ಮೋದಿ ಸಂಪುಟ ಸೇರಿಕೊಂಡ ರಾಜೀವ್ ಚಂದ್ರಶೇಖರ್ ಕರ್ನಾಟಕದಿಂದ ನಾಲ್ವರು ಸಚಿವರು ಮೋದಿ ಟೀಮ್ ಸೇರ್ಪಡೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ

ನವದೆಹಲಿ(ಜು.07): ಪ್ರಧಾನಿ ಮೋದಿ ಸಂಪುಟ ಪುನಾರಚನೆಯಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ರಾಜೀವ್ ಚಂದ್ರಶೇಖರ್ ಮೊದಲನೆ ಬಾರಿಗೆ ಸಚಿವರಾಗಿ ಬಡ್ತಿ ಪಡೆದಿದ್ದಾರೆ.

"

ಸಂಪುಟ ಪುನಾರಚನೆ: ನಾರಾಯಾಣ ರಾಣೆ to ಸಿಂಧಿಯಾ, ಪ್ರಮಾಣ ವಚನ ಸ್ವೀಕರಿಸಿದ ಪ್ರಮುಖರು!

ರಾಜೀವ್ ಚಂದ್ರಶೇಖರ್ ಕರ್ನಾಟಕದಿಂದ ಮೊದಲನೆಯವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇವರ ಹೆಸರಿನಲ್ಲಿ ರಾಜೀವ್ ಚಂದ್ರಶೇಕರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಜೀವ್ ಅವರಿಗೆ ಪ್ರತಿಜ್ಞಾವಿಧಿ ಭೋಧಿಸಿದರು.

Scroll to load tweet…

ರಾಜೀವ್ ಬಳಿಕ ಸಂಸದೆ ಶೋಭಾ ಕರಂದ್ಲಾಜೆ ಪ್ರಮಾಣ ವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಶೋಭಾ ಪ್ರಮಾಣ ವಚನ ಸ್ವೀಕರಿಸಿದರು. ಶೋಭಾ ಕರಾಂದ್ಲಾಜೆ ಕೂಡ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಬಡ್ತಿ ಪಡೆದಿದ್ದಾರೆ.

ಇನ್ನು ಚಿತ್ರದುರ್ಗದ ಸಂಸದ ಅನೇಕಲ್ ನಾರಾಯಣ ಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕರ್ನಾಟದಿಂದ ಮೂರನೇಯವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ನಾಲ್ಕನೇಯವರಾಗಿ ಭಗವಂತ್ ಖೂಬಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.