Asianet Suvarna News Asianet Suvarna News

ಸಿಎಎ ಜಾರಿ ಸಿದ್ಧ, 3 ತಿಂಗಳಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬದ್ಧ: ಅಮಿತ್ ಶಾ!

ಸಿಎಎ ಜಾರಿ ನಿರ್ಣಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ಅಮಿತ್ ಶಾ| ವಿರೋಧಿಗಳು ಬಹಿರಂಗ ಚರ್ಚೆಗೆ ಬರಲಿ ಎಂದು ಶಾ ಸವಾಲು| ಕಾಂಗ್ರೆಸ್‌ನಿಂದ ವೋಟ್ ಬ್ಯಾಂಕ್ ರಾಜಕಾರಣ ಎಂದು ಆರೋಪಿಸಿದ ಗೃಹ ಸಚಿವ| ಮೂರು ತಿಂಗಳಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಭರವಸೆ ನೀಡಿದ ಶಾ|

CAA Will Stay Says Union Home Minister Amit Shah
Author
Bengaluru, First Published Jan 21, 2020, 7:58 PM IST

ಲಕ್ನೋ(ಜ.21): ಎಷ್ಟೇ ವಿರೋಧವಿದ್ದರೂ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿ ಮಾಡಿಯೇ ಸಿದ್ಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಲಕ್ನೋದಲ್ಲಿ ಸಿಎಎ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿಎಎ ಜಾರಿಯಿಂದ ದೇಶಕ್ಕೆ ಒಳಿತಾಗಲಿದೆ ಎಂದು ಹೇಳಿದರು.

60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ಕೆಲಸವನ್ನು ಮಾಡಿತ್ತು. ಅಲ್ಪಸಂಖ್ಯಾತರನ್ನು ತಮ್ಮ ವೋಟ್ ಬ್ಯಾಂಕ್ ಆಗಿ ಮಾಡಿಕೊಂಡು ಮತ್ತೊಂದು ವರ್ಗವನ್ನು ತಿರಸ್ಕರಿಸಿತ್ತು. ಆದರೆ ಬಿಜೆಪಿ ಎಲ್ಲ ಸಮುದಾಯವನ್ನು ಸಮಾನವಾಗಿ ಕಾಣುತ್ತಿದೆ ಎಂದು ಈ ವೇಳೆ ಅಮಿತ್ ಶಾ ಹೇಳಿದರು.

ಭಾರತಕ್ಕೆ ಸಿಎಎ ಅಗತ್ಯವೇ ಇರಲಿಲ್ಲ: ಬಾಂಗ್ಲಾ ಪ್ರಧಾನಿ

ಸಿಎಎ ವಿರೋಧಿಸುವವರು ಅದರ ವಿರುದ್ಧ ಆಧಾರರಹಿತ ವದಂತಿ ಹರಡುತ್ತಿದ್ದಾರೆ ಎಂದು ಗುಡುಗಿದ ಶಾ, ಸಿಎಎ ಯಾವುದೇ ವ್ಯಕ್ತಿಯ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ ಎಂದು ಮತ್ತೆ ಭರವಸೆ ನೀಡಿದರು. ಸಿಎಎ ವಿರೋಧಿಸುವವರು ತಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಶಾ ವಿಪಕ್ಷಗಳಿಗೆ ಸವಾಲು ಹಾಕಿದರು.

ಇದೇ ವೇಳೆ ರಾಮ ಮಂದಿರ ನಿರ್ಮಾಣ ಕುರಿತಾಗಿ ಮಾತನಾಡಿದ ಅಮಿತ್ ಶಾ, ಸುಪ್ರೀಂಕೋರ್ಟ್ ತೀರ್ಪಿನಂತೆ ಇನ್ನು 3 ತಿಂಗಳಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಶತಸಿದ್ಧ ಎಂದು ಭರವಸೆ ನೀಡಿದರು.

Follow Us:
Download App:
  • android
  • ios