Asianet Suvarna News Asianet Suvarna News

ಮಾಜಿ ಸಿಎಂ ಷರತ್ತಿಗೆ ಒಪ್ಪಿದ ಬಿಜೆಪಿ, ಮೈತ್ರಿಗೆ ಸಿದ್ಧ!

* ಅಮರೀಂದರ್‌ ಜೊತೆ ಮೈತ್ರಿಗೆ ಸಿದ್ಧ: ಬಿಜೆಪಿ

* ಕ್ಯಾಪ್ಟನ್‌ ದೇಶಭಕ್ತ: ಪಂಜಾಬ್‌ ಬಿಜೆಪಿ ಪ್ರಭಾರಿ ಹೊಗಳಿಕೆ

* ಮಾತುಕತೆ ಮೂಲಕ ರೈತರ ಸಮಸ್ಯೆ ಇತ್ಯರ್ಥಕ್ಕೆ ಸಿದ್ಧ

Captain Amarinder Singh nationalist open to alliance with him BJP pod
Author
Bangalore, First Published Oct 21, 2021, 9:22 AM IST

ನವದೆಹಲಿ(ಅ.21):: ಪಂಜಾಬ್‌ನ(Punjab) ಮಾಜಿ ಮುಖ್ಯಮಂತ್ರಿ ಕ್ಯಾ| ಅಮರಿಂದರ್‌ ಸಿಂಗ್‌(Amarinder Singh) ಹೊಸ ಪಕ್ಷ ಕಟ್ಟುವುದಾಗಿ ಘೋಷಿಸಿದ ಬೆನ್ನಲ್ಲೇ, ‘ಅವರೊಂದಿಗೆ ಮೈತ್ರಿ ಮಾಡಿಕೊಳ್ಳು ಸಿದ್ಧ’ ಎಂದು ಬಿಜೆಪಿ(BJP) ಹೇಳಿದೆ ಹಾಗೂ ಅವರನ್ನು ‘ದೇಶಭಕ್ತ’(Nationalist) ಎಂದು ಹೊಗಳಿದೆ.

ಕ್ಯಾಪ್ಟನ್‌ ಘೋಷಣೆ ಬಗ್ಗೆ ಬುಧವಾರ ಮಾತನಾಡಿದ ಪಂಜಾಬ್‌ ಬಿಜೆಪಿ(BJP) ಉಸ್ತುವಾರಿ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್‌ ಗೌತಮ್‌, ‘ಅಮರೀಂದರ್‌ ಸಿಂಗ್‌ ದೇಶಭಕ್ತರಾಗಿದ್ದು, ದೇಶ ಮೊದಲು ಎನ್ನುವ ಎಲ್ಲರನ್ನೂ ಮೈತ್ರಿಕೂಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಸಿದ್ಧವಿದೆ’ ಎಂದರು.

ಬಿಜೆಪಿ ಜೊತೆ ಮೈತ್ರಿಗೆ ಸಿದ್ಧ, ಷರತ್ತು ಅನ್ವಯ: ಮಾಜಿ ಸಿಎಂ ಘೋಷಣೆ!

ಇನ್ನು ರೈತರ ಸಮಸ್ಯೆಗಳನ್ನು ಬಿಜೆಪಿ ಪರಿಹರಿಸಿದರೆ ಬಿಜೆಪಿ ಜೊತೆ ಸೇರುವುದಾಗಿ ಅಮರೀಂದರ್‌ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಗೌತಮ್‌, ‘ಅವರು ರೈತರ ಸಮಸ್ಯೆಗಳನ್ನು ಪರಿಹರಿಸಲು ಕೇಳಿದ್ದಾರೆ. ಇದಕ್ಕಾಗಿ ಅವರೊಂದಿಗೆ ಕುಳಿತು ಮಾತನಾಡಿ ಸಮಸ್ಯೆ ಪರಿಹರಿಸಲಾಗುವುದು. ಅಮರಿಂದರ್‌ ಮುಖ್ಯ ಮಂತ್ರಿಯಾಗುವ ಮೊದಲು ಸೈನಿಕರಾಗಿದ್ದರು ಹಾಗಾಗಿ ಅವರು ದೇಶ ಮೊದಲು ಎನ್ನುವ ಭಾವನೆಯನ್ನು ಹೊಂದಿದ್ದಾರೆ. ಬಿಜೆಪಿಯು ಸಹ ದೇಶ ಮೊದಲು ಎನ್ನುವ ತತ್ವದ ಮೇಲೆ ಕೆಲಸ ಮಾಡುತ್ತದೆ. ಹಾಗಾಗಿ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇವೆ’ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಗರಂ:

ಪಂಜಾಬ್‌ ಕಾಂಗ್ರೆಸ್‌ ಪ್ರಭಾರಿ ಹರೀಶ್‌ ರಾವತ್‌ ಪ್ರತಿಕ್ರಿಯಿಸಿ, ‘ಅಮರೀಂದರ್‌ ಅವರದ್ದು ಅತಿ ಕೆಟ್ಟನಿರ್ಧಾರ’ ಎಂದು ಟೀಕಿಸಿದ್ದಾರೆ. ‘ಅವರ ಈ ನಿರ್ಧಾರದಿಂದಾಗಿ ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಮತದಾರರು ಚೆನ್ನಿ ಸರ್ಕಾರದ ಕೆಲಸವನ್ನು ಗಮನಿಸಿ ಮತ ಹಾಕಲಿದ್ದಾರೆ. ಉತ್ತಮ ಸ್ಥಾನದಲ್ಲಿದ್ದ ಅಮರಿಂದರ್‌ ಅವರ ಈ ನಿರ್ಧಾರ ಅತ್ಯಂತ ಕೆಳಮಟ್ಟದ್ದು’ ಎಂದು ಹೇಳಿದ್ದಾರೆ.

