Asianet Suvarna News

ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿ ಕೇಂದ್ರ ಸಚಿವರ ಜೊತೆ ಮೋದಿ ಮಹತ್ವ ಸಭೆ!

  • ಕೇಂದ್ರ ಹಿರಿಯ ಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ
  • ಸಚಿವ ಸಂಪುಟ ವಿಸ್ತರಣೆ ಮಾತುಗಳ ನಡುವೆ ಮೋದಿ ಮಹತ್ವದ ಸಭೆ
Cabinet expansion speculation PM modi chaired a meeting with Union ministers ckm
Author
Bengaluru, First Published Jun 20, 2021, 8:05 PM IST
  • Facebook
  • Twitter
  • Whatsapp

ನವದೆಹಲಿ(ಜೂ.20): ಸಂಪುಟ ವಿಸ್ತರಣೆ ಊಹಾಪೋಹದ ನಡುವೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಿದ್ದಾರೆ. ಪ್ರದಾನಿ ಮೋದಿ ಅಧೀಕೃತ ನಿವಾಸ  ಲೋಕ ಕಲ್ಯಾಣ ಮಾರ್ಗದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಿರಿಯ ಸಚಿವರು ಪಾಲ್ಗೊಂಡಿದ್ದರು.

25 ಸಂಸದರೊಂದಿಗೆ ಅಮಿತ್ ಶಾ ಮಹತ್ವದ ಸಭೆ; ಸಂಪುಟ ವಿಸ್ತರಣೆ ಸಾಧ್ಯತೆ!

ಸಂಪುಟ ವಿಸ್ತರಣೆ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಈ ಸಭೆ ತೀವ್ರ ಕುತೂಹಲ ಕೆರಳಿಸಿದೆ.  ಯುವ ನಾಯಕರಿಗೆ ಅವಕಾಶ ನೀಡಲಾಗುತ್ತದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಆದರೆ ಸಭೆ ಕುರಿತು ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಅಮಿತ್ ಶಾ, ರಾಜನಾಥ್ ಸಿಂಗ್ ಜೊತೆ ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. 

ಕಳೆದ ಒಂದು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸಚಿವರೊಂದಿಗೆ ನಡೆಸಿದ 6ನೇ ಸಭೆ ಇದಾಗಿದೆ. ಪಿಎಂ ಮೋದಿ  ಕಳೆದ ಒಂದು ವಾರದಿಂದ ಕೇಂದ್ರ ಸಚಿವರೊಂದಿಗೆ ವೈಯಕ್ತಿಕವಾಗಿ ಸಭೆ ನಡೆಸಿದ್ದಾರೆ.  ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದರು.

Follow Us:
Download App:
  • android
  • ios