ಗುವಹಾಟಿ(ಡಿ.12): ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಹಿಂಸಾರೂಪ ತಾಳಿದೆ.

ನೀವ್ಯಾರೂ ಹೆದರಬೇಕಿಲ್ಲ: ಈಶಾನ್ಯ ಜನತೆಗೆ ಮೋದಿ ಭರವಸೆ!

ಅಸ್ಸಾಂನಲ್ಲಿ ಪ್ರತಿಭಟನಾಕಾರರು ಕೇಂದ್ರ ಸಚಿವರ ಮನೆ ಮೇಲೆ ದಾಳಿ ಮಾಡಿದ್ದು, ಪೀಠೋಪಕರಣ ಧ್ವಂಸಗೊಳಿಸಿದ್ದಾರೆ.

ದಿಬ್ರುಗಡ್’ನ ದುಲಿಯಾಜನ್ ಪ್ರದೇಶದಲ್ಲಿರುವ ಸಂಸದ ಮತ್ತು ಕೇಂದ್ರ ಆಹಾರ ಸಂಸ್ಕರಣಾ ರಾಜ್ಯ ಸಚಿವರಾದ ರಾಮೇಶ್ವರ್ ತೇಲಿ ನಿವಾಸದ ಮೇಲೆ ಪ್ರತಿಭಟನಾಕಾರರು ದಾಳಿ ಮಾಡಿದ್ದಾರೆ. 

CAB ಅಪಾಯಕಾರಿ: ಮಸೂದೆ ವಿರೋಧಿಸಿ ಕೆಲಸ ಬಿಟ್ಟ ಐಪಿಎಸ್ ಅಧಿಕಾರಿ!

ರಾಮೇಶ್ವರ್ ತೇಲಿ ಮನೆಗೆ ನುಗ್ಗಿದ ಪ್ರತಿಭಟನಾಕಾರರು, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದು, ಮನೆ ಅವರಣದಲ್ಲಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮೊದಲು ಅಸ್ಸಾಂ ಸಿಎಂ ಸರ್ಬಾನಂದ ಸೋನಾವಾಲ್ ದಿಬ್ರುಘಡ್ ನಿವಾಸದ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ಮಾಡಿದ್ದರು.

ಸಿಎಂ ಮನೆಗೆ ಕಲ್ಲು, ರೈಲ್ವೆ ನಿಲ್ದಾಣಕ್ಕೆ ಬೆಂಕಿ: ಪೌರತ್ವ ಮಸೂದೆ ವಿರುದ್ಧ ಸಿಡಿದ ಈಶಾನ್ಯ 

ಅಲ್ಲದೇ ಬಿಜೆಪಿ ಶಾಸಕ ಪ್ರಶಾಂತ ಫುಕನ್ ಮತ್ತು ಬಿಜೆಪಿ ಮುಖಂಡ ಸುಭಾಷ್ ದತ್ತಾ ಅವರ ಮನೆ ಮೇಲೂ ಪ್ರತಿಭಟನಾಕಾರರು ದಾಳಿ ಮಾಡಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು.

ಡಿಸೆಂಬರ್ 12ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