‘ಅಮರಿಂದರ್‌ ಅವರ ಈ ನಿರ್ಧಾರ ಅವರ ರಾಜಕೀಯ ಜೀವನವನ್ನು ನಾಶ ಮಾಡುತ್ತದೆ. ಒತ್ತಡಕ್ಕೆ ಸಿಲುಕಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಅವರ ಹೊಸ ಪಕ್ಷದಿಂದ ಕಾಂಗ್ರೆಸ್‌ಗೆ ನಷ್ಟವಿಲ್ಲ’ ಎಂದು ಪಂಜಾಬ್‌ ಉಪ ಮುಖ್ಯಮಂತ್ರಿ ಸುಖ್‌ಜಿಂದರ್‌ ಸಿಂಗ್‌ ರಂಧಾವಾ ಹೇಳಿದ್ದಾರೆ.

* ಕ್ಯಾ.ಅಮರೀಂದರ್‌ರಿಂದ ಪಂಜಾಬ್‌ ವಿಕಾಸ್‌ ಪಕ್ಷ

ಕಾಂಗ್ರೆಸ್‌ಗೆ ವಿದಾಯ ಹೇಳುವುದಾಗಿ ಈಗಾಗಲೇ ಘೋಷಿಸಿರುವ ಪಂಜಾಬ್‌ನ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕ್ಯಾ.ಅಮರೀಂದರ್‌ಸಿಂಗ್‌(Amarinder Singh), ಶೀಘ್ರವೇ ಹೊಸ ಪಕ್ಷವೊಂದನ್ನು ರಚಿಸಲಿದ್ದರೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಪಕ್ಷದ ಹೆಸರು ಪಂಜಾಬ್‌ ವಿಕಾಸ್‌ ಪಕ್ಷ(Punjab Vikas Party) ಎಂದಾಗಿರಲಿದೆ ಎನ್ನಲಾಗಿದೆ.

ಅಮರೀಂದರ್‌ ಸಿಂಗ್‌, ಬಿಜೆಪಿ(BJP) ಸೇರುವ ವದಂತಿ ಇತ್ತಾದರೂ ಅದನ್ನು ಅವರೇ ಸ್ಪಷ್ಟವಾಗಿ ತಳ್ಳಿಹಾಕಿದ್ದರು. ತಕ್ಷಣಕ್ಕೆ ಬಿಜೆಪಿ ಸೇರುವುದು ತಮ್ಮ ಮೂಲ ಉದ್ದೇಶವನ್ನಾ ಹಾಳು ಮಾಡುವ ಸಾಧ್ಯತೆ ಇರುವ ಕಾರಣ ಹೊಸ ಪಕ್ಷ ಸ್ಥಾಪನೆಯೇ ಸೂಕ್ತ ಎಂಬ ನಿರ್ಧಾರಕ್ಕೆ ಸಿಂಗ್‌ ಬಂದಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ, ಹಾಲಿ ಕಾಂಗ್ರೆಸ್‌ ಘಟಕದ ಅಧ್ಯಕ್ಷ ನವಜೋತ್‌ಸಿಂಗ್‌ ಸಿಧು(Navjot Singh Sidhu) ಸೇರಿದಂತೆ ಹಲವು ನಾಯಕರ ಮೇಲೆ ಅಮರೀಂದರ್‌ ಹಲ್ಲು ಮಸೆಯುತ್ತಿದ್ದಾರೆ. ಅವರನ್ನೆಲ್ಲಾ, 2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸುವುದು ಅವರ ಪ್ರಮುಖ ಗುರಿ. ಈ ಗುರಿ ಈಡೇರಿಸಲು ಬಿಜೆಪಿ ಸೇರ್ಪಡೆಗಿಂತ ಹೊಸ ಪಕ್ಷವೇ ಮುಖ್ಯ ಎಂಬುದು ಸಿಂಗ್‌ರ ಸದ್ಯದ ಲೆಕ್ಕಾಚಾರ.

ಈಗಾಗಲೇ ಹೊಸ ಪಕ್ಷ ಸ್ಥಾಪನೆ ಕುರಿತು ಅಂತಿಮ ನಿರ್ಧಾರಕ್ಕೆ ಬರಲಾಗಿದೆ. ಈ ಕುರಿತು ಇನ್ನೊಂದು ಸುತ್ತಿನಲ್ಲಿ ತಮ್ಮ ಆಪ್ತರ ಜೊತೆ ಸಮಾಲೋಚನೆ ಬಳಿಕ ಸಿಂಗ್‌ ಅವರು ಅಧಿಕೃತವಾಗಿ ಪಕ್ಷ ರಚನೆಯ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಅಲ್ಲದೆ ರಾಜ್ಯದಲ್ಲಿರುವ ಎಲ್ಲಾ ರೈತ ಮುಖಂಡರ ಜತೆಗೂ ಸಿಂಗ್‌ ಅವರು ಸಂಪರ್ಕ ಸಾಧಿಸಲಿದ್ದು, ಸಣ್ಣ ಪಕ್ಷಗಳ ಜತೆಗೂ ಮೈತ್ರಿ ಮಾಡಿಕೊಳ್ಳುವ ಇರಾದೆ ಕ್ಯಾ. ಸಿಂಗ್‌ ಅವರಿಗೆ ಇದೆ ಎನ್ನಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮುಖಾಂತರ ಸಿಧು ಅವರನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಸಿಂಗ್‌ ಗುಡುಗಿದ್ದರು.

Follow Us:
Download App:
  • android
  • ios