ ಇತರ ಕೆಲವರು ಜುಂಬಾ ಡ್ಯಾನ್ಸ್ ಮಾಡುತ್ತಿದ್ದಾರೆ. ಜುಂಬಾ ಕ್ಲಾಸ್ ತೆರಳಿ 15 ನಿಮಿಷಗಳ ಕಾಲ ಡ್ಯಾನ್ಸ್ ಮಾಡಿದ್ದಾರೆ. ಹಲವರು ಇದೇ ಕ್ಲಾಸ್‌ನಲ್ಲಿ ಅವಲ್ಜಿತ್ ಸಿಂಗ್ ಜೊತೆ ಡ್ಯಾನ್ಸ್ ಮಾಡಿದ್ದಾರೆ.
ಗೆಳೆಯರೊಂದಿಗೆ ಸ್ನೂಕರ್ ಆಡುವಾಗಲೇ ಯುವಕನಿಗೆ ಹೃದಯಾಘಾತ; ಸ್ಥಳದಲ್ಲೇ ಹಾರಿಹೋಯ್ತು ಪ್ರಾಣಪಕ್ಷಿ!
ಕೊನೆಯ ಸಾಲಿನ ಬದಿಯಲ್ಲಿದ್ದ ಅವಲ್ಜಿತ್ ಸಿಂಗ್ ಡ್ಯಾನ್ಸ್ ಮಾಡುತ್ತಿದ್ದಂತೆ ಹೃದಯಾಘಾತವಾಗಿದೆ. ಡ್ಯಾನ್ಸ್ ಮಾಡಲು ಸಾಧ್ಯವಾಗದೆ ನಿಂತಿದ್ದಾರೆ. ಚೇತರಿಸಿಕೊಳ್ಳಲು ಕೆಲ ಕ್ಷಣ ನಿಂತಿದ್ದಾರೆ. ಇತರರು ಡ್ಯಾನ್ಸ್‌ನಲ್ಲಿ ತಲ್ಲೀನರಾಗಿದ್ದರು. ಆದರೆ ಅವಲ್ಜಿತ್ ಸಿಂಗ್ ಚೇತರಿಸಿಕೊಳ್ಳಲಿಲ್ಲ. ಕಾರಣ ತೀವ್ರ ಹೃದಯಾಘಾತದಿಂದ ಅವಲ್ಜಿತ್ ಕುಸಿದಿದ್ದಾರೆ. ಈ ವೇಳೆ ಮೆಲ್ಲನೆ ಕುಳಿತುಕೊಳ್ಳಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಿಲ್ಲ. ಅವಲ್ಜಿತ್ ಸಿಂಗ್ ಕುಸಿದು ಬೀಳುತ್ತಿದ್ದಂತೆ ಇತರರು ತಕ್ಷಣವೇ ನೆರವಿಗೆ ಧಾವಿಸಿದ್ದಾರೆ. ನೀರು ತಂದು ಕುಡಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಯಾವುದಕ್ಕೂ ಅವಲ್ಜಿತ್ ಸಿಂಗ್ ಸ್ಪಂದಿಸಿಲ್ಲ.
ಅವಲ್ಜಿತ್ ಎತ್ತಿಕೊಂಡು ವಾಹನದ ಮೂಲಕ ಆಸ್ಪತ್ರೆ ದಾಖಲಿಸಿದ್ದಾರೆ. ಆಸ್ಪತ್ರೆ ದಾಖಲಿಸುವ ಮೊದಲೇ ಅವಲ್ಜಿತ್ ಸಿಂಗ್ ಬಾಗ್ಗಾ ಪ್ರಾಣ ಪಕ್ಷಿ ಹಾರಿಹೋಗಿದೆ. ತಪಾಸಣೆ ನಡೆಸಿದ ವೈದ್ಯರು ಅವಲ್ಜಿತ್ ಸಿಂಗ್ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.
ಜಿಮ್ ಅಭ್ಯಾಸದ ವೇಳೆ ಈ ರೀತಿ ಹೃದಯಾಘಾತಕ್ಕೆ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಗೆ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಈ ಬೆಳವಣಿಗೆ ನಡುವೆ ಇದೀಗ ಉದ್ಯಮಿ ಅವಲ್ಜಿತ್ ಸಿಂಗ್ ಬಾಗ್ಗಾ ನಿಧನ ಸುದ್ದಿ ಆತಂಕ ಹೆಚ್ಚಿಸಿದೆ. ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದ ಕವಲ್ಜಿತ್ ಸಿಂಗ್ ದಿಢೀರ್ ನಿಧನ ಇದೀಗ ಮತ್ತೆ ಹಲವು ಚರ್ಚೆಗಳಿಗೆ ಗ್ರಾಸವಾಗಿದೆ.
33 ಕೋಟಿ ಗೆದ್ದವನಿಗೆ ಒಂದು ರೂ ಅನುಭವಿಸೋ ಯೋಗ ಇಲ್ಲ: ಲಾಟರಿ ಗೆಲ್ಲುತ್ತಿದ್ದಂತೆ ಎಳೆದೊಯ್ದ ಜವರಾಯ
